ಅಪಘಾತಕ್ಕೆ ತುತ್ತಾದ ಆಟೋ-ಲಾರಿ; ಇಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು ಗೊತ್ತಾ?

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಈ ರಸ್ತೆ ಅಪಘಾತಕ್ಕೆ ಟ್ವಿಸ್ಟ್ ಸಿಕ್ಕಿದೆ.

ಅಪಘಾತಕ್ಕೆ ತುತ್ತಾದ ಆಟೋ-ಲಾರಿ; ಇಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು ಗೊತ್ತಾ?
ಅಪಘಾತಕ್ಕೆ ತುತ್ತಾದ ಆಟೋ-ಲಾರಿ; ಇಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು ಗೊತ್ತಾ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 26, 2022 | 5:46 PM

ಆಂಧ್ರ ಪ್ರದೇಶ ಅಪರಾಧ ಸುದ್ದಿ: ಅಪರೂಪದ, ರಕ್ಷಿತ ವನ್ಯಜೀವಿಗಳನ್ನು ಯಾರ ಕಣ್ಣಿಗೂ ಬೀಳದಂತೆ ಗಪ್​ ಚುಪ್​ ಅಂತಾ ಗಡಿದಾಟಿಸುವುದಕ್ಕೆ ಅವರು ಸ್ಕೆಚ್​ ಹಾಕಿದ್ದರು. ದುಷ್ಕರ್ಮಿಗಳು ಹೀಗೆ ಅಪಾರ ಸಂಖ್ಯೆಯಲ್ಲಿ ಆಗಾಗ ರಕ್ಷಿತ ವನ್ಯಜೀವಿಗಳ ಕಳ್ಳಸಾಗಣೆಯಲ್ಲಿ ತೊಡಗಿರುತ್ತಾರೆ ಎಂಬುದು ಖೇದಕರ ಸಂಗತಿ. ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಈ ರಸ್ತೆ ಅಪಘಾತಕ್ಕೆ ಟ್ವಿಸ್ಟ್ ಸಿಕ್ಕಿದೆ.

ಇತ್ತೀಚೆಗೆ ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ (konaseema district) ಮುಮ್ಮಿಡಿವರಂ ಬಳಿ ನಡೆದ ರಸ್ತೆ ಅಪಘಾತದಲ್ಲಿ ಅಕ್ರಮವಾಗಿ ನಕ್ಷತ್ರ ಆಮೆ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿದೆ. ಕಾಟ್ರೇನಿಕೋಣ ಮಂಡಲದ (Katrenikona Mandal) ಅಗ್ರಹಾರದಲ್ಲಿ ಅಮಲಾಪುರ ಕಡೆಗೆ ಹೋಗುತ್ತಿದ್ದ ಆಟೋಗೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದದ ತೀವ್ರತೆಗೆ ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು 108 ಆಂಬುಲೆನ್ಸ್ ಸಹಾಯದಿಂದ ಅಮಲಾಪುರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಈ ಅಪಘಾತದ ಸ್ಥಳದಲ್ಲಿ ಒಂದಷ್ಟು ಆಮೆಗಳು ಕೂಡ ಸತ್ತು ಬಿದ್ದಿದ್ದವು. ರಸ್ತೆ ದಾಟುವಾಗ ವಾಹನಗಳ ಟೈರ್ ಅಡಿಯಲ್ಲಿ ಸಿಕ್ಕಿ ಬಿದ್ದು ಸತ್ತಿವೆ ಎಂದು ಸ್ಥಳೀಯರು ಮೊದಲು ಭಾವಿಸಿದ್ದರು.

ಆದರೆ ಅಪಘಾತಕ್ಕೀಡಾದ ಆಟೋದಲ್ಲಿದ್ದ ಬ್ಯಾಗ್ ಗಳು ಚಲಿಸುತ್ತಿರುವುದು ಕಂಡು ಬಂದಿದೆ. ಅನುಮಾನ ಬಂದು ಚೀಲಗಳನ್ನು ತೆರೆದು ನೋಡಿದಾಗ ಅದರೊಳಗೆ 15 ಆಮೆಗಳು (Star Tortoise) ಇದ್ದವು. ಇದರಿಂದ ಆಮೆಗಳು ಕಳ್ಳಸಾಗಣೆಯಾಗುತ್ತಿರುವುದು ಸ್ಥಳೀಯರ ಅರಿವಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

To read more in Telugu click here

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ