ಬೆಂಗಳೂರು: ಜ್ಯೋತಿಷಿ ಮೇಲೆ ಹಲ್ಲೆ ಮಾಡಿ 5 ಲಕ್ಷ ನಗದು, 400 ಗ್ರಾಂ ಚಿನ್ನ ದೋಚಿದ ಖದೀಮರು
ಜ್ಯೋತಿಷಿ ಪ್ರಮೋದ್ ಅವರ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ನಗನಾಣ್ಯ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಬೆಂಗಳೂರು: ಜ್ಯೋತಿಷಿ (Astrologer) ಪ್ರಮೋದ್ ಅವರ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ನಗನಾಣ್ಯ ದರೋಡೆ (Robbery) ಮಾಡಿರುವ ಘಟನೆ ಬೆಂಗಳೂರಿನ (Bengaluru) ಕೆಂಗೇರಿ (Kengeri) ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಖದೀಮರು ಜ್ಯೋತಿಷ್ಯ (Astrology) ಕೇಳುವ ನೆಪದಲ್ಲಿ ಮನೆಗೆ ಬಂದು ಹಲ್ಲೆ ಮಾಡಿ 400 ಗ್ರಾಂ ಚಿನ್ನ, 350 ಗ್ರಾಂ ಬೆಳ್ಳಿ, 5 ಲಕ್ಷ ನಗದು ದರೋಡೆ ಮಾಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಪರಿಚಿತ ವ್ಯಕ್ತಿ ಶವ ಪತ್ತೆ,ಕೊಲೆ ಶಂಕೆ
ಕೊಪ್ಪಳ: ಕೊಪ್ಪಳ ತಾಲೂಕು ಲಿಂಗಾಪುರ ರಸ್ತೆಯ ಪಂಜಾಬಿ ಡಾಬಾ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಂದು ಕಾಲುವೆ ಬಳಿ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ತಡರಾತ್ರಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ
Published On - 8:26 pm, Sat, 9 July 22