ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು

ದರೋಡೆಕೋರರು ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಘಟನೆ ಜಿಲ್ಲೆಯ  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಬಳಿ ಗ್ರಾಮದಲ್ಲಿ ನಡೆದಿದೆ.

ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು
ಸಾಂಕೇತಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 28, 2022 | 7:57 PM

ಹಾಸನ: ದರೋಡೆಕೋರರು (Theft) ಪೆಟ್ರೋಲ್ ಬಂಕ್ (Petrol Bunk) ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಘಟನೆ ಜಿಲ್ಲೆಯ  ಚನ್ನರಾಯಪಟ್ಟಣ (Channaray Pattan) ತಾಲ್ಲೂಕಿನ, ಹಿರೀಸಾವೆ ಬಳಿ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಮಾಲೀಕ ಹೇಮಕುಮಾರ್‌,  ಶ್ರೀ ಲಕ್ಷ್ಮಿರಂಗನಾಥಸ್ವಾಮಿ ಬ್ಯಾಂಕ್‌ಗೆ (Bank) 10 ಲಕ್ಷ ರೂ ಹಣ ಕಟ್ಟಲು ತಮ್ಮ ಸ್ವಿಫ್ಟ್ ಕಾರಿ (Swift Car)ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಾರಿನ ಟೈಯರ್ ಪಂಕ್ಚರ್ ಆಗಿದೆ ಎಂದು ಸನ್ನೆ ಮಾಡಿ ಹೋಗಿದ್ದಾರೆ. ಹೀಗಾಗಿ ಹೇಮಕುಮಾರ್ ಸ್ವಲ್ಪ ದೂರ ಹೋಗಿ ರಸ್ತೆ ಬದಿ ಕಾರು ನಿಲ್ಲಿಸಿ ಟಯರ್ ಚೆಕ್ ಮಾಡಿದ್ದಾರೆ. ಆಗ ಮತ್ತೊಂದು ಬೈಕ್‌ನಲ್ಲಿ ಬಂದ ಮತ್ತಿಬ್ಬರು ದರೋಡೆಕೋರರು ಹೇಮಕುಮಾರ್‌ಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಿರೀಸಾವೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ  ಮಾಡಿದ್ದು, ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಳಬಾಗಿಲು ನಗರಸಭೆ ಸದಸ್ಯನ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

ಕೋಲಾರ: ಮುಳಬಾಗಿಲು ನಗರಸಭೆ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸ್​​​ರು ಒಟ್ಟು 14 ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್​ 7ರಂದು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿಯ ಕೊಲೆಯಾಗಿತ್ತು. ಕೊಲೆ ಬಳಿಕ ಆರೋಪಿಗಳು ಮೈಸೂರು, ಆಂಧ್ರಪ್ರದೇಶದ ಕುಪ್ಪಂ, ವಿಜಯವಾಡ, ಮಹಾರಾಷ್ಟ್ರ, ಗೋವಾ ಸೇರಿದಂತೆ ಹಲವೆಡೆ ತಲೆಮರೆಸಿಕೊಂಡಿದ್ದರು.

ಬಾಲಾಜಿ ಸಿಂಗ್ ಅಲಿಯಾಸ್​ ಗಬ್ಬರ್​, ರೋಹಿತ್ ಕುಮಾರ್​, ಮಹೇಶ್​, ಮಧು ಅಲಿಯಾಸ್​ ಮನೋಜ್​​​​​, ಧನು, ಜಗನ್​, ಅಭಿನಂದನ್​​, ಧನಂಜಯ, ಮಹೇಶ್​, ನವೀನ್​​ ಸೇರಿದಂತೆ ಒಟ್ಟು 14 ಆರೋಪಿಗಳನ್ನು ಪೊಲೀಸ್​ರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕೋಲಾರ ಪೊಲೀಸರು 4 ತಂಡಗಳನ್ನು ರಚಿಸಿದ್ದರು.

ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮಹಿಳಾ ಆರೋಪಿಗಳ ಬಂಧನ

ಉತ್ತರ ಕನ್ನಡ: ಜೂನ್ 21 ರಂದು ಕುಮಟಾದ ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮೂವರು ಚಾಲಾಕಿ ಮಹಿಳಾ ಆರೋಪಿಗಳನ್ನು ಕುಮಟಾ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಮೂಲದ ಆದಿಯಮ್ಮ ತಿರುಪತಿ(42), ವೆಂಕ್ಟಮ್ಮ ತಿರುಪತಿ, ಲಲಿತಾ ಅಲಿಯಾಸ್ ಭಾಗ್ಯ ನಾಗರಾಜ ಬಂಧಿತ ಆರೋಪಿಗಳು.

ಜೂನ್ 21 ರಂದು ಕುಮಟಾದ ಬಸ್‌ನಿಲ್ದಾಣದಲ್ಲಿ ಆರೋಪಿಗಳು ಭಟ್ಕಳದ ತೇರನಮಕ್ಕಿಯ ಮಂಗಲಾ ರಾಮಚಂದ್ರ ಎಂಬುವರು ಬಸ್ ಹತ್ತುವ ವೇಳೆ ಬ್ಯಾಗಿನ ಜಿಪ್ ತೆಗೆದು 124 ಗ್ರಾಂ ಬಂಗಾರದ ಆಭರಣ, 50 ಸಾವಿರ ನಗದನ್ನು ಎಗರಿಸಿದ್ದರು. ಬಂಧಿತರ ವಿರುದ್ದ ಐಪಿಸಿ ಕಲಂ 379 ಅಡಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:01 pm, Tue, 28 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ