ಅಪರಾಧ ಸುದ್ದಿಗಳು: ಒಂಟಿ ವೃದ್ಧನ ಕೈಕಾಲು ಕಟ್ಟಿ ದರೋಡೆ ಮಾಡಿದ್ದ 6 ಮಂದಿ ಬಂಧನ

Crime News: 40 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದರು. ಆರೋಪಿಗಳು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಡಂಪ್ ಆಧರಿಸಿ ಆರೋಪಿಗಳ ಬಂಧನ ಮಾಡಲಾಗಿದೆ.

ಅಪರಾಧ ಸುದ್ದಿಗಳು: ಒಂಟಿ ವೃದ್ಧನ ಕೈಕಾಲು ಕಟ್ಟಿ ದರೋಡೆ ಮಾಡಿದ್ದ 6 ಮಂದಿ ಬಂಧನ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಒಂಟಿ ವೃದ್ಧನ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸರಿಂದ 6 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ನಿತಿನ್, ಹೃತಿಕ್, ರಾಜವರ್ಧನ್, ಅರುಣ್, ಮಹದೇವ್, ತೇಜಸ್ ಎಂಬವರನ್ನು ಬೆಳ್ಳಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್​ 20 ರಂದು ಬೆಳ್ಳಂದೂರಿನಲ್ಲಿ ದರೋಡೆ ಪ್ರಕರಣ ನಡೆದಿತ್ತು. 62 ವರ್ಷ ವಯಸ್ಸಿನ ಲಕ್ಷ್ಮಣ್ ಎಂಬವರ ಮನೆಗೆ ರಾತ್ರಿ ನುಗ್ಗಿ ಆರೋಪಿಗಳು ದುಷ್ಕೃತ್ಯ ಎಸಗಿದ್ದರು. 40 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದರು. ಆರೋಪಿಗಳು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಡಂಪ್ ಆಧರಿಸಿ ಆರೋಪಿಗಳ ಬಂಧನ ಮಾಡಲಾಗಿದೆ.

ಹಾಸನ: ಎಟಿಎಂ ದರೋಡೆಗೆ ಯತ್ನ
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಎಟಿಎಂ ದರೋಡೆಗೆ ಯತ್ನ ಮಾಡಿದ ಘಟನೆ ನಡೆದಿದೆ. ಎಪಿಎಂಸಿ ಮಾರ್ಕೆಟ್​ ಗೇಟ್ ಬಳಿಯಿರುವ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕೆನರಾ ಬ್ಯಾಂಕ್​ನ ಎಟಿಎಂ ಕೇಂದ್ರದಲ್ಲಿ ದರೋಡೆ ಪ್ರಯತ್ನ ನಡೆಸಲಾಗಿದೆ. ಎಟಿಎಂ ಯಂತ್ರ ಒಡೆದು ಹಣ ದೋಚಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಬೆರಳಚ್ಚು ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಅರಸೀಕೆರೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ದಿನೇದಿನೆ ಯುವಕರ ಪುಂಡಾಟ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಿನಿಮಾ ಸ್ಟೈಲ್​ನಲ್ಲಿ ಕಾರಿನಲ್ಲಿ ಯುವಕರು ಮೆರವಣಿಗೆ ನಡೆಸಿದ್ದಾರೆ. ಬೈಕ್​ಗಳಲ್ಲಿ ಜಿಗ್ ಜಾಗ್ ಮಾಡುತ್ತಾ ರಸ್ತೆಯಲ್ಲಿ ಹುಚ್ಚಾಟ ಮೆರೆದಿದ್ದಾರೆ. ಯುವಕರ ಹುಚ್ಚಾಟಕ್ಕೆ ಜನರು ಬೇಸತ್ತಿದ್ದಾರೆ.

ಕೋಲಾರ: ಹಲ್ಲೆ ಪ್ರಕರಣದ ಆರೋಪಿಗಳ ಬಂಧನ
ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಿಮ್ ಅನಿಲ್ ಸೇರಿದಂತೆ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪೊಲೀಸರಿಂದ ಬಂಧನವಾಗಿದೆ. ಸೆಪ್ಟೆಂಬರ್ 4 ರಂದು ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಪರಸ್ಪರ ಎರಡು ಗುಂಪುಗಳ ಮೇಲೆ ಹಲ್ಲೆ ನಡೆದಿತ್ತು. ಬಸ್‌ನಲ್ಲಿ ಜಿಮ್ ಅನಿಲ್ ಸೇರಿ ಹಲವರು ಹಲ್ಲೆ ಮಾಡಿದ್ದರು. ಯುವತಿಯರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಘಟನೆ ಸಂಬಂಧ 2 ಗುಂಪು ಮಧ್ಯೆ ಪರಸ್ಪರ ಹಲ್ಲೆ ನಡೆದಿತ್ತು. ಗೌನಿಪಲ್ಲಿ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ

ಇದನ್ನೂ ಓದಿ: ದಾವಣಗೆರೆ : ಉದ್ದೇಶಪೂರ್ವಕ ಅಪಹರಣ, ಕೊಲೆ ಶಂಕೆ: ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ

Click on your DTH Provider to Add TV9 Kannada