AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರಿನ ಮಡಿವಾಳ ಪೊಲೀಸ್​ ಠಾಣಾ ವ್ಯಾಪ್ತಿಯ ವೆಂಕಟಾಪುರದಲ್ಲಿ ಪುಡಿರೌಡಿಗಳು ಯುವಕನ ಮೇಲೆ ಲಾಂಗ್, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on: Sep 02, 2023 | 7:42 AM

Share

ಬೆಂಗಳೂರು: ನಗರದಲ್ಲಿ ಪುಡಿರೌಡಿಗಳ (Rowdy) ಅಟ್ಟಹಾಸ ಮುಂದುವರೆದಿದ್ದು, ಪೊಲೀಸರ ಭಯವೇ ಇಲ್ಲದಂತಾಗಿದೆ. ಮಡಿವಾಳ ಪೊಲೀಸ್​ (Police) ಠಾಣಾ ವ್ಯಾಪ್ತಿಯ ವೆಂಕಟಾಪುರದಲ್ಲಿ ಪುಡಿರೌಡಿಗಳು ಯುವಕನ ಮೇಲೆ ಬ್ಯಾಟ್​​​​, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ರಮೇಶ್​ ಹಲ್ಲೆಗೊಳಗಾದ ಯುವಕ. ರಮೇಶ್​​​ ವೆಂಕಟಾಪುರದಲ್ಲಿ ಸಂಜೆ 6:30 ರ ಸುಮಾರಿಗೆ ಟೀ ಕುಡಿಯಲು ಬಂದಿದ್ದರು. ಇದೇ ವೇಳೆ ಇದೇ ಟೀ ಅಂಗಡಿ ಬಳಿ ಬಂದಿದ್ದ ಕಾವೇರಿ, ಶಿವು ಮತ್ತು ಆತನ ಗ್ಯಾಂಗ್ ಏನೋ ನಾವ್ ಬಂದರೂ ಎದ್ದೇಳಲ್ವಾ ಹಾಗೇ ಕೂತಿದ್ಯಾ ಅಂತ ರಮೇಶ್​ ಮೇಲೆ ಹಲ್ಲೆ ಮಾಡಿದ್ದಾರೆ.

ನಂತರ ಮಚ್ಚು, ಲಾಂಗ್ ತೆಗೆದು ಹಲ್ಲೆ ಮಾಡಲು ಬಂದಾಗ, ರಮೇಶ್​​ ಸ್ಥಳದಿಂದ ಓಡಲು ಆರಂಭಿಸಿದ್ದಾರೆ. ಈ ವೇಳೆ ರೌಡಿಗಳು ರಮೇಶ್​​​ನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪುಂಡರು ನಡೆಸಿದ ಹಲ್ಲೆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಶಿವುನನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಹುಳಿಮಾವು ಪೊಲೀಸರಿಂದ 2 ಕೋಟಿ ರೂ ಮೌಲ್ಯದ ಡ್ರಗ್ಸ್​ ಜಪ್ತಿ: ನೈಜೀರಿಯಾ ಮೂಲದ ಇಬ್ಬರ ಬಂಧನ

ಲಾಂಗ್ ಮಾದರಿಯಲ್ಲಿ ಇರುವ ಕ್ರಿಕೆಟ್ ಬ್ಯಾಟ್​ನಿಂದ ಹಲ್ಲೆ ಮಾಡಿದ್ದೇವೆ, ಕಾವೇರಿ ಎಂಬಾತ ಸ್ಥಳದಲ್ಲಿ ಇರಲಿಲ್ಲ ಎಂದು ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ. ಇನ್ನು ಕೃತ್ಯ ಎಸಗಿದ ಶಿವು ಸಹಚರರಿಗೂ ಸಹ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು