ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ಸಾವನ್ನಪ್ಪಿದ ರೌಡಿಶೀಟರ್ ದಿಲೀಪ್
ಎರಡು ಬೈಕ್ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬಳಿ ಘಟನೆ ನಡೆದಿದೆ.
ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿಶೀಟರ್ (Rowdisheeter) ಸಾವನ್ನಪಿದ್ದಾನೆ. ತಾಲೂಕಿನ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ದಿಲೀಪ್, ಎರಡು ಕಾರುಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು. ಈ ವೇಳೆ ಬಸವನಪುರ ಗ್ರಾಮದ ಬಳಿ ಕಾರು ತಡೆದು ಪೊಲೀಸರಿಂದ ತಪಾಸಣೆ ಮಾಡಲಾಗಿದೆ. ಈ ವೇಳೆ ಕಾರಿನಿಂದ ತಪ್ಪಿಸಿಕೊಂಡು ಹೋಗಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ರಾಮನಗರ ಎಸ್ ಪಿ ಸಂತೋಷ್ ಬಾಬು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದ ಮೂವರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಎರಡು ಬೈಕ್ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವು:
ಕಲಬುರಗಿ: ಎರಡು ಬೈಕ್ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬಳಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ಅಲ್ಲೂರ(ಬಿ) ಗ್ರಾಮದ ಕಾಂತಪ್ಪ (35) ಭೀಮನಹಳ್ಳಿ ಗ್ರಾಮದ ವಿಶ್ವನಾಥ(32) ಮೃತ ವ್ಯಕ್ತಿಗಳು. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಇನೋವಾ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು:
ಚಿಕ್ಕಬಳ್ಳಾಪುರ: ಬೈಕ್ಗೆ ಇನೋವಾ ಕಾರು ಡಿಕ್ಕಿ ಬೈಕ್ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲಾಡಳಿತ ಭವನದ ಬಳಿ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ಮೂಲದ ಬೈಕ್ ಸವಾರ ಸುರೇಶ್ ಮೃತ ವ್ಯಕ್ತಿ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುರೇಶ್ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ಕರ್ತವ್ಯಕ್ಕೆ ಹಾಜರಾಗಲು ಬೈಕ್ನಲ್ಲಿ ಆಗಮಿಸುತ್ತಿರುವಾಗ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಇದನ್ನೂ ಓದಿ:
‘ಸಲ್ಮಾನ್ ಖಾನ್, ಶಾರುಖ್ ಖಾನ್ಗೆ ನನ್ನ ಹೋಲಿಸಬೇಡಿ’; ಯಶ್ ನೇರ ಮಾತು