ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ

Updated on: Dec 17, 2019 | 7:16 AM

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.