ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಹತ್ಯೆ
ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್.
ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 9:44 am, Fri, 23 October 20