AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಮುಜಾಯಿದ್ದೀನ್(32)ೆ ಎಂಬಾತನನ್ನ ಬರ್ಬರ ಹತ್ಯೆ ಮಾಡಲಾಗಿದೆ.

Shivamogga News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ
ಮೃತ ರೌಡಿಶೀಟರ್​
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2023 | 9:47 AM

ಶಿವಮೊಗ್ಗ, ಜು.21: ಜಿಲ್ಲೆಯ ಭದ್ರಾವತಿ(Bhadravati) ಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಮುಜಾಯಿದ್ದೀನ್(32)ೆ ಎಂಬಾತನನ್ನ ಬರ್ಬರ ಹತ್ಯೆ ಮಾಡಲಾಗಿದೆ. ನಿನ್ನೆ(ಜು.20) ರಾತ್ರಿ ಸುಮಾರು 12.30 ರ ಸುಮಾರಿಗೆ ಮೃತ ರೌಡಿಶೀಟರ್​ ಮನೆಯಿಂದ ಹೊರಬಂದಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಹೋಗಿದ್ದಾರೆ. ಇನ್ನು ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. ಘಟನೆ ಕುರಿತು ಸ್ಥಳಕ್ಕೆ ಪೇಪರ್​ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಸಾಲದ ಬಾಧೆ ತಾಳಲಾರದೇ ರೈತ ವಿಷಸೇವಿಸಿ ಆತ್ಮಹತ್ಯೆ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದ ರೈತನೊರ್ವ ಸಾಲದಿಂದ ಕಂಗೆಟ್ಟಿದ್ದು, ಇದರಿಂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಿನೇಶ್ (35) ಮೃತ ರೈತ. ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಇತ, ವಿವಿಧ ಬ್ಯಾಂಕ್​ನಲ್ಲಿ 8 ಲಕ್ಷ ಮತ್ತು ಹೊರಗಡೆ ಕೈಗಡಯೆಂದು 7 ಲಕ್ಷ ರೂಪಾಯಿ ಸೇರಿ ಒಟ್ಟು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಕುರಿತು ಸೊರಬ ಪೂಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರು ಸಾವು

ಮಂಡ್ಯ: ಕಬ್ಬು ತುಂಬಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾದರಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಂಡ್ಯದ ಎಸ್.ಡಿ.ಜಯರಾಮ್ ಬಡಾವಣೆಯ ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿಗಳು. ಕೆಲಸಕ್ಕೆ ತೆರಳಿದ್ದ ಇಬ್ಬರು ಯುವಕರು ಬಳಿಕ ಕೆ.ಎಂ.ದೊಡ್ಡಿ ಮಾರ್ಗವಾಗಿ ಮಂಡ್ಯಕ್ಕೆ ವಾಪಸ್ ಬರುವ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಕೆ.ಎಂ ದೊಡ್ಡಿ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಾಗಿದೆ.

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಮೈಸೂರು: ಟಿ.ನರಸೀಪುರ ಪಟ್ಟಣದ ಕೆಇಬಿ ಕಚೇರಿ ಮುಂದೆ ಬೈಕ್​ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ದಾಸನಾಯಕರ ಬೀದಿಯ ನಿವಾಸಿಯಾಗಿದ್ದ ಬೈಕ್ ಸವಾರ ರುದ್ರ(40) ಎಂಬುವವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ರುದ್ರ ಅವರು ಬೈಕ್​ ಚಲಾಯಿಸುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿಯೊಂದು ಬೈಕ್ ಸವಾರನ ಮೇಲೆ ಹರಿದಿದೆ. ಈ ವೇಳೆ ದುರ್ಘಟನೆ ನಡೆದಿದ್ದು, ಈ ಕುರಿತು ಟಿ.ನರಸೀಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್