AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura: ಗುಂಡು ಹಾರಿಸಿ ರೌಡಿಶೀಟರ್ ಮರ್ಡರ್; ಬೆಚ್ಚಿಬಿದ್ದ ಗುಮ್ಮಟ ನಗರಿ ಜನತೆ

ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ಭರಾಟೆ ಜೋರಾಗಿದೆ. ಜಿದ್ದಾಜಿದ್ದಿಗೆ ಬಿದ್ದವರಂತೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ನಡೆಸಿ ಮತಬೇಟೆ ನಡೆಸಿದ್ದಾರೆ. ಚುನಾವಣೆಯ ಭರಾಟೆಯ ಮಧ್ಯೆ ನಗರದಲ್ಲಿ ಮತ್ತೇ ಗುಂಡಿನ ಸದ್ದು ಕೇಳಿ ಬಂದಿದೆ. ಹಂತಕರ ಗುಂಡಿನೇಟಿಗೆ ಮಹಾನಗರ ಪಾಲಿಕೆಯ ಸದಸ್ಯೆಯ ಪತಿ ಹಾಗೂ ರೌಡಿ ಶೀಟರ್ ಆಗಿದ್ದವ ಪ್ರಾಣ ಬಿಟ್ಟಿದ್ದಾನೆ.

Vijayapura: ಗುಂಡು ಹಾರಿಸಿ ರೌಡಿಶೀಟರ್ ಮರ್ಡರ್; ಬೆಚ್ಚಿಬಿದ್ದ ಗುಮ್ಮಟ ನಗರಿ ಜನತೆ
ಕೊಲೆಯಾದ ಹೈದರ್​ಅಲಿ ನದಾಫ್
ಕಿರಣ್ ಹನುಮಂತ್​ ಮಾದಾರ್
|

Updated on: May 07, 2023 | 8:36 AM

Share

ವಿಜಯಪುರ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ(Karnataka Assembly Election) ಭರಾಟೆ ಜೋರಾಗಿದೆ. ಜಿದ್ದಾಜಿದ್ದಿಗೆ ಬಿದ್ದವರಂತೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ನಡೆಸಿ ಮತಬೇಟೆ ನಡೆಸಿದ್ದಾರೆ. ಚುನಾವಣೆಯ ಭರಾಟೆಯ ಮಧ್ಯೆ ನಗರದಲ್ಲಿ ಮತ್ತೇ ಗುಂಡಿನ ಸದ್ದು ಕೇಳಿ ಬಂದಿದೆ. ಗುಮ್ಮಟ ನಗರಿ ವಿಜಯಪು(Vijayapur)ರದಲ್ಲಿ ರೌಡಿಶೀಟರ್ ಒಬ್ಬನ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ಚಂದಾಪುರ ಕಾಲೋನಿಯಲ್ಲಿ ನಿನ್ನೆ(ಮೇ.6) ಬೆಳಗ್ಗೆ 10.30 ರ ಸುಮಾರಿಗೆ ಭಯಾನಕ ಘಟನೆ ನಡೆದಿದೆ. ಚಂದಾಪುರ ಕಾಲೋನಿ ನಿವಾಸಿ ಹೈದರ್​ಅಲಿ ನದಾಫ್ ಗುಂಡಿನ ದಾಳಿಗೆ ಒಳಗಾಗಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಬೆಳಿಗ್ಗೆ ಮನೆಯಲ್ಲಿ ಬ್ರೇಕ್ ಫಾಸ್ಟ್ ಮಾಡಿದ ಹೈದರಅಲಿ ಮನೆಯಿಂದ ಹೊರಗೆ ಬಂದು ಕಾರು ಹತ್ತುವ ವೇಳೆ ಬೈಕ್ ಹಾಗೂ ಕಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಂಟ್ರಿ ಪಿಸ್ತೂಲ್​ನಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡು ಹಾರಿಸುವ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಹ ಹೈದರಅಲಿಯನ್ನ ಬೆನ್ನಟ್ಟಿ ಗುಂಡು ಹಾರಿಸಿ ಖಲಾಸ್ ಮಾಡಿದ್ದಾರೆ. ಹೈದರಅಲಿ ನೆಕ್ಕುರುಳಿ ಬೀಳುತ್ತಿದ್ದಂತೆ ಹಂತಕರು ಅಲ್ಲಿಂದ ಎಸ್ಕೇಫ್ ಆಗಿದ್ದಾರೆ.

ಹೀಗೆ ಬೀಕರವಾಗಿ ಕೊಲೆಯಾಗಿರುವ ರೌಡಿಶೀಟರ್ ಹೈದರಅಲಿ ನದಾಫ್ ಇತ್ತೀಚೆಗಷ್ಟೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 19ನೇ ವಾರ್ಡ್​ನಿಂದ ತನ್ನ ಪತ್ನಿ ನಿಶಾತ್ ನದಾಫ್​ಳನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದ. ಚುನಾವಣೆಯಲ್ಲಿ ಆತನ ಪತ್ನಿ ನಿಶಾತ್ ಗೆದ್ದು ಬೀಗಿದ್ದಳು. ಪಾಲಿಕೆ ಚುನಾವಣೆಯ ವೇಳೆ ವೈಷ್ಯಮ್ಯದಿಂದ ಗುಂಡು ಹಾರಿಸಿ ಹೈದರಅಲಿಯನ್ನ ಕೊಲೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಕೊಲೆಯಾದವರ ಕುಟುಂಬ ಸದಸ್ಯರು ಕಣ್ಣೀರು ಹಾಕುತ್ತಿದ್ದಾರೆ. ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಅವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ನೀಡಬೇಕು. ಇಲ್ಲವಾದರೆ ನಾವು ಮನೆ ಮಂದಿ ಎಸ್ಪಿ ಕಚೇರಿ ಬಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಂದು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ:ಗದಗ: ನಾಲ್ಕು ತಿಂಗಳಿಂದ ಶಾಂತವಾಗಿದ್ದ ಅವಳಿ ನಗರದಲ್ಲಿ ಮತ್ತೆ ರಕ್ತದೋಕಳಿ; ಮನೆಗೆ ನುಗ್ಗಿ ಚೂರಿಯಿಂದ ಇರಿದು ವ್ಯಕ್ತಿ ಕೊಲೆ

ಇನ್ನು ರೌಡಿಶೀಟರ್ ಆಗಿದ್ದ ಹೈದರಅಲಿಯ ಮೇಲೆ ಕೊಲೆ, ಬೆದರಿಕೆ ಸೇರಿದಂತೆ ಹಲವು ಕೇಸ್ ಗಳು ಇವೆ ಎನ್ನಲಾಗಿದ್ದು, ಈತ ಮೊದಲಿನಿಂದಲೂ ಬಡ್ಡಿ ಹಣಕಾಸು ವ್ಯವಹಾರ, ಆಸ್ತಿ ಒತ್ತುವರಿ ಸೇರಿದಂತೆ ಇತರೆ ವ್ಯವಹಾರಗಳನ್ನು ಮಾಡುತ್ತಿದ್ದ. ಇದೇ ಹಿನ್ನೆಲೆ ಕೊಲೆ ಆಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಬಂದ ಜಲನಗರ ಠಾಣೆ ಪೊಲೀಸರು ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ವಿಜಯಪುರ ಎಸ್​ಪಿ ಹೆಚ್​ಡಿ ಆನಂದಕುಮಾರ ಕೊಲೆಯಾದವನೂ ರೌಡಿಶೀಟರ್ ಆಗಿದ್ದು, ಕೊಲೆ ಮಾಡಿದವರೂ ರೌಡಿಶೀಟರ್​ಗಳಾಗಿದ್ದಾರೆ. ಈ ಕುರಿತು ತಂಡ ರಚಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ತನಿಖಾ ದೃಷ್ಟಿಯಿಂದ ಹೆಚ್ಚಿನ ಮಾಹಿತಿ ನೀಡಲಾಗಲ್ಲ ಎಂದಿದ್ದಾರೆ. ಸದ್ಯ ನಡೆದ ಈ ಕೊಲೆಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಜನರು ಯಾವುದೇ ಭಯಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.

ಹಿಂದೆ ನಡೆದಿರುವ ಮಹಾನಗರ ಪಾಲಿಕೆ ಚುನಾವಣೆಯ ದ್ವೇಷ ಈ ಘಟನೆಗೆ ಪ್ರಮುಖ ಕಾರಣವಾಗಿದೆ. ಆದರೆ ಚುನಾವಣೆ ಸಮಯದಲ್ಲಿ ಗುಂಡಿನ ಮೊರೆತವಾಗಿದ್ದು, ಎಲ್ಲರನ್ನೂ ತಲ್ಲಣ ಉಂಟು ಮಾಡಿದೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗುಂಡಿನ ದಾಳಿ ನಡೆಸಿ ಓರ್ವನನ್ನ ಹತ್ಯೆ ಮಾಡಿರುವ ಹಂತಕರಿಗೆ ಖಾಕಿ ಪಡೆ ಜಾಲ ಬೀಸಿದೆ. ಕೊಲೆಯಾದ ಹೈದರಾಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ