AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಟ್ರೇಡಿಂಗ್​ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!

ಇತ್ತೀಚಿಗೆ ಸೈಬರ್ ಕ್ರೈಮ್​ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಜಂಟಿ ಸೈಬರ್ ವಂಚನೆಯ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಮೂಲದ ಇಬ್ಬರು ವ್ಯಕ್ತಿಗಳೂ ಒಟ್ಟೂ 2.28 ಕೋಡಿ ರೂ.ಗಳ ನಷ್ಟ ಅನುಭವಿಸಿದ್ದಾರೆ. ನಕಲಿ ಆನ್​ಲೈನ್ ಟ್ರೇಡಿಂಗ್ ಆ್ಯಪ್​ಗಳನ್ನು ನಂಬಿ ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಈಸ್ಟ್ ಸೈಬರ್ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ತನಿಖೆ ಆರಂಭವಾಗಿದೆ.

ಆನ್​ಲೈನ್ ಟ್ರೇಡಿಂಗ್​ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!
ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಜಂಟಿ ಸೈಬರ್ ವಂಚನೆ
ಭಾವನಾ ಹೆಗಡೆ
|

Updated on:Oct 03, 2025 | 10:00 AM

Share

ಬೆಂಗಳೂರು, ಅಕ್ಟೋಬರ್ 3: ಇತ್ತೀಚಿಗೆ ಸೈಬರ್ ಕ್ರೈಮ್​ (Cyber crime)  ಪ್ರಕರಣಗಳು ಹೆಚ್ಚುತ್ತಿವೆ. ಖ್ಯಾತ ನಟ, ನಟಿಯಿರಿಂದ ಹಿಡಿದು ಜನಸಾಮಾನ್ಯರವರೆಗೂ ಎಲ್ಲರೂ ಸೈಬರ್ ಅಪರಾಧಕ್ಕೆ ಸಿಲುಕುತ್ತಿದ್ದಾರೆ. ಬೆಂಗಳೂರಿನಲ್ಲೀಗ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಅಪರಾಧಕ್ಕೆ ಒಳಗಾದವರಲ್ಲಿ ಓರ್ವ ಇಂಜಿನಿಯರ್ ಮತ್ತು ಇನ್ನೋರ್ವ ಖಾಸಗಿ ಸಂಸ್ಥೆಯ ಉದ್ಯೋಗಿ. ಹಲವು ತಿಂಗಳುಗಳಿಂದ ಇಬ್ಬರೂ ಆನ್​ಲೈನ್ ಟ್ರೇಡಿಂಗ್​ನಲ್ಲಿ ಹಣ ಹೂಡಿಕೆ ಮಾಡಿ 2.28 ಕೋಟಿ ರೂಪಾಯಿಗಳ ನಷ್ಟ ಅನುಭವಿಸಿದ್ದಾರೆ. ಕಳೆದ 2 ವಾರಗಳಲ್ಲಿ ಈಸ್ಟ್ ಸೈಬರ್​ ಕ್ರೈಮ್ ಪೊಲೀಸರು ಈ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಇಂಜಿನಿಯರ್​ಗೆ 1.40 ಕೋಟಿಯ ವಂಚನೆ

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿಯಾದ ರಾಮನಾಥ್ ಎಸ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಈ ಪ್ರಕರದಲ್ಲಿ ಬರೋಬ್ಬರಿ 1.40 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ. 45 ವರ್ಷದ ರಾಮನಾಥ್ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 10 ವರ್ಷದಿಂದ ಒಂದು ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದರು. ಆದರೆ ಈಗ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ.

ಇವರಿಗೆ 2024 ಡಿಸೆಂಬರ್​ನಲ್ಲಿ ವಾಟ್ಸಾಪ್ ಮೂಲಕ ರಾಣಿ ಸಾಹ ಎಂಬ ಮಹಿಳೆಯ ಪರಿಚಯವಾಗಿತ್ತು. ಆಕೆ ತಾನು ಆನ್​ಲೈನ್ ಹೂಡಿಕೆಗಳ ಮೂಲಕ ಕೊಟ್ಯಾಧಿಪತಿಯಾಗಿರುವುದಾಗಿ ಮೆಸೇಜ್​ನಲ್ಲಿ ತಿಳಿಸಿದ್ದಳು. ಆನಂತರ ರಾಮನಾಥರನ್ನು ಒಂದು ವಾಟ್ಸಾಪ್​ ಗ್ರೂಪ್​ನಲ್ಲಿ ಸೇರಿಸಲಾಯಿತು. ಅಲ್ಲಿಂದ ರವಿ ಕಮಾರ್ ಎನ್ನುವವರ ಪರಿಚಯವಾಗಿತ್ತು. ಕೆಲಸದ ಮೇಲೆ ಯು.ಕೆಗೆ ಹೋದಾಗ ಕುಮಾರ್​ ಇವರ ಮನವೊಲಿಸಿ 10,000 ರೂ.ಗಳ ಹೂಡಿಕೆ ಮಾಡಿಸಿದ್ದ.  ಈ ಹೂಡಿಕೆಯಿಂದ ಸಣ್ಣ ಸಣ್ಣ ಲಾಭಗಳು ಸಿಗಲು ಶುರುವಾದ ಮೇಲೆ ಈ ಯೋಜನೆಯನ್ನು ರಾಮನಾಥ ಸಂಪೂರ್ಣವಾಗಿ ನಂಬಿದ್ದರು.

ನಂತರ ಕ್ಯಾಂಬ್ರಿಡ್ಜ್​ ಯೂನಿವರ್ಸಿಟಿಯ ದಿವಾಕರ್ ಎನ್ನುವವರನ್ನು ಇವರಿಗೆ ಪರಿಚಯಿಸಲಾಯಿತು. ಹೀಗೆ ಅವರು 10 ತಿಂಗಳುಗಳ ಕಾಲ ಅವರ ಖಾತೆಗೆ ಹಣವನ್ನು ವರ್ಗಾಯಿಸುತ್ತಿದ್ದರು. ಇದರಿಂದ ಬರೋಬ್ಬರಿ  1,40,14,197 ರೂ.ಗಳನ್ನು ವರ್ಗಾಯಿಸಿದ್ದರು. ಹೂಡಿಕೆಯ ಲಾಭವನ್ನು ಪಡೆಯಲು ಹೋದಾಗಲೆಲ್ಲ ಸರ್ವಿಸ್​ ಚಾರ್ಜ್ ಹೆಸರಿನಲ್ಲಿ 5% ಹಣವನ್ನು ಪಾವತಿಸಲು ಹೇಳುತ್ತಿದ್ದರು. ಇದರಿಂದ ಶಂಕೆಗೊಳಗಾದ ರಾಮನಾಥ್ ತಮ್ಮ ಸ್ನೇಹಿತರೊಂದಿಗೆ ಮಾತನಾಡಿ ತಾನು ಎಷ್ಟು ದೊಡ್ಡ ಹಗರಣದಲ್ಲಿ ಸಿಲುಕಿದ್ದೇನೆ ಎಂದು ತಿಳಿದುಕೊಂಡರು.

ಇದನ್ನೂ ಓದಿ Cyber Crime: ನಿಮ್ಮ ಫೋನ್‌ನಲ್ಲಿ 1930 ಸಂಖ್ಯೆಯನ್ನು ಸೇವ್ ಮಾಡಿದ್ದೀರ? ಇದರಿಂದ ಏನು ಪ್ರಯೋಜನ?

ಖಾಸಗಿ ಸಂಸ್ಥೆಯ ಉದ್ಯೋಗಿಗೆ ಆನ್​ಲೈನ್ ಮುಖಾಂತರ ವಂಚನೆ ನಡೆದಿದ್ದು ಹೇಗೆ?

ಇನ್ನೋರ್ವ ಬಲಿ ಪಶುವಾದ ಖಾಸಗಿ ಸಂಸ್ಥೆಯ ಉದ್ಯೋಗಿ ಸನತ್ ಪಿ (ಹೆಸರು ಬದಲಾಯಿಸಲಾಗಿದೆ) ಬೆಂಗಳೂರಿನ ಬಾಣಸವಾಡಿಯ ನಿವಾಸಿ. 2025 ರ ಜೂನ್​ನಿಂದ ಸೆಪ್ಟೆಂಬರ್ ತಿಂಗಳಿನ ಅಂತರದಲ್ಲಿ 88.36 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ತಾನು ಒಂದು ಸೆಬಿ- ರಿಜಿಸ್ಟರ್ಡ್( SEBI-registered) ಕಂಪನಿಯಾದ ಓಡೊಮ್ಯಾಕ್ಸ್/ಒಪೆನಹೈಮರ್ ಎಂಬಲ್ಲಿ ಹೂಡಿಕೆ ಮಾಡುತ್ತಿದ್ದೇನೆಂದು ಭಾವಿಸಿ ಮೋಸಹೋಗಿದ್ದಾರೆ.

ಸೈಬರ್ ಅಪರಾಧಿಗಳು ಇವರೊಂದಿಗೆ ಒಂದು ನಕಲಿ ಟ್ರೇಡಿಂಗ್ ಆ್ಯಪ್​ ಒಂದನ್ನು ಹಂಚಿಕೊಂಡಿದ್ದರು. ಅದನ್ನು ಡೌನ್​ಲೊಡ್ ಮಾಡಿಕೊಂಡ ಸನತ್, ನಿರಂತರ ಹೂಡಿಕೆ ಮಾಡಿದ್ದಾರೆ. ಅವರ ಕಣ್ಣು ಕಟ್ಟಲು ಅವರ ಹೂಡಿಕೆಯು ಬೆಳೆಯುತ್ತಿರುವುದನ್ನೂ ಆ ನಕಲಿ ಆ್ಯಪ್​ನಲ್ಲಿ ತೋರಿಸಲಾಗಿತ್ತು. 8.40 ಲಕ್ಷ ಹಣವನ್ನು ತನ್ನ ಸಂಬಂಧಿಯೊಬ್ಬರಿಂದ ಪಡೆದು ಹೂಡಿಕೆಮಾಡಿ ಕೇವಲ 50,000 ರೂ.ಗಳನ್ನಷ್ಟೇ ಹಿಂಪಡೆದಿದ್ದರು. ಹಲವಾರು ಬಾರಿ ಹಣ ಹಿಂಪಡೆಯುವಲ್ಲಿ ವಿಫಲರಾದಾಗ ಇದು ಸೈಬರ್ ವಂಚೆಯೆಂದು ತಿಳಿದು ಬಂದಿದೆ. ರಾಮನಾಥ್ ಮತ್ತು ಸನತ್ ಇಬ್ಬರೂ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಇಬ್ಬರ ಬ್ಯಾಂಕ್​ ಖಾತೆಗಳ ಮೇಲೆ ಕಣ್ಣಿಟ್ಟಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Fri, 3 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್