ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಮಂಗಳೂರಿನ ಉರ್ವಾ ಠಾಣೆ ಪೊಲೀಸರು ರಾಜಸ್ಥಾನದಿಂದ ಬಂದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅಮೆಜಾನ್‌ಗೆ 30 ಕೋಟಿ ರೂಪಾಯಿಗಳ ವಂಚನೆ ಮಾಡಿದ ಆರೋಪ ಅವರ ಮೇಲಿದೆ. ಐದು ವರ್ಷಗಳಿಂದ ವಂಚನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ
ಆರೋಪಿಗಳು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on: Nov 02, 2024 | 12:25 PM

ಮಂಗಳೂರು, ನವೆಂಬರ್​ 02: ಅಮೆಜಾನ್‌ (Amazon) ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ (Mangaluru) ಉರ್ವಾ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಾಜಸ್ಥಾನ (Rajasthan) ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತರು.

ಆರೋಪಿಗಳು ಅಮೆಜಾನ್​ನಲ್ಲಿ ವಿವಿಧ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಆರ್ಡರ್​​ ಮಾಡುತ್ತಿದ್ದರು. ವಸ್ತುಗಳ ಡಿಲೇವರಿ ಪಡೆಯಲು ಟೈಯರ್ ಟು ಸಿಟಿ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು ವಿಮಾನದಲ್ಲಿ ಹೋಗುತ್ತಿದ್ದರು. ವಸ್ತುವಿನ ಬಾಕ್ಸ್​ ಮೇಲಿನ ಟ್ರ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ ಅಮೆಜಾನ್ ಸಂಸ್ಥೆಗೆ ವಂಚಿಸುತಿದ್ದರು.

ವಸ್ತುಗಳು ಡೆಲವರಿಯಾದ ಬಳಿಕ, ಅದರ ಮೇಲಿನ ಟ್ರ್ಯಾಕಿಂಗ್ ಲೇಬಲ್​ಗಳನ್ನು ಅದೇ ರೀತಿಯ ಕಡಿಮೆ ಬೆಲೆಯ ವಸ್ತುಗಳ ಬಾಕ್ಸ್​​ ಮೇಲೆ ಹಚ್ಚುತ್ತಿದ್ದರು. ನಂತರ, ರಿಟರ್ನ್​​ ಮಾಡುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇಟ್ಟುಕೊಂಡು ವಂಚಿಸುತ್ತಿದ್ದರು.

ದುಬಾರಿ ಬೆಲೆಯ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್​ಗೆ ಮಾರಾಟ ಮಾಡುತ್ತಿದ್ದರು. ಐಟಂ ರಿಟರ್ನ್ ಆದ ಬಳಿಕ ಆರ್ಡರ್​ಗೆ ಬಳಸಿದ ಸಿಮ್ ಕಿತ್ತೆಸೆಯುತ್ತಿದ್ದರು. ವಸ್ತು ಅಮೇಜಾನ್ ಗೋಡಾನ್ ತಲುಪಿದ ಬಳಿಕ ವಂಚನೆ ಬೆಳಕಿಗೆ ಬರುತ್ತಿತ್ತು.

ಇದನ್ನೂ ಓದಿ: ಸೈಬರ್​ ಕ್ರೈಂ: ಮಂಗಳೂರು ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ

ಆರೋಪಿಗಳು ಕಳೆದ‌ ಐದು ವರ್ಷಗಳಿಂದಲೂ ಈ ರೀತಿ ವಂಚನೆ ಮಾಡುತ್ತಿದ್ದಾರೆ. ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ನೆಲೆಸಿ ವಂಚನೆ ಮಾಡಿದ್ದಾರೆ. ಆರೋಪಿಗಳು ಈವರೆಗೂ ಲಾಕ್ ಆಗಿರಲಿಲ್ಲ. ಆದರೆ, ಇದೀಗ ಮಂಗಳೂರಿನ ಉರ್ವಾ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಉರ್ವ ಠಾಣೆಯಲ್ಲಿ ಸೆ.21ರಂದು ಅಮೆಜಾನ್ ಕಂಪನಿಯ ಡೆಲಿವರಿ ಬಾಯ್ ಪ್ರಕರಣ ದಾಖಲಿಸದ್ದನು. ತನಿಖೆ ನಡೆಸಿ ಖದೀಮರ ಮೋಸದ ಜಾಲ ಭೇದಿಸಿದ ಮಂಗಳೂರಿನ‌ ಉರ್ವ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ