AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಖ್ರಿ ಸರ್ಕಲ್‌ ಅಪಘಾತಕ್ಕೆ ಟ್ವಿಸ್ಟ್: ಲ್ಯಾಂಬೋರ್ಗಿನಿ ಕಾರು ಓಡಿಸಿದವರು ಯಾರು ಗೊತ್ತಾ?

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಲ್ಯಾಂಬೋರ್ಗಿನಿ ಕಾರು ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್​ಗೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಫೆ.9ರಂದು ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತವಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನಾ ಸ್ಥಳಕ್ಕೆ […]

ಮೇಖ್ರಿ ಸರ್ಕಲ್‌ ಅಪಘಾತಕ್ಕೆ ಟ್ವಿಸ್ಟ್: ಲ್ಯಾಂಬೋರ್ಗಿನಿ ಕಾರು ಓಡಿಸಿದವರು ಯಾರು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 12, 2020 | 1:02 PM

Share

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಲ್ಯಾಂಬೋರ್ಗಿನಿ ಕಾರು ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್​ಗೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಫೆ.9ರಂದು ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತವಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಕಾರನ್ನು ಜಪ್ತಿ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಪ್ರಕರಣ ಬೆನ್ನು ಹತ್ತಿದ ಪೊಲೀಸರು, ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ ಟೆಕ್ನಿಕಲ್ ಸಾಕ್ಷ್ಯಗಳನ್ನ ಆಧರಿಸಿ ತನಿಖೆ ನಡೆಸಿದ್ದಾರೆ.

ಈ ನಡುವೆ ಅಪಘಾತ ಮಾಡಿದ್ದು ತಾನೇ ಎಂದು ಓರ್ವ ವ್ಯಕ್ತಿ ಮುಂದೆ ಬಂದಿದ್ದ. ಆದ್ರೆ ಸಾಕ್ಷ್ಯಾಧಾರಗಳಿಂದ ಕಾರು ಚಲಾಯಿಸುತ್ತಿದ್ದದ್ದು ಮಹಮ್ಮದ್ ನಲಪಾಡ್ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರಿಂದ ನಲಪಾಡ್​ಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಕಾರು ಚಾಲನೆ ಮಾಡಿದ್ದು ನಲಪಾಡ್ ಅಪಘಾತ ನಡೆದ ದಿನ ವಾಹನ ಚಾಲನೆ ಮಾಡುತ್ತಿದ್ದವರು ಬೇರೆ ವಾಹನದಲ್ಲಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿನ್ನೆ ಪೊಲೀಸ್ ಠಾಣೆಗೆ ಸೆರೆಂಡರ್ ಆಗಲು ಒಬ್ಬ ಬಂದಿದ್ದ. ವಿಚಾರಣೆ ವೇಳೆ ಅಪಘಾತ ಮಾಡಿದವನು ಈತನಲ್ಲ ಎಂದು ತಿಳಿದು ಬಂದಿದೆ.

ಖಚಿತವಾದ ಸಾಕ್ಷ್ಯ, ಆಧಾರಗಳ ಮೇಲೆ ಮೊಹಮದ್ ನಲಪಾಡ್ ಕಾರು ಚಾಲನೆ ಮಾಡುತ್ತಿದ್ದ ಎಂಬುದು ಖಚಿತವಾಗಿ ತಿಳಿದುಬಂದಿದೆ. ಹಾಗಾಗಿ ನಲಪಾಡ್​ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲು ಮುಂದಾಗಿದ್ದೇವೆ. ವಿಚಾರಣೆಗೆ ಹಾಜರಾದ ನಂತರ ಪ್ರಕರಣ ಸಂಬಂಧ ಮುಂದಿನ ತನಿಖೆ ಕೈಗೊಳ್ಳುತ್ತೇವೆ ಎಂದು ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇ ಗೌಡ ಹೇಳಿದ್ದಾರೆ.

ಇದು ಸಣ್ಣ ಆಕ್ಸಿಡೆಂಟ್ ಅಷ್ಟೆ: ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ಅಪಘಾತ ಸಂಬಂಧ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಶಾಸಕರ ಮಗ ಇರಬಹುದು ಅಥವಾ ಶಾಸಕರೇ ಆಗಿರಬಹುದು ಕಾನೂನುಬಾಹಿರವಾಗಿ ವರ್ತನೆ ಮಾಡಿದರೆ ಕ್ರಮ ಕೈಗೊಳ್ಳಬೇಕು. ಇದು ಸಣ್ಣ ಆಕ್ಸಿಡೆಂಟ್ ಅಷ್ಟೇ, ದೊಡ್ಡ ಆಕ್ಸಿಡೆಂಟ್ ಅಲ್ಲ ಎಂದಿದ್ದಾರೆ.

ಮಾಧ್ಯಮಗಳಿಗೆ ಸೆಲ್ಯೂಟ್​ ಹೊಡೆದ ಶಾಸಕ ಹ್ಯಾರಿಸ್: ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಕಾರು ಅಪಘಾತ ಪ್ರಕರಣದಲ್ಲಿ ಪುತ್ರ ನಲಪಾಡ್ ಕಾರು ಚಾಲನೆ ಬಗ್ಗೆ ಪ್ರತಿಕ್ರಿಯೆಗೆ ಶಾಸಕ ಹ್ಯಾರಿಸ್ ನಿರಾಕರಿಸಿದ್ದಾರೆ.  ಮಾಧ್ಯಮಗಳಿಗೆ ನಮಸ್ಕಾರ ಹೊಡೆದು ಹೊರಟ ಶಾಸಕ ಹ್ಯಾರಿಸ್, ಕೆಪಿಸಿಸಿ ಕಚೇರಿಯಲ್ಲಿ ಸಭೆ ಬಳಿಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Published On - 4:27 pm, Tue, 11 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ