ಆಸ್ತಿಗಾಗಿ ಕಿತ್ತಾಟ: ಕಾರು ಹತ್ತಿಸಿ ಅಣ್ಣನನ್ನೇ ಹತೈಗೈದ ಸಹೋದರರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 3:00 PM

ಹುಟ್ಟುತ್ತಾ ಅಣ್ಣ-ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿನಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ಸಹೋದರರೇ ಕಾರು ಹತ್ತಿಸಿ ಅಣ್ಣನನ್ನೇ ಹತೈಗೈದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳು ಬಂಧಿಸಿದ್ದಾರೆ. ಕಾರು ಹತ್ತಿಸಿ ಹತ್ಯೆ ಮಾಡಿರುವ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

ಆಸ್ತಿಗಾಗಿ ಕಿತ್ತಾಟ: ಕಾರು ಹತ್ತಿಸಿ ಅಣ್ಣನನ್ನೇ ಹತೈಗೈದ ಸಹೋದರರು
ಬಂಧಿತ ಆರೋಪಿಗಳು
Follow us on

ಶಿವಮೊಗ್ಗ, ಮಾ.08: ಆಸ್ತಿಗಾಗಿ, ಇಬ್ಬರು ಸಹೋದರರು ಸೇರಿ ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆಗೈದ ಘಟನೆ​​ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ರಫೀಕ್(45) ಮೃತ ವ್ಯಕ್ತಿ. ಆರೋಪಿಗಳಾದ ಇನಾಯತ್​​ ಮತ್ತು ಅಕ್ಕನ ಮಗ ಸಮೀರ್, ​ರಸ್ತೆ ಬಳಿ ಕಾರು ಹತ್ತಿಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳು ಬಂಧಿಸಿದ್ದಾರೆ. ಕಾರು ಹತ್ತಿಸಿ ಹತ್ಯೆ ಮಾಡಿರುವ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

ತನಿಖೆ ಬಳಿಕ ಕೊಲೆ ಕಾರಣ ಬಾಯ್ಬಿಟ್ಟ ಆರೋಪಿಗಳು

ಇನ್ನು ಕಾರು ಹತ್ತಿಸಿದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರಫೀಕ್‌, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಈ ಕುರಿತು ಸ್ಥಳೀಯರು ಪೊಲೀಸರು ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು, ಈ ಸಂಬಂಧ ಆನಂದಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಆದರೆ, ಆರೋಪಿಗಳು ಪೊಲೀಸರಿಗೆ ಯಾವ ಸಾಕ್ಷಿಯು ಸಿಗಬಾರದೆಂದು ಸಾಗರ ತಾಲೂಕಿನ ಆನಂದಪುರದಲ್ಲಿರುವ ಮುರುಘಾ ಮಠದ ಆವರಣದಲ್ಲಿ ಬಟ್ಟೆ ಬದಲಿಸಿಕೊಂಡಿದ್ದರು. ಈ ದೃಶ್ಯವೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ, ಇದು ಕುಟುಂಬದವರೇ ಆಸ್ತಿಗಾಗಿ ಮಾಡಿದ ಕೊಲೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಶಿವಮೊಗ್ಗ: ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ; ಬೆಚ್ಚಿಬಿದ್ದ ಜನ 

ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ; 4 ದಿನದ ಹಸುಗೂಸು ಸಾವು

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ 4 ದಿನದ ಹಸುಗೂಸು ಸಾವನ್ನಪ್ಪಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ವೈದ್ಯರ ವಿರುದ್ಧ ಮೃತ ಮಗುವಿನ ಸಂಬಂಧಿಕರು ಆರೋಪಿಸಿದ್ದಾರೆ. 4 ದಿನದ ಹಿಂದೆ ಹೆರಿಗೆಗಾಗಿ ಕವಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೇ ವೈದ್ಯರ ನಿರ್ಲಕ್ಷ್ಯ ತೋರಿದ್ದಾರೆ. ಮಕ್ಕಳ ತಜ್ಞ ವೈದ್ಯ‌ ಶ್ರೀರಾಮ್ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನಲೆ ಜಿಲ್ಲಾ ಸರ್ಜನ್ ಡಾ.ರವೀಂದ್ರ ಅವರು ಈ ಕುರಿತು ಸೂಕ್ತ ಕ್ರಮದ ಭರವಸೆ‌ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Fri, 8 March 24