AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ..

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
Follow us
TV9 Web
| Updated By: Rakesh Nayak Manchi

Updated on:Sep 17, 2022 | 8:29 AM

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ ಮಾಡಿದೆ. ನಗರದ ಉದಯಗಿರಿಯಲ್ಲಿರುವ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿ ಮುಡಾಗೆ ಸೇರಿದ ನಿವೇಶದ ದಾಖಲೆ ಪೋರ್ಜರಿ ಮಾಡಿರುವ ರಾಜಾರಾಂ ಮತ್ತು ತಂಡ ನಿವೇಶನದ ಮೇಲೆ‌ ಬ್ಯಾಂಕ್​ನಲ್ಲಿ ಸಾಲ ಪಡೆಯಲು ಯತ್ನಿಸಿದೆ. ನಕಲಿ ದಾಖಲೆ ಸೃಷ್ಟಿಸಲು ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ.

ನಗರದ ರಾಮಕೃಷ್ಟನಗರದ ಐ ಬ್ಲಾಕ್​ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳು ಹಾಗೂ ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್​ಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾ, ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೊಹಮ್ಮದ್ ಶಹಭಾಜ್ ಮಲ್ಲಿಕ್, ಭಾಸ್ಕರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಪೊಲೀಸರ ತೀವ್ರ ವಿಚಾರಣೆ ನಡುವೆ ಆರೋಪಿಗಳು ಈ ಹಿಂದೆ ನಕಲಿ ದಾಖಲೆ ಸೃಷ್ಟಿಸಿ ಅನೇಕ ನಿವೇಶನಗಳನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sat, 17 September 22

ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್