ಬೆಂಗಳೂರು: ಸಮೋಸ ತಿನ್ನುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಮುಜುಡಾ @ ಮುಜಾಹಿದ್ ಎಂಬುವನನ್ನು ಜಾಫರ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಮೋಸ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಾಫರ್ ಮಾರಕಾಸ್ತ್ರದಿಂದ ಹಲ್ಲೆಗೈದಿದ್ದಕ್ಕೆ ಮುಜುಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿ ಜೆ ಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಜಾಫರ್ನನ್ನು ಬಂಧಿಸಿದ್ದಾರೆ.
Follow us on
ಬೆಂಗಳೂರು: ಸಮೋಸ ತಿನ್ನುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ.
ಮುಜುಡಾ @ ಮುಜಾಹಿದ್ ಎಂಬುವನನ್ನು ಜಾಫರ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಮೋಸ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಾಫರ್ ಮಾರಕಾಸ್ತ್ರದಿಂದ ಹಲ್ಲೆಗೈದಿದ್ದಕ್ಕೆ ಮುಜುಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿ ಜೆ ಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಜಾಫರ್ನನ್ನು ಬಂಧಿಸಿದ್ದಾರೆ.