Santro Ravi Arrested: ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದ ಆಪ್ತನಿಂದಲೇ ಗುಜರಾತ್​ನಲ್ಲಿ ಸಿಕ್ಕ ಸ್ಯಾಂಟ್ರೋ ರವಿ!

ಮಂತ್ರಾಲಯದ ರಾಯರ ದರ್ಶನಕ್ಕೆ ಬಂದಿದ್ದವನಿಂದಲೇ ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅರೇ ಅದು ಹೇಗೆ ಅಂತೀರಾ? ಈ ಕೆಳಗಿನಂತಿದೆ ನೋಡಿ ಸ್ಯಾಂಟ್ರೋ ಸಿಕ್ಕಿದ್ದೇಗೆ ಎಂದು.

Santro Ravi Arrested: ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದ ಆಪ್ತನಿಂದಲೇ ಗುಜರಾತ್​ನಲ್ಲಿ ಸಿಕ್ಕ ಸ್ಯಾಂಟ್ರೋ ರವಿ!
ಸ್ಯಾಂಟ್ರೋ ರವಿ
Follow us
TV9 Web
| Updated By: Rakesh Nayak Manchi

Updated on:Jan 13, 2023 | 9:47 PM

ಬೆಂಗಳೂರು:  ಕುಖ್ಯಾತ ಕ್ರಿಮಿನಲ್‌ ಹಾಗೂ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಮೈಸೂರಿನ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿಯನ್ನು (Santro Ravi) ಕರ್ನಾಟಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ಓಡಾಡುತ್ತಿದ್ದ ಸ್ಯಾಂಟ್ರೋ  11 ದಿನಗಳ ಬಳಿಕ ಇಂದು(ಜನವರಿ 13) ಗುಜರಾತ್​ನ ಅಹಮದಾಬಾದ್​ನಲ್ಲಿ(Ahmedabad)  ಸಿಕ್ಕಿಬಿದ್ದಿದ್ದಾನೆ.  ಸ್ಯಾಂಟ್ರೋ ರವಿ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದು ಮಂತ್ರಾಲಯದ(Mantralaya) ರಾಯರ ದರ್ಶನಕ್ಕೆ ಬಂದಿದ್ದವನಿಂದಲೇ ಎನ್ನುವುದು ವಿಶೇಷ.

ಇದನ್ನೂ ಓದಿ: Santro Ravi Arrested: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೂ ಬಂಧನ, ಗುಜರಾತ್​ನಲ್ಲಿ ಪೊಲೀಸ್ ಬಲೆಗೆ

ಹೌದು..ಸ್ಯಾಂಟ್ರೋ ರವಿ ಜಾಮೀನು ಅರ್ಜಿಯನ್ನು ಆಪ್ತ ಲಷ್ಮಿತ್ ಅಲಿಯಾಸ್ ಚೇತನ್ ಎನ್ನುವಾತ ಹಾಕಿದ್ದ. ಈತ ನಿನ್ನೆ(ಜ.12) ಮಂತ್ರಾಲಯದ ರಾಯರ ದರ್ಶನಕ್ಕೆ ಬಂದಿದ್ದ. ಈ ವೇಳೆ ರಾಯಚೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತ ಲಷ್ಮಿತ್ ಅಲಿಯಾಸ್ ಚೇತನ್​ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಆ ವೇಳೆ ಸ್ಯಾಂಟ್ರೋ ರವಿ ಬಗ್ಗೆ ಅಸಲಿ ಸತ್ಯ ಬಾಯ್ಬಿಟ್ಟಿದ್ದಾನೆ.

ಕೂಡಲೇ ಎಸ್​​ಪಿ ನಿಖಿಲ್ ಅವರು ಚೇತನ್​ನನ್ನು ಮೈಸೂರಿಗೆ ಕರೆದೊಯ್ದಿದ್ದು, ಅಲ್ಲಿ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಚೇತನ್ ನೀಡಿದ ಮಾಹಿತಿಯಿಂದ ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಬಲೆ ಬೀಸಿದ್ದಾರೆ. ಅಂತಿಮವಾಗಿ ಸ್ಯಾಂಟ್ರೋ ರವಿ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಇನ್ನು ಈ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿದ್ದು, ರಾಯಚೂರು ಎಸ್ಪಿ, ಮಂಡ್ಯ ಎಸ್ಪಿ, ರಾಮನಗರ ಎಸ್ಪಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಅಕ್ರಮ ವರ್ಗಾವಣೆ, ವಂಚನೆ, ಲೈಂಗಿಕ ದೌರ್ಜನ್ಯ, ಕೌಂಟುಬಿಕ ದೌರ್ಜನ್ಯ, ಲೇವಾದೇವಿ ಪ್ರಕರಣ ಹೀಗೆ ಹತ್ತಾರು ಕೇಸ್​ಗಳ ಕರ್ಮಕಾಂಡ ಹೊರ ಬರುತ್ತಿದ್ದಂತೆಯೇ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ಬಂಧನಕ್ಕಾಗಿ ಹಿರಿಯ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡಗಳನ್ನು ರಚಿಸಿ ಎಡಿಜಿಪಿ ಅಲೋಕ್‌ ಕುಮಾರ್ ಆದೇಶಿಸಿದ್ದರು. ಕೊನೆಗೂ ಪೊಲೀಸ್​​ ವಿಶೇಷ ತನಿಖಾ ತಂಡ ಸ್ಯಾಂಟ್ರೋ ರವಿಯನ್ನು ಬಂಧಿಸಿದೆ.

ಒಟ್ಟಿನಲ್ಲಿ ರಾಯರ ದರ್ಶನಕ್ಕೆ ಬಂದಿದ್ದ ಆಪ್ತನಿಂದಲೇ ಸ್ಯಾಂಟ್ರೋ ರವಿ ಸಿಕ್ಕಿಬಿದ್ದಿದ್ದಾನೆ.

Published On - 6:24 pm, Fri, 13 January 23

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್