ಮಹಾರಾಷ್ಟ್ರ: ಶಾಲೆಯಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್ ಬಂಧನ

|

Updated on: Aug 29, 2024 | 12:35 PM

ಶಾಲೆಯೊಂದರಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್​ಬಾರ್ ಜಿಲ್ಲೆಯ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ: ಶಾಲೆಯಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್ ಬಂಧನ
ವಿದ್ಯಾರ್ಥಿನಿ
Follow us on

ಶಾಲೆಯೊಂದರಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್​ಬಾರ್ ಜಿಲ್ಲೆಯ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿನಿ ತನ್ನ ಪೋಷಕರ ಬಳಿ ಈ ವಿಚಾರ ಹೇಳಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಲೆಯ ಒಳಗಿದ್ದ ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿಯು ತನ್ನ ಫೋನ್ ಅನ್ನು ವಿದ್ಯಾರ್ಥಿನಿಗೆ ಕೊಡುತ್ತಿರುವುದನ್ನು ಕಾಣಬಹುದು.

ಘಟನೆಯ ಅರಿವು ಪಡೆದ ನಂತರ ಶಾಲಾ ಆಡಳಿತವು ಆತನನ್ನು ಕೆಲಸದಿಂದ ತೆಗೆದುಹಾಕಿದೆ. ಶಾಲೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ತನ್ನ ಫೋನ್‌ನಲ್ಲಿ ಅಶ್ಲೀಲ ವಿಷಯವನ್ನು ತೋರಿಸಿದ್ದಾನೆ. ಇಂದು ವಿದ್ಯಾರ್ಥಿನಿಯ ಕುಟುಂಬಸ್ಥರು ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಆದಷ್ಟು ಬೇಗ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಮಹಾರಾಷ್ಟ್ರದ ಬದ್ಲಾಪುರ್ ಖಾಸಗಿ ಶಾಲೆಯೊಂದರಲ್ಲಿ ಅಟೆಂಡರ್‌ ಇಬ್ಬರು ಶಿಶುವಿಹಾರದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿತ್ತು.

ಮತ್ತಷ್ಟು ಓದಿ: ಗುಜರಾತ್: ಸ್ನೇಹಿತನ 3 ವರ್ಷದ ಮಗು ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ಈ ಘಟನೆಯು ಭಾರೀ ಪ್ರತಿಭಟನೆಗೆ ಕಾರಣವಾಯಿತು, ನಂತರ ಮಹಾರಾಷ್ಟ್ರ ಸರ್ಕಾರವು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ