AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ

ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು, ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದರು. ಆಕೆಯನ್ನು ಲಕ್ನೋದ ಕೃಷ್ಣನಗರದ ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ
ಕ್ರೈಂ
ನಯನಾ ರಾಜೀವ್
|

Updated on: Sep 25, 2024 | 8:13 AM

Share

ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು, ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದರು. ಆಕೆಯನ್ನು ಲಕ್ನೋದ ಕೃಷ್ಣನಗರದ ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಆಕೆಯ ಬ್ಯಾಗನ್ನು ಕಸಿದುಕೊಂಡು ಕಾರಿನೊಳಗೆ ಎಳೆದೊಯ್ದು ಕೃಷ್ಣಾನಗರದ ಹೋಟೆಲ್‌ಗೆ ತೆರಳಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಅಶ್ಲೀಲ ಚಿತ್ರಗಳು ಮತ್ತು ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಘಟನೆಯನ್ನು ಯಾರಿಗಾದರೂ ತಿಳಿಸಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ನಂತರ ಇಬ್ಬರೂ ಕಾರಿನಲ್ಲಿ ಕರೆದೊಯ್ದು ಮನೆಯ ಬಳಿ ಎಸೆದಿದ್ದರು, ಆಕೆಯ ತಂದೆ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ತಂದೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಲಕ್ನೋ ದಕ್ಷಿಣ ವಲಯ ಪೊಲೀಸ್ ಉಪ ಆಯುಕ್ತ ಕೇಶವ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ; ಕುಡಿದ ಮತ್ತಲ್ಲಿ ಸ್ನೇಹಿತನನ್ನ ಒದ್ದು ಕೊಂದ

ಪೊಲೀಸರು ಹೋಟೆಲ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ವಶಪಡಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಂಗಾಳದಲ್ಲಿ 3 ವರ್ಷದ ಬಾಲಕಿ ಮೇಲೆ ಬಿಜೆಪಿ ನಾಯಕನ ತಂದೆಯಿಂದ ಅತ್ಯಾಚಾರ ಆಘಾತಕಾರಿ ಘಟನೆಯೊಂದರಲ್ಲಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ್ ಹರಿಪುರ ಪ್ರದೇಶದಲ್ಲಿ ಬಿಜೆಪಿಯ ಪಂಚಾಯತ್ ಅಭ್ಯರ್ಥಿಯ ತಂದೆ ಮನೋರಂಜನ್ ಹಲ್ದರ್ ಎಂಬಾತ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಜಿಲ್ಲೆಯ ಬಿಜೆಪಿ ಬೂತ್ ಅಧ್ಯಕ್ಷರಾಗಿದ್ದಾರೆ. ಈ ಘಟನೆಯ ನಂತರ 3 ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಂತ್ರಸ್ತೆಯ ತಂದೆಯೊಂದಿಗೆ ಮಾತನಾಡಿದ್ದಾರೆ. ಅವರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಆಗ ಅವರ ಪತ್ನಿ ಮಧ್ಯಾಹ್ನ ಕರೆ ಮಾಡಿ ಇಡೀ ಘಟನೆಯ ಬಗ್ಗೆ ಮಾಹಿತಿ ನೀಡಿದರು, ನಂತರ ಅವರು ಮನೆಗೆ ಧಾವಿಸಿದರು. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ