ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ

|

Updated on: Sep 25, 2024 | 8:13 AM

ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು, ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದರು. ಆಕೆಯನ್ನು ಲಕ್ನೋದ ಕೃಷ್ಣನಗರದ ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ
ಕ್ರೈಂ
Follow us on

ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು, ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದರು. ಆಕೆಯನ್ನು ಲಕ್ನೋದ ಕೃಷ್ಣನಗರದ ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಆಕೆಯ ಬ್ಯಾಗನ್ನು ಕಸಿದುಕೊಂಡು ಕಾರಿನೊಳಗೆ ಎಳೆದೊಯ್ದು ಕೃಷ್ಣಾನಗರದ ಹೋಟೆಲ್‌ಗೆ ತೆರಳಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಅಶ್ಲೀಲ ಚಿತ್ರಗಳು ಮತ್ತು ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಘಟನೆಯನ್ನು ಯಾರಿಗಾದರೂ ತಿಳಿಸಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ನಂತರ ಇಬ್ಬರೂ ಕಾರಿನಲ್ಲಿ ಕರೆದೊಯ್ದು ಮನೆಯ ಬಳಿ ಎಸೆದಿದ್ದರು, ಆಕೆಯ ತಂದೆ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.
ತಂದೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಲಕ್ನೋ ದಕ್ಷಿಣ ವಲಯ ಪೊಲೀಸ್ ಉಪ ಆಯುಕ್ತ ಕೇಶವ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ; ಕುಡಿದ ಮತ್ತಲ್ಲಿ ಸ್ನೇಹಿತನನ್ನ ಒದ್ದು ಕೊಂದ

ಪೊಲೀಸರು ಹೋಟೆಲ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ವಶಪಡಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಂಗಾಳದಲ್ಲಿ 3 ವರ್ಷದ ಬಾಲಕಿ ಮೇಲೆ ಬಿಜೆಪಿ ನಾಯಕನ ತಂದೆಯಿಂದ ಅತ್ಯಾಚಾರ
ಆಘಾತಕಾರಿ ಘಟನೆಯೊಂದರಲ್ಲಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ್ ಹರಿಪುರ ಪ್ರದೇಶದಲ್ಲಿ ಬಿಜೆಪಿಯ ಪಂಚಾಯತ್ ಅಭ್ಯರ್ಥಿಯ ತಂದೆ ಮನೋರಂಜನ್ ಹಲ್ದರ್ ಎಂಬಾತ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಜಿಲ್ಲೆಯ ಬಿಜೆಪಿ ಬೂತ್ ಅಧ್ಯಕ್ಷರಾಗಿದ್ದಾರೆ. ಈ ಘಟನೆಯ ನಂತರ 3 ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಂತ್ರಸ್ತೆಯ ತಂದೆಯೊಂದಿಗೆ ಮಾತನಾಡಿದ್ದಾರೆ. ಅವರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಆಗ ಅವರ ಪತ್ನಿ ಮಧ್ಯಾಹ್ನ ಕರೆ ಮಾಡಿ ಇಡೀ ಘಟನೆಯ ಬಗ್ಗೆ ಮಾಹಿತಿ ನೀಡಿದರು, ನಂತರ ಅವರು ಮನೆಗೆ ಧಾವಿಸಿದರು. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ