AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಸರ್ಕಾರಿ ಶಾಲೆಯ ಪ್ರಾಂಶುಪಾಲರ ಬಂಧನ

ಐವತ್ತಕ್ಕೂ  ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹರ್ಯಾಣದ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಹರ್ಯಾಣ ರಾಜ್ಯ ಮಹಿಳಾ ಆಯೋಗವು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ ನಂತರ ಬಂಧಿಸಲಾಗಿದೆ.

ಹರ್ಯಾಣ: 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಸರ್ಕಾರಿ ಶಾಲೆಯ ಪ್ರಾಂಶುಪಾಲರ ಬಂಧನ
ಪ್ರಾಂಶುಪಾಲImage Credit source: India Today
Follow us
ನಯನಾ ರಾಜೀವ್
|

Updated on: Nov 06, 2023 | 8:29 AM

ಐವತ್ತಕ್ಕೂ  ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹರ್ಯಾಣದ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಹರ್ಯಾಣ ರಾಜ್ಯ ಮಹಿಳಾ ಆಯೋಗವು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ ನಂತರ ಬಂಧಿಸಲಾಗಿದೆ.

ಶಾಲೆಯ ಕೆಲವು ವಿದ್ಯಾರ್ಥಿನಿಯರ ಸೆಪ್ಟೆಂಬರ್ 14 ರಂದು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಅಕ್ಟೋಬರ್ 30 ರಂದು ಮಾತ್ರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಯೋಗ ಹೇಳಿದೆ. ಈ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚಿಸಲಾಗಿದೆ. ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆಡಳಿತ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಶಿಕ್ಷಣ ಇಲಾಖೆ ಆರೋಪಿಯನ್ನು ಅಕ್ಟೋಬರ್ 27ರಂದು ಅಮಾನತುಗೊಳಿಸಿದ್ದು ಮಾತ್ರ ಮುಂದಿನ ಕ್ರಮ ಕೈಗೊಂಡಿಲ್ಲ.

ಮತ್ತಷ್ಟು ಓದಿ: ಕೋಲಾರ: ಎರಡು ಕುಟುಂಬಗಳ ಜಗಳ ಕೊಲೆಯಲ್ಲಿ ಅಂತ್ಯ; ಹತ್ಯೆ ಹಿಂದಿನ ಮಾಸ್ಟರ್‌ ಮೈಂಡ್​ಗೆ ಗುಂಡೇಟು

ಹರ್ಯಾಣದ ಮಹಿಳಾ ಆಯೋಗವು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ್ದು, ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 55 ವರ್ಷದ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.

ನಾವು ವಿದ್ಯಾರ್ಥಿನಿಯರಿಂದ ಪ್ರಾಂಶುಪಾಲರ ವಿರುದ್ಧ 60 ಲಿಖಿತ ದೂರುಗಳನ್ನು ಸ್ವೀಕರಿಸಿದ್ದೇವೆ. ಈ ಪೈಕಿ 50 ದೂರುಗಳು ಆರೋಪಿಗಳಿಂದ ದೈಹಿಕ ಕಿರುಕುಳಕ್ಕೆ ಸಂಬಂಧಿಸಿದ್ದಾಗಿತ್ತು.

ಆರೋಪಿ ತನ್ನ ಛೇಂಬರ್​ಗೆ ಕರೆಸಿಕೊಂಡು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಜಿಂದ್ ಜಿಲ್ಲೆಯ ಪೊಲೀಸರು ಸೋಮವಾರ ಪ್ರಾಂಶುಪಾಲರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ), 341 ಮತ್ತು 342 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ