ತೀರ್ಥಹಳ್ಳಿ; ಇಡ್ಲಿ ವಿಚಾರಕ್ಕೆ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಇಡ್ಲಿ ವಿಚಾರಕ್ಕೆ ಸಂಬಂಧಿಸಿ ಉಂಟಾದ ಜಗಳ ಕಾರ್ಮಿಕರಿಬ್ಬರ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಕುರುವಳ್ಳಿ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ತೀರ್ಥಹಳ್ಳಿ; ಇಡ್ಲಿ ವಿಚಾರಕ್ಕೆ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯ, ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 19, 2023 | 3:34 PM

ಬೆಂಗಳೂರು: ಇಡ್ಲಿ ವಿಚಾರಕ್ಕೆ ಸಂಬಂಧಿಸಿ ಉಂಟಾದ ಜಗಳ ಕಾರ್ಮಿಕರಿಬ್ಬರ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಕುರುವಳ್ಳಿ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕುರುವಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಡ್ಲಿ ತಿನ್ನುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಾವಣಗೆರೆಯ ಇಬ್ಬರು ಕಟ್ಟಡ ಕಾರ್ಮಿಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ನಗರದ ನಿವಾಸಿಗಳಾದ ಬೀರೇಶ್ (35) ಮತ್ತು ಮಂಜಪ್ಪ (46) ಮೃತ ದುರ್ದೈವಿಗಳು ಎಂದು ಪೊಲೀಸರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ರಾಜಣ್ಣ ಎಂಬಾತ ಬೆಳಿಗ್ಗೆ ಐವರು ಕೆಲಸಗಾರರಿಗೆ ಇಡ್ಲಿ ತಯಾರಿಸಿದ್ದರು. ಊಟಕ್ಕೂ ಅದನ್ನೇ ಸೇವಿಸುವಂತೆ ಹೇಳಿದಾಗ ಕಾರ್ಮಿಕರು ತಗಾದೆ ತೆಗೆದರು. ನಂತರ ಮೂವರ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿತ್ತು. ಇದರಿಂದ ಕುಪಿತಗೊಂಡ ಬೀರೇಶ್ ಮತ್ತು ಮಂಜಪ್ಪ ಎಂಬುವರು ರಾಜಣ್ಣನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಸೇಡು ತೀರಿಸಿಕೊಳ್ಳಲು ಮುಂದಾದ ರಾಜಣ್ಣ, ಕಾರ್ಮಿಕರು ರಾತ್ರಿ ಮಲಗಿದ್ದ ವೇಳೆ ಗುದ್ದಲಿಯಿಂದ ಕಡಿದು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ವಿಡಿಯೋ ನೋಡಿ; ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ, ಸಂಚಾರಕ್ಕೆ ಅಡಚಣೆ

ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿಕೆ ಕೂಡ ಅಪರಾಧ ನಡೆದ ಸ್ಥಳವನ್ನು ಪರಿಶೀಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ