ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ
ಕ್ರೈಂ

Updated on: Aug 19, 2024 | 8:00 AM

ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸ್ ತಂಡವು ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದೆ.

ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಚೂರಿ ಇರಿತದ ಬಗ್ಗೆ ಮೊದಲು ಮಾಹಿತಿ ಸಿಕ್ಕಿತು.
ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಾಳು ಮನೋಜ್ ಶರ್ಮಾನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲಾರ: ಹೆಂಡತಿ ಮೇಲೆ ಅನುಮಾನ, 18 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಪತಿ! ಆಗಿದ್ದೇನು?

ದೆಹಲಿ ಪೊಲೀಸರು ಕೊಲೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ, ಕೋಪದ ಕೈಯಲ್ಲಿ ಬುದ್ಧಿಕೊಡಬಾರದು ಎಂಬುದಕ್ಕೆ ಇದೊಂದು ನಿದರ್ಶನ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us