AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ; ಇಬ್ಬರು ಆರೋಪಿಗಳ ಬಂಧನ

ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಚಾಕೋಲೇಟ್​ಗಳನ್ನು ಲ್ಯಾಬ್​ಗೆ ಕಳುಹಿಸಿದ್ದಾರೆ.

ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ; ಇಬ್ಬರು ಆರೋಪಿಗಳ ಬಂಧನ
ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇ್​ಟ್​ ಮಾರಾಟ
ಅಶೋಕ್​ ಪೂಜಾರಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 21, 2023 | 11:41 AM

Share

ಮಂಗಳೂರು, ಜು.21: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಮಂಗಳೂರಿ(Mangalore)ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಹೈಲ್ಯಾಂಡ್​​​​ ಬಳಿಯ ಅಂಗಡಿಯಲ್ಲಿ ಬಾಂಗ್ ಮಿಶ್ರಿ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45), ಹಾಗೂ ಮಂಗಳೂರಿನ ಮನೋಹರ್ ಶೇಟ್(49) ಎಂಬಿಬ್ಬರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಚಾಕೋಲೇಟ್ ಒಳಗೆ ಕಿಕ್ ಕೊಡೊ ಡ್ರಗ್ಸ್

ಇನ್ನು ಆರೋಪಿಯಾದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್ ತನ್ನ ಗೂಡಂಗಡಿಯಲ್ಲಿ 5,500 ಮೌಲ್ಯದ “ಮಹಾಶಕ್ತಿ ಮುನಕ್ಕಾ”, “ಬಮ್ ಬಮ್ ಮುನಕ್ಕಾ ವಟಿ” “ಪಾವರ್ ಮುನಕ್ಕಾ ವಟಿ” ಹಾಗೂ “ಆನಂದ ಚೂರ್ಣ ಎಂದು ನಮೂದು ಇರುವ ಚಾಕೊಲೇಟ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ. ಇತ್ತ ನಗರದ ಕಾರ್ ಸ್ಟ್ರೀಟ್ ಬಳಿ ಉತ್ತರ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ, ಬಾಂಗ್ ಮಿಶ್ರಿತ ಚಾಕೋಲೇಟ್​ನ್ನು ಮಾರಾಟ ಮಾಡುತ್ತಿದ್ದ ಆರೋಪಿ ಮನೋಹರ್ ಶೇಟ್ ಸಹಿತ, ಮೂರು ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ಇಟ್ಟಿದ್ದ ಸುಮಾರು 48,000 ಮೌಲ್ಯದ ಚಾಕೋಲೇಟ್​ನ್ನ ವಶಕ್ಕೆ ಪಡೆದು, ಚಾಕೊಲೇಟ್​ಗಳನ್ನು ಲ್ಯಾಬ್​ಗೆ ಕಳುಹಿಸಿದ್ದಾರೆ.

ಇದನ್ನೂ ಓದಿ:ತುಮಕೂರು ರಿಂಗ್ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ; ವಾಹನ ಸವಾರರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ

ರಥಸಪ್ತಮಿಯ ಓಕಳಿ ಆಟದ ಯುವಕ ಯುವತಿಯರೇ ಚಾಕ್ಲೇಟ್ ಡ್ರಗ್​ನ ಟಾರ್ಗೆಟ್

ಇನ್ನು ಮಂಗಳೂರಿನ ಕಾರ್ ಸ್ಟ್ರೀಟ್​ನಲ್ಲಿರುವ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವರ್ಷಕ್ಕೊಮ್ಮೆ ರಥ ಸಪ್ತಮಿಯ ದಿನ ರಥೋತ್ಸವವಾಗುತ್ತದೆ. ರಥೋತ್ಸವದ ನಂತರದ ದಿನ ಕಲರ್ ಫುಲ್ ಓಕುಳಿ ಆಟದಲ್ಲಿ ಭರ್ಜರಿ ಡ್ಯಾನ್ಸ್ ಕುಣಿತ ಹಾಕುತ್ತಿದ್ದ ಯುವಕ ಯುವತಿಯರನ್ನೇ ಟಾರ್ಗೆಟ್​​ ಮಾಡಿಕೊಂಡ ಇವರು ಅವರಿಗೆ​ ಬಾಂಗ್ ಮಾರಾಟ ಮಾಡುತ್ತಿದ್ದರು.

ಕಳೆದುಕೊಂಡಿದ್ದ ಮೊಬೈಲ್ ಪೋನ್​ಗಳನ್ನು ಜನರಿಗೆ ಹುಡುಕಿ ಕೊಟ್ಟ ಕೋಲಾರ ಪೊಲೀಸರು

ಕೋಲಾರ: ಕಳೆದುಕೊಂಡಿದ್ದ ಮೊಬೈಲ್ ಪೋನ್​ಗಳನ್ನು ಸಿ.ಇ.ಐ.ಆರ್. ಪೋರ್ಟಲ್ ಮೂಲಕ‌ ಪತ್ತೆ‌ ಹಚ್ಚಿ, ಪುನಃ ಜನರಿಗೆ ಕೋಲಾರ ಪೊಲೀಸರು ಹಿಂತಿರುಗಿಸಿ ಕೊಟ್ಟಿದ್ದಾರೆ. ವಿವಿಧ ಠಾಣೆಗಳಲ್ಲಿ‌ ದಾಖಲಾಗಿದ್ದ ಸುಮಾರು 10 ಕ್ಕೂ ಹೆಚ್ಚು ಪೋನ್​ಗಳನ್ನು ಇದೀಗ ಜನರಿಗೆ ಹುಡುಕಿಕೊಟ್ಟಿದ್ದಾರೆ. ಪೋನ್​ಗಳನ್ನು ಕಳೆದುಕೊಂಡು, ಇದು ನಮಗೆ ಮತ್ತೆ ಸಿಗುವುದಿಲ್ಲವೆಂದುಕೊಂಡಿದ್ದ ಜನರಿಗೆ ಮೊಬೈಲ್​ ರೀಟರ್ನ್​ ಸಿಕ್ಕಿರುವುದು ಆಶ್ಚರ್ಯವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:04 am, Fri, 21 July 23

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್