ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಬೆಂಗಳೂರು, ಜನವರಿ 10: ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ (ganja) ಮಾರುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಕ್ಯಾಬ್ ಓಡಿಸುತ್ತಿದ್ದ ಯಾದಗಿರಿ, ವಿಜಯಪುರ ಮೂಲದ ವಿಜಯ್ ಕುಮಾರ್, ವಿಜಯ್ನನ್ನು ಬಂಧಿಸಿದ್ದು, 25 ಲಕ್ಷ ರೂ. ಮೌಲ್ಯದ 15 ಕೆಜಿ ಗಾಂಜಾ, ತೂಕದ ಮಷೀನ್, 2 ಮೊಬೈಲ್, 1 ಕಾರು ಜಪ್ತಿ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಅಕ್ರಮ ಗಾಂಜಾ ಮಾರಾಟ: ಓರ್ವ ವ್ಯಕ್ತಿಯ ಬಂಧನ
ಗದಗ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಗದಗ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಹರಣಶಿಕಾರಿ ಕಾಲೋನಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಬಾಲಪ್ಪ ಹರಣಶಿಕಾರಿ ಮನೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ದೇವಸ್ಥಾನಕ್ಕೆ ಹೋಗುತ್ತೇನೆಂದು ಹೋದವ ಶವವಾಗಿ ಪತ್ತೆ: ಜಾಕೆಟ್ ನೋಡಿ ಗಂಡನ ಶವ ಕಂಡುಹಿಡಿದ ಪತ್ನಿ
ಬಾಲಪ್ಪ ಹರಣಶಿಕಾರಿ ಹಾಗೂ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಯಲ್ಲಪ್ಪ ತೊಂಡಿಹಾಳ ಎಂಬುವರು ಗಾಂಜಾ ಸಮೇತ ಸಿಕ್ಕಿಬಿದ್ದ ಖದೀಮರನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ 15 ಸಾವಿರ ಮೌಲ್ಯದ 348 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು, ಎನ್ ಡಿಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಕಲಬುರಗಿ: ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಪುರಾವ್ ಸಾವಳಂಕೆ, ನಾಮದೇವ್ ಪವಾರ್ ಬಂಧಿತರು. ಬಂಧಿತರಿಂದ 3.68 ಲಕ್ಷ ರೂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದವು. ಪ್ರಕರಣದ ತನಿಖೆ ಬೆನ್ನತ್ತಿದ್ದಾಗ ಖದೀಮರು ಸಿಕ್ಕಿಬಿದಿದ್ದಾರೆ. ಬಂಧಿತರಿಬ್ಬರನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.