ಚಿಕಿತ್ಸೆ ಫಲಿಸದೆ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ IPS​ ಅಧಿಕಾರಿ ಆರ್. ದಿಲೀಪ್

| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2022 | 4:30 PM

ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿದ್ದ ಹಿರಿಯ ಐಪಿಎಸ್​ ಅಧಿಕಾರಿ ಆರ್. ದಿಲೀಪ್ ಇಂದು (ಡಿ. 30) ನಿಧನ ಹೊಂದಿದ್ದಾರೆ.

ಚಿಕಿತ್ಸೆ ಫಲಿಸದೆ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ IPS​ ಅಧಿಕಾರಿ ಆರ್. ದಿಲೀಪ್
ಹಿರಿಯ IPS​ ಅಧಿಕಾರಿ ಆರ್.ದಿಲೀಪ್
Follow us on

ಬೆಂಗಳೂರು: ಐಪಿಎಸ್​ ಅಧಿಕಾರಿ ಆರ್. ದಿಲೀಪ್ (Senior IPS officer R. Dileep) ಇಂದು (ಡಿ. 30) ನಿಧನ ಹೊಂದಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ದಿಲೀಪ್ ಅವರು ಡಿಐಜಿಯಾಗಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಯಕೃತ್ತು ಕಸಿ (liver transplant) ಮಾಡಿಸಲಾಗಿತ್ತು. ಚಿಕಿತ್ಸೆ ಬಳಿಕ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು. ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಅಪೋಲೊ ಅಸ್ಪತ್ರೆಗೆ ಮತ್ತೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಾಲುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೊಳ್ಳುರ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ(35), ಪರಶುರಾಮ್(32) ಮೃತರು. ಕಾಮನಟಗಿಯಿಂದ ನಾರಾಯಣಪುರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಶಾಲೆಯಿಂದ ಮಕ್ಕಳನ್ನು ಕರೆತರಲು ಮಲ್ಲಿಕಾರ್ಜುನ ಹೊರಟಿದ್ದರು ಎನ್ನಲಾಗಿದೆ. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರಿನಲ್ಲಿ ಸಾಲ ಬಾಧೆ ತಾಳಲಾರದೇ ಗುತ್ತಿಗೆದಾರ ಆತ್ಮಹತ್ಯೆ

ತುಮಕೂರು: ಸಾಲ ಬಾಧೆ ತಾಳಲಾರದೇ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತಾಲೂಕಿನ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಟಿ.ಎನ್.ಪ್ರಸಾದ್(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ.
ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಪ್ರಸಾದ್ ಶವ ಪತ್ತೆಯಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮೊಬೈಲುಗಳ್ಳರ ಅರೆಸ್ಟ್: IME ನಂಬರ್ ಸಾಕ್ಷ್ಯವನ್ನೇ ನಾಶ ಮಾಡ್ತಿದಾರೆ! ಇನ್ನು ಮೊಬೈಲ್ ಟ್ರೇಸ್​ ಮಾಡೋದು ಹೇಗೆ?

ಆನೆದಾಳಿ ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ

ಮೈಸೂರು: ಆನೆದಾಳಿ ಮಹಿಳೆ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ. ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತರು. ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಜಮೀನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ ಹಾಗೂ ಪತ್ನಿ ಸಿದ್ದೇಗೌಡ ಇದ್ದಾಗ ಈ ವೇಳೆ ಇಬ್ಬರ ಮೇಲೆ ದಾಳಿಗೆ ಆನೆ ಮುಂದಾಗಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದು, ಓಡಲು ಸಾಧ್ಯವಾಗದೆ ಆನೆ ತುಳಿತಕ್ಕೆ ಒಳಗಾಗಿ ಚಿಕ್ಕಮ್ಮ ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ಕೂಡ ಆನೆ ದಾಳಿ ಮಾಡಿದೆ. ಸದ್ಯ ಮೃತ ಕುಟುಂಬಸ್ಥರ ಭೇಟಿ ಮಾಡಿದ ಶಾಸಕ ಜಿ.ಟಿ.ದೇವೆಗೌಡ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿ ಹೊಡೆದ ಶಾಲಾ ವಾಹನ

ಮಂಡ್ಯ: ನಿಂತಿದ್ದ ಟಿಪ್ಪರ್​ಗೆ ಶಾಲಾ ವಾಹನ ಡಿಕ್ಕಿ ಹೊಡೆದಿದ್ದು, 22 ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ನಗರದ ಜ್ಯೋತಿ ಇಂಟರ್ನ್ಯಾಷನಲ್ ಹೋಟೆಲ್ ಬಳಿ ನಡೆದಿದೆ. ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ವೇಳೆ ಅವಘಡ ಉಂಟಾಗಿದೆ ಎನ್ನಲಾಗಿದೆ. ಶ್ರೀರಂಗಪಟ್ಟಣದ ಚಿನ್ಮಯ ವಿದ್ಯಾಲಯದ ಶಾಲಾ ವಾಹನ ವಾಹನದಲ್ಲಿ 42 ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಪ್ರಯಾಣ ಮಾಡುತ್ತಿದ್ದರು. ಟಿಪ್ಪರ್​ಗೆ ಡಿಕ್ಕಿಯಾದ ಪರಿಣಾಮ ಮಕ್ಕಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ತೆರಚಿದ ಗಾಯಗಳಾಗಿವೆ. ಮಂಡ್ಯ ಮಿಮ್ಸ್​ನಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಮಕ್ಕಳ ವಾರ್ಡ್​ಗೆ ಮಿಮ್ಸ್ ನಿರ್ದೇಶಕ ಡಾ.ಮಹೇಂದ್ರ ಭೇಟಿ ಪರಿಶೀಲನೆ ಮಾಡಿದರು.

ಇದನ್ನೂ ಓದಿ: ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಮುಳುಗಿ ಇಬ್ಬರು ಬೌದ್ಧ ಸನ್ಯಾಸಿಗಳ ದುರ್ಮರಣ

ಪೂರ್ವಭಾವಿ ಸಭೆಯಲ್ಲಿ ಕುಸಿದು ಬಿದ್ದು ‘ಕೈ’ ಕಾರ್ಯಕರ್ತ ಸಾವು

ತುಮಕೂರು: ಕಾರ್ಯಕ್ರಮದಲ್ಲೇ ಕುಸಿದು ಬಿದ್ದು ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ಕೊರಟಗೆರೆ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕ್ಯಾಶವಾರ ಗ್ರಾಮದ ನಾಗರಾಜಪ್ಪ(60) ಮೃತ ದುರ್ದೈವಿ. ಎಸ್.ಟಿ. ಎಸ್ಸಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ನಾಗರಾಜಪ್ಪ ಪಾಲ್ಗೊಂಡಿದ್ದರು. ಭಾಷಣ ಮುಗಿಸಿದ ತಕ್ಷಣ ವೇದಿಕೆಯಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಕೊರಟಗೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವನಪ್ಪಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:28 pm, Fri, 30 December 22