ಪ್ರತ್ಯೇಕ ಘಟನೆ: ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಅಪ್ರಾಪ್ತರು ದುರ್ಮರಣ, ಲಾಡ್ಜ್​ನಲ್ಲಿ ನೇಣಿಗೆ ಶರಣಾದ ಯುವಕ

ನಿನ್ನೆ(ಜೂ.28) ರಾತ್ರಿ ಇಬ್ಬರು ಅಪ್ರಾಪ್ತರು ಮಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುವಾಗ ಬೈಕ್​ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಪ್ರತ್ಯೇಕ ಘಟನೆ: ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಅಪ್ರಾಪ್ತರು ದುರ್ಮರಣ, ಲಾಡ್ಜ್​ನಲ್ಲಿ ನೇಣಿಗೆ ಶರಣಾದ ಯುವಕ
ಮಂಗಳೂರು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 29, 2023 | 2:16 PM

ಮಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತ(Accident)ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಷ್ಟೇ ಮುಂಜಾಗೃತೆ ವಹಿಸಿ, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರು, ಇಂತಹ ಅಪಘಾತಗಳು ಮಾತ್ರ ನಿಲ್ಲುತ್ತಿಲ್ಲ. ಇನ್ನು ಬೆಳೆದು ತಂದೆ ತಾಯಿಗಳಿಗೆ ಆಸರೆಯಾಗಬೇಕಿದ್ದ ಮಕ್ಕಳು ಅಕಾಲಿಕ ಸಾವಿಗೆ ತುತ್ತಾಗುತ್ತಿರುವುದು ವಿಷಾದನೀಯ. ಅದರಂತೆ ನಿನ್ನೆ(ಜೂ.28) ರಾತ್ರಿ ಇಬ್ಬರು ಅಪ್ರಾಪ್ತರು ಮಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುವಾಗ ಬೈಕ್​ ಡಿವೈಡರ್​ಗೆ ಡಿಕ್ಕಿಯಾಗಿ, ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು ಯುವಕರನ್ನು ಖಾಸಗಿ ಬಸ್​ನವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪವನ್ (16) ಮತ್ತು ಚಿರಾಗ್ (15) ಮೃತ ಪಟ್ಟಿದ್ದಾರೆ. ಈ ಕುರಿತು ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಡ್ಜ್​​ವೊಂದರಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಉಜಿರೆಯ ಲಾಡ್ಜ್​​ವೊಂದರಲ್ಲಿ ನೇಣುಬಿಗಿದುಕೊಂಡು ಶಿವಮೊಗ್ಗ ಮೂಲದ ಯುವಕ ಕಾರ್ತಿಕ್(29) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತದೇಹವನ್ನ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಡಹಗಲೇ ರೌಡಿಶೀಟರ್​ನನ್ನು ಅಟ್ಟಾಡಿಸಿಕೊಂಡು ಲಾಂಗ್​ನಿಂದ ಹೊಡೆದು​ ಬರ್ಬರ ಹತ್ಯೆ

ಮಂಡ್ಯ: ಹಾಡಹಗಲೇ ರೌಡಿಶೀಟರ್​ನನ್ನು ಅಟ್ಟಾಡಿಸಿಕೊಂಡು ಲಾಂಗ್​ನಿಂದ ಹೊಡೆದು​ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸುಧೀರ್ ಎಂಬಾತ ಮೃತ ರೌಡಿಶೀಟರ್.​ ನಡುರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಲಾಂಗ್​ನಿಂದ ಹೊಡೆದು ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕೃಷ್ಣರಾಜಸಾಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತದೇಹವನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಕೃಷ್ಣರಾಜಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ:Hassan News: ಬೈಕ್​ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ; ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ

ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಮೈಸೂರು: ತಾಲೂಕಿನಲ್ಲಿ ಚಿರತೆ ಕಾಟ ಹೆಚ್ಚಳವಾಗಿದ್ದ ಹಿನ್ನಲೆ ಎಸ್.ದೊಡ್ಡಪುರ ಗ್ರಾಮದ ಬಳಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಬೋನನ್ನು ಇರಿಸಿದ್ದರು. ಒಂದು ತಿಂಗಳ ಹಿಂದೆ ಇದೇ ಬೋನಿಗೆ ಒಂದು ಚಿರತೆ ಬಿದ್ದಿತ್ತು. ಇದೀಗ ಒಂದು ತಿಂಗಳ ಬಳಿಕ ಮತ್ತೊಂದು ಚಿರತೆ ಬಿದ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೆರೆ ಸಿಕ್ಕ ಚಿರತೆಯನ್ನ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Thu, 29 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ