Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರಣಿ ಅಪಘಾತಕ್ಕೆ ವ್ಯಕ್ತಿ ಸಾವು, ಮತ್ತೊಂದೆಡೆ ದೇವರ ಕೋಣ ದಾಳಿಗೆ ರೈತ ಬಲಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಎನ್​​.ಬಸವನಹಳ್ಳಿ ಗ್ರಾಮದಲ್ಲಿ ದೇವರ ಕೋಣ ದಾಳಿಗೆ ರೈತ ಬಲಿಯಾದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಸರಣಿ ಅಪಘಾತಕ್ಕೆ ವ್ಯಕ್ತಿ ಸಾವು, ಮತ್ತೊಂದೆಡೆ ದೇವರ ಕೋಣ ದಾಳಿಗೆ ರೈತ ಬಲಿ
ರೈತ ಜಯಣ್ಣ
Follow us
TV9 Web
| Updated By: ಆಯೇಷಾ ಬಾನು

Updated on: Jun 19, 2023 | 3:09 PM

ನೆಲಮಂಗಲ: ಬೆಂಗಳೂರಿನ 8ನೇ ಮೈಲಿ ಜಂಕ್ಷನ್‌ನ ಹೆಸರುಘಟ್ಟ ರಸ್ತೆಯಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಕಾರು ಚಾಲಕ ಪ್ರಖ್ಯಾತ್​​​ ಚಿನ್ನಪ್ಪ(22) ಸ್ಥಳದಲ್ಲೇ ಮೃತಪಟ್ಟಿದ್ದು ಕಾರಿನಲ್ಲಿದ್ದ ನಟರಾಜ್, ರಿಕ್ಕಿತ್, ಬಸವಗೌಡ ಎಂಬುವವರಿಗೆ ಗಾಯಗಳಾಗಿವೆ.

ಒಂದು ಬೈಕ್​​, ಎರಡು ಕಾರಿಗೆ ಹೊಂಡಾ ಕಾರು ಗುದ್ದಿದೆ. ಅಪಘಾತದಲ್ಲಿ ಒಂದು ಬೈಕ್​​, ಮೂರು ಕಾರುಗಳು ಜಖಂ ಆಗಿವೆ. ಮಾರಾಟ ಮಳಿಗೆಯ ಗೃಹಪಯೋಗಿ ವಸ್ತುಗಳು ಧ್ವಂಸವಾಗಿದ್ದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಸರಣಿ ಅಪಘಾತದ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವರ ಕೋಣ ದಾಳಿಗೆ ರೈತ ಸಾವು

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಎನ್​​.ಬಸವನಹಳ್ಳಿ ಗ್ರಾಮದಲ್ಲಿ ದೇವರ ಕೋಣ ದಾಳಿಗೆ ರೈತ ಬಲಿಯಾದ ಘಟನೆ ನಡೆದಿದೆ. ಜಯಣ್ಣ(48) ಮೃತ ದುರ್ದೈವಿ. ಬಸವನಹಳ್ಳಿ ಜಮೀನಿನಲ್ಲಿ ಜಯಣ್ಣನ ಮೇಲೆ ಲಿಂಗದಹಳ್ಳಿಯ ಉಡಸನಾಂಭ ದೇವಿಗೆ ಬಿಟ್ಟ ದೇವರ ಕೋಣ ದಾಳಿ ಮಾಡಿದೆ. ಜಯಣ್ಣ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು ಪಕ್ಕದ ಹಳ್ಳಿಯ ಪ್ರಮುಖರ ವಿರುದ್ಧ ಸೂಕ್ತ ಕ್ರಮ‌ ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಕಳೆದ 4 ವರ್ಷದಿಂದ ಸುತ್ತಮುತ್ತಲಿನ ಗ್ರಾಮದಲ್ಲಿ ಕೋಣದ ಉಪಟಳ ಹೆಚ್ಚಾಗಿದೆ. ಈ ಬಗ್ಗೆ ತಿಳಿಸಿದರೂ ಲಿಂಗದಹಳ್ಳಿ ಗ್ರಾಮಸ್ಥರು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಲಿಂಗದಹಳ್ಳಿ ಗ್ರಾಮಸ್ಥರ ವಿರುದ್ಧ ಕ್ರಮಕ್ಕೆ ಜಯಣ್ಣ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್