ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ, ಅದೃಷ್ಟವಶಾತ್ ತಪ್ಪಿದ ಪ್ರಾಣಾಪಾಯ
ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.
ಶಿವಮೊಗ್ಗ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ (Serial accident) ಸಂಭವಿಸಿರುವಂತಹ ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ ಹಿಂದೆ ಬಂದ ಇಟ್ಟಿಗೆ ತುಂಬಿದ್ದ ಲಾರಿಯೊಂದು, ಗೂಡ್ಸ್ ಆಟೋವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂದಿನಿಂದ ಗೂಡ್ಸ್ ಆಟೋಗೆ ಅಪ್ಪಳಿಸಿದೆ. ನಿಯಂತ್ರಣ ಕಳೆದುಕೊಂಡ ಗೂಡ್ಸ್ ಆಟೋ ಬಸ್ಗೆ ಡಿಕ್ಕಿ ಹೊಡೆದಿದೆ.
ಬಸ್ನಲ್ಲಿದ್ದ ಪ್ರಯಾಣಿಕರು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಇದೇ ವೇಳೆ ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಾರ್ಗೆ ಇಟ್ಟಿಗೆ ಲಾರಿ ತಗುಲಿದೆ. ಇದರಿಂದ ಹೆದ್ದಾರಿ ಬ್ಲಾಕ್ ಆಗಿ ಸಂಚಾರ ಅರ್ಧ ಗಂಟೆ ಕಾಲ ಅಸ್ತವ್ಯಸ್ತವಾಗಿತ್ತು. ಕುಂಸಿ ಪೊಲೀಸರು ಸ್ಥಳಕ್ಕೆ ತೆರಳಿ ಸುಗಮ ಸಂಚಾರಕ್ಕೆ ವ್ಯವಸ್ತೆ ಮಾಡಿದ್ದಾರೆ.
ಇದನ್ನೂ ಓದಿ: ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 8 ಸಹಶಿಕ್ಷಕರನ್ನು ಬಂಧಿಸಿದ ಸಿಐಡಿ ಪೊಲೀಸರು
ಲಾರಿ ಡಿಕ್ಕಿ, ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಬೈಕ್ಗೆ ಲಾರಿ ಡಿಕ್ಕಿ ಹೊಡೆದು ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಮೃತ ಮದುಮಗ. ಫೆಬ್ರುವರಿ 12ರಂದು ಮಂಜುನಾಥ್ ಮದುವೆ ನಿಶ್ಚಯವಾಗಿತ್ತು. ನಾಯಕನಹಟ್ಟಿಯಿಂದ ಕಾಟಪ್ಪನಹಟ್ಟಿಗೆ ವಿವಾಹ ಆಮಂತ್ರಣ ಕೊಡಲು ತೆರಳುವಾಗ ದುರ್ಘಟನೆ ಸಂಭವಿಸಿದೆ. ಮದುವೆ ಮನೆಯಲ್ಲಿ ನೀರವಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋಗಿದ್ದ ತಂದೆ ದುರ್ಮರಣ
ಮಂಡ್ಯ: ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋಗಿದ್ದ ತಂದೆ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ಮಂಡ್ಯ ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ತಂದೆ ಸವಾರ ಸಾವನ್ನಪ್ಪಿದ್ದಾರೆ. ಉದಯ್ ಕುಮಾರ್ ಮೃತ ವ್ಯಕ್ತಿ. ಪತ್ನಿ ಮತ್ತು ಮಗನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪುತ್ರ ದೀಕ್ಷಿತ್ನ 7ನೇ ವರ್ಷದ ಹುಟ್ಟುಹಬ್ಬವಿದ್ದು, ಕೇಕ್ ತರಲು ಹೋಗಿದ್ದಾಗ ಘಟನೆ ನಡೆದಿದೆ. ಮೃತ ಉದಯ್ ಕುಮಾರ್ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸುತ್ತಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ದಲಿತ ಸಂಘಟನೆ ಒತ್ತಾಯ ಮಾಡಿದೆ. ಪರಿಹಾರ ನೀಡದಿದ್ರೆ ಡಿಸಿ ಕಚೇರಿ ಮುಂದೆ ಪ್ರತಿಭಟಿಸಲು ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ: ವಿಜಯಪುರ: ಅತ್ಯಾಚಾರಕ್ಕೆ ಯತ್ನ ಆರೋಪ, ಅವಳಿ ಸಹೋದರರ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಬೈಕ್ ಮತ್ತು ಬಸ್ ಮಧ್ಯೆ ಅಪಘಾತ: ಸವಾರ ಸ್ಥಳದಲ್ಲಿಯೇ ಸಾವು
ಧಾರವಾಡ: ಬೈಕ್ ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ತಿಪ್ಪನಗೌಡ ಮರಿಗೌಡರ್ (48) ಮೃತ ವ್ಯಕ್ತಿ. ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:22 pm, Fri, 10 February 23