AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳವಳ್ಳಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ; ದೇವಸ್ಥಾನ ಹಾಗೂ ಮನೆಗೆ ಕನ್ನ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಜಡಗನಪುರದ ಮುನೇಶ್ವರ ಸ್ವಾಮಿ ದೇವಾಲಯ ಹಾಗೂ ಎರಡು ಮನೆಯಲ್ಲಿ ಕಳ್ಳತನವಾಗಿದೆ.

ಮಳವಳ್ಳಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ; ದೇವಸ್ಥಾನ ಹಾಗೂ ಮನೆಗೆ ಕನ್ನ
ದೇವಸ್ಥಾನ ಹಾಗೂ ಮನೆಯಲ್ಲಿ ಕಳ್ಳತನ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 26, 2023 | 9:17 AM

Share

ಮಂಡ್ಯ: ಮಳವಳ್ಳಿ (Malavalli) ತಾಲೂಕಿನ ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ (Robarry) ಪ್ರಕರಣಗಳು ವರದಿಯಾಗಿವೆ. ಜಡಗನಪುರದ ಮುನೇಶ್ವರ ಸ್ವಾಮಿ ದೇವಾಲಯ (Temple) ಹಾಗೂ ಎರಡು ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ದೇವಾಲಯಕ್ಕೆ ನುಗ್ಗಿ ಹುಂಡಿಯಲ್ಲಿದ್ದ ಹಣ ಹಾಗೂ ಶ್ರೀನಿವಾಸ್ ಎಂಬುವವರ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ 2 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಇನ್ನು ಸರಣಿಗಳ್ಳತನದಿಂದ ಜಡಗನಪುರದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಬೆರಳಚ್ಚು ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಕ್ರೀದ್ ಸಮೀಪಿಸುತ್ತಿರುವ ಹಿನ್ನೆಲೆ ಹೆಚ್ಚಾದ ಕುರಿ-ಮೇಕೆ ಕಳ್ಳತನ: ರೈತರು ಕಂಗಾಲು

ಬೆಂಗಳೂರಲ್ಲಿ ಸರಳಗಳ್ಳತನಕ್ಕೆ ಯತ್ನ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರವನ್ನು ಕಳ್ಳ ಖದೀಯಲು ಯತ್ನಿಸಿದ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರದಲ್ಲಿ ನಡೆದಿದೆ.

ಜೂನ್ 25 ರ 7.30 ರ ಸುಮಾರಿಗೆ ಸ್ವಪ್ನ ಎಂಬವರು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಮಹಿಳೆಯ ಸರ ಕಸಿದು ಪರಾರಿಯಾಗಲು ಖದೀಮ ಯತ್ನಿಸಿದ್ದಾನೆ. ತಕ್ಷಣ ಸ್ವಪ್ನ ಚೀರಿಕೊಂಡಿದ್ದಾರೆ. ಇದರಿಂದ ಕಳ್ಳ ಸರ ಬಿಟ್ಟು ಓಡಿ ಹೋಗಿದ್ದಾನೆ.

ಇನ್ನು ಎದುರಿನಿಂದ ಬರುತ್ತಿದ್ದ ಸ್ವಪ್ನ ತಾಯಿ ಮತ್ತು ಸಹೋದರು ಸರಗಳ್ಳನನ್ನ ಹಿಡಿಯಲು ಯತ್ನಿಸಿದ್ದಾರೆ. ಆದರೆ ಮಾರಕಾಸ್ತ್ರ ತೋರಿಸಿ ಕಳ್ಳ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ