ಲುಧಿಯಾನದ ಗುಡಿಸಲಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ 7 ಜನ ಸಜೀವ ದಹನ

Ludhiana Fire Accident: ಗುಡಿಸಲಿಗೆ ಬೆಂಕಿ ತಗುಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಸುದ್ದಿಯೊಂದು ಪಂಜಾಬ್‌ನಲ್ಲಿ ನಡೆದಿದೆ. ಮೃತರು ಬಿಹಾರದ ಸಮಸ್ತಿಪುರ ನಿವಾಸಿಗಳು ಎನ್ನಲಾಗಿದೆ.

ಲುಧಿಯಾನದ ಗುಡಿಸಲಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ 7 ಜನ ಸಜೀವ ದಹನ
ಬೆಂಕಿ ಅವಘಡ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 20, 2022 | 1:55 PM

ಲುಧಿಯಾನ: ಪಂಜಾಬ್​ನ ಲುಧಿಯಾನದಲ್ಲಿ (Ludhiana Fire Accident) ಇಂದು ಬೆಳಗ್ಗೆ ಇಲ್ಲಿನ ಗುಡಿಸಲಿನಲ್ಲಿ ಸಂಭವಿಸಿದ ಬೆಂಕಿ ಅಪಘಾತದಿಂದ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ವಲಸೆ ಕಾರ್ಮಿಕರು ಮತ್ತು ಲುಧಿಯಾನದ ಟಿಬ್ಬಾ ರಸ್ತೆಯಲ್ಲಿರುವ ಪುರಸಭೆಯ ಕಸದ ಡಂಪ್ ಯಾರ್ಡ್ ಬಳಿಯ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು ಎಂದು ಲುಧಿಯಾನದ ಸಹಾಯಕ ಪೊಲೀಸ್ ಕಮಿಷನರ್ (ಪೂರ್ವ) ಸುರೀಂದರ್ ಸಿಂಗ್ ಹೇಳಿದ್ದಾರೆ. ಗಂಡ, ಹೆಂಡತಿ ಮತ್ತು ಅವರ ಐದು ಮಕ್ಕಳು ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ. ಗುಡಿಸಲಿಗೆ ಬೆಂಕಿ ತಗುಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಸುದ್ದಿಯೊಂದು ಪಂಜಾಬ್‌ನಲ್ಲಿ ನಡೆದಿದೆ. ಮೃತರು ಬಿಹಾರದ ಸಮಸ್ತಿಪುರ ನಿವಾಸಿಗಳು ಎನ್ನಲಾಗಿದೆ. ಮಾಹಿತಿ ಪ್ರಕಾರ ವಲಸೆ ಕಾರ್ಮಿಕನ ಗುಡಿಸಲಿಗೆ ಬೆಂಕಿ ತಗುಲಿ ಮನೆಯ ದಂಪತಿ ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಘಟನೆಯು ಟಿಬ್ಬಾ ರಸ್ತೆಯಲ್ಲಿರುವ ಮಕ್ಕರ್ ಕಾಲೋನಿ ಪ್ರದೇಶದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಗುಡಿಸಲು ಕಸದ ರಾಶಿಯಿಂದ ಸುತ್ತುವರಿದಿತ್ತು ಎನ್ನಲಾಗಿದೆ. ಇದರಿಂದ ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಸ್ವಲ್ಪ ಸಮಯದ ನಂತರ ಇಡೀ ಗುಡಿಸಲು ಬೆಂಕಿಯಲ್ಲಿ ಸಿಲುಕಿಕೊಂಡಿತು ಮತ್ತು ಒಳಗೆ ಮಲಗಿದ್ದ ಇಡೀ ಕುಟುಂಬದವರು ಸುಟ್ಟು ಕರಕಲಾಗಿದ್ದಾರೆ.

ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು. ಇದಕ್ಕೂ ಮುನ್ನ ಬೆಂಕಿಯ ರಭಸಕ್ಕೆ ಒಳಗಡೆ ಮಲಗಿದ್ದವರು ಸುಟ್ಟು ಕರಕಲಾಗಿದ್ದು, ಹೊರಗೆ ಬರಲೂ ಸಾಧ್ಯವಾಗಲಿಲ್ಲ. ಮೃತರೆಲ್ಲರೂ ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿಗಳು ಎಂದು ಹೇಳಲಾಗಿದೆ. ಜೀವನೋಪಾಯ ಅರಸಿ ಎಲ್ಲರೂ ಪಂಜಾಬಿಗೆ ಹೋಗಿದ್ದರು. ಮೃತರಲ್ಲಿ ಕುಟುಂಬದ ಮುಖ್ಯಸ್ಥರು ಮತ್ತು ಮಕ್ಕಳು ಸೇರಿದ್ದಾರೆ.

ಈ ಘಟನೆಯಲ್ಲಿ ಪತಿ, ಪತ್ನಿ ಹಾಗೂ ಐವರು ಮಕ್ಕಳು ಸಾವನ್ನಪ್ಪಿದ್ದಾರೆ. ಪತಿ, ಪತ್ನಿ ಹಾಗೂ ಐವರು ಮಕ್ಕಳು ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮೃತ ದೇಹಗಳನ್ನು ವಶಪಡಿಸಿಕೊಂಡ ನಂತರ ಮೃತರನ್ನು ಸುರೇಶ್ ಸಾಹ್ನಿ (55 ವರ್ಷ), ಅವರ ಪತ್ನಿ ಅರುಣಾ ದೇವಿ (52 ವರ್ಷ), ನಾಲ್ವರು ಹೆಣ್ಣುಮಕ್ಕಳು ರಾಖಿ (15 ವರ್ಷ), ಮನಿಶಾ (10 ವರ್ಷ), ಗೀತಾ (8 ವರ್ಷ), ಚಂದಾ (5 ವರ್ಷ), ಸನ್ನಿ (2 ವರ್ಷ) ಎಂದು ಗುರುತಿಸಲಾಗಿದೆ.

ತಿಬ್ಬಾ ರಸ್ತೆಯಲ್ಲಿರುವ ಮಕ್ಕರ್ ಕಾಲೋನಿ ಪ್ರದೇಶದಲ್ಲಿನ ಕಸದ ರಾಶಿಗೆ ಹೊಂದಿಕೊಂಡಿರುವ ಕೊಳೆಗೇರಿಯಲ್ಲಿ ಮಂಗಳವಾರ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಗ್ನಿಶಾಮಕ ದಳದ ವಾಹನ ಕೆಲವೇ ಸಮಯದಲ್ಲಿ ಬೆಂಕಿಯನ್ನು ಹತೋಟಿಗೆ ತಂದಿದೆ. ಇದೇ ವೇಳೆ ಬೆಂಕಿಗೆ ಆಹುತಿಯಾಗಿ ಕೊಳೆಗೇರಿಯಲ್ಲಿ ಮಲಗಿದ್ದ ಒಂದೇ ಕುಟುಂಬದ 7 ಮಂದಿ ಸಾವಿಗೀಡಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮೃತರೆಲ್ಲರೂ ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿಗಳು. ಮೃತರಲ್ಲಿ ದಂಪತಿ ಸೇರಿದಂತೆ 5 ಮಕ್ಕಳು ಸೇರಿದ್ದಾರೆ. ಸದ್ಯಕ್ಕೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಇದರ ವಿಚಾರಣೆ ನಡೆಸುತ್ತಿದ್ದಾರೆ. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ. ಪಂಜಾಬ್ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಮೃತರ ಸಂಬಂಧಿಕರಿಗೆ ಇದುವರೆಗೆ ಯಾವುದೇ ಪರಿಹಾರದ ಮೊತ್ತವನ್ನು ನೀಡಿಲ್ಲ.

ಇದನ್ನೂ ಓದಿ: ಹರ್ಯಾಣ ಕೆಮಿಕಲ್ ಘಟಕದಲ್ಲಿ ಭಾರೀ ಬೆಂಕಿ; ದೆಹಲಿಯಿಂದ ದೌಡಾಯಿಸಿದ ಅಗ್ನಿಶಾಮಕ ದಳ

ಹರ್ಯಾಣ ಕೆಮಿಕಲ್ ಘಟಕದಲ್ಲಿ ಭಾರೀ ಬೆಂಕಿ; ದೆಹಲಿಯಿಂದ ದೌಡಾಯಿಸಿದ ಅಗ್ನಿಶಾಮಕ ದಳ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್