AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸಾವು

ನಗರದ ಶೇಷಾದ್ರಿಪುರಂನ ನಟರಾಜ್ ಥಿಯೇಟರ್ ಬಳಿ ಇಂದು ಬೆಳಿಗ್ಗೆ ಹಲ್ಲೆಗೊಳಗಾಗಿದ್ದ ರೌಡಿಶೀಟರ್​ ಗಣೇಶ (40) ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್  ಸಾವು
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 13, 2022 | 9:55 PM

Share

ಬೆಂಗಳೂರು: ನಗರದ ಶೇಷಾದ್ರಿಪುರಂನ ನಟರಾಜ್ ಥಿಯೇಟರ್ ಬಳಿ ಇಂದು ಬೆಳಿಗ್ಗೆ ಹಲ್ಲೆಗೊಳಗಾಗಿದ್ದ ರೌಡಿಶೀಟರ್​ ಗಣೇಶ (40) ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹಳೇ ದ್ವೇಷದ ಹಿನ್ನೆಲೆ  ಗಣೇಶನ ಮೇಲೆ ನಾಲ್ವರು ಆಟೋದಲ್ಲಿ ಬಂದು ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು . ಇದರಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ರೌಡಿಶೀಟರ್​ ಗಣೇಶ ಸಾವನ್ನಪ್ಪಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಸಿದ್ದಾರೆ. ಆರೋಪಿಗಳು ತಲೆಮರೆಸಿಕೊಳ್ಳಲು ಆಂಧ್ರಕ್ಕೆ ತೆರಳ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಸಾವಿನ ಮನೆಯನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಆರೋಪಿಯ ಬಂಧನ

ಒಂಟಿ ಮಹಿಳೆಯರು, ವೃದ್ದರನ್ನೇ ಟಾರ್ಗೇಟ್ ಮಾಡಿ ಚಿನ್ನಾಭರಣ ಎಗರಿಸ್ತಿದ್ದ ಆರೋಪಿಯನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ ಆನಂದ್ ಬಂಧಿತ ಆರೋಪಿ. ಆರೋಪಿ ಆನಂದ್ ಸಾವಿನ ಮನೆಯನ್ನೇ ಟಾರ್ಗೆಟ್ ಮಾಡಿಕೊಂಡು, ಬುಡುಬುಡುಕೆ ಹೇಳುತ್ತೇನೆ ಅಂತ ನೆಪದಲ್ಲಿ ಮನೆ ಬಳಿ ಬಂದಿದ್ದನು.

ಆಗ ಸ್ಮಶಾನದಲ್ಲಿ ಪೂಜೆ ಮಾಡಿಸುತ್ತೇನೆ ಅಂತ ಹೇಳಿ ದಂಪತಿಗಳ ಬಳಿಯಿದ್ದ ಚಿನ್ನಾಭರಣ 50 ಗ್ರಾಂ ಚಿನ್ನಾಭರಣ ಆರೋಪಿ ದೋಚಿದ್ದನು. ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಉಣಕಲ್ ಕೆರೆಗೆ ಬಿದ್ದು ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಪತ್ತೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡು ಯುವಕನ ಶವ ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿದ್ಯಾನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸರ್ಕಾರಿ ಬಸ್ ಪಲ್ಟಿ-10 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಹಾವೇರಿ: ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ 10 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭಿರವಾಗಿದೆ. ನಡೆದಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಾನಗರದಲ್ಲಿ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆನಂದ್​ ಅರಸೀಕೆರೆ ರೈಲ್ವೆ ಸ್ಟೇಷನ್ ಬಳಿ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.

ಈ ವೇಳೆ ನೈಟ್ ಬೀಟ್ ಇದ್ದ ಅರಸೀಕೆರೆ ಪೊಲೀಸ್ ಠಾಣಾ ಪೊಲೀಸರು ಅನುಮಾನಗೊಂಡು MCCTNS ಮೊಬೈಲ್ ಅಪ್ಲೀಕೇಷನ್ ಮೂಲಕ ಫಿಂಗರ್ ಪ್ರಿಂಟ್ ಸಂಗ್ರಹಿಸಿದ್ದರು. ಆಗ ಆರೋಪಿ ಆನಂದ್​ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನದಲ್ಲಿ ಭಾಗಿಯಾಗಿದ್ದಾನೆ ಎಂದು ಗೊತ್ತಾಗಿದೆ.

ಕೂಡಲೇ ಆನಂದನನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಂಧನದ ಬಳಿಕ ಅರಸೀಕೆರೆ ಟೌನ್ ಪೊಲೀಸರು ಸಹಚರ ಚಂದ್ರುನನ್ನು ಬಂಧಿಸಿದ್ದಾರೆ. ಬಂಧಿತ ಆನಂದ್ ಮತ್ತು ಚಂದ್ರು ಬೆಂಗಳೂರಿನಲ್ಲಿ ಮನೆಗಳ್ಳತನದಲ್ಲಿ 30 ಗ್ರಾಂ ಚಿನ್ನಾಭರಣ ಕದ್ದಿದ್ದಾಗಿ ಬಾಯ್ಬಿಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 30 ಗ್ರಾಂ. ಚಿನ್ನಾಭರಣ ಮತ್ತು 90 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಸಿಬಿ ಬಲೆಗೆ ಬಿದ್ದಿದ್ದ ಪಾಲಿಕೆ ಬಿಲ್​ ಕಲೆಕ್ಟರ್ ವಜಾ

ಧಾರವಾಡ: ಹುಬ್ಬಳ್ಳಿ-ಧಾರವಾರ ಮಹಾನಗರ ಪಾಲಿಕೆ ವಲಯ-2ರ ಬಿಲ್ ಕಲೆಕ್ಟರ್ ವೆಂಕಟೇಶ್​ ದಾಸರ್​ನನ್ನು ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ವೆಂಕಟೇಶ ದಾಸರ್ ಗುರುರಾಜ್ ಎಂಬುವರ ಬಳಿ ಲಂಚ ಪಡೆಯುವಾಗ ರೆಡ್ ​​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾನೆ.

ವೆಂಕಟೇಶ್ ಪಹಣಿ ಪತ್ರ ಕೊಡಲು ದಾಸರ್ ಗುರುರಾಜ್ ಎಂಬುವರ ಬಳಿ 6 ಸಾವಿರ ಲಂಚ ಕೇಳಿದ್ದನು. ವೆಂಕಟೇಶ್ ವಿರುದ್ಧ ಹು-ಧಾ ಮಹಾನಗರ ಪಾಲಿಕೆ ಆಯುಕ್ತರು ಕರ್ತವ್ಯ ಲೋಪದ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ವರದಿ ಸಲ್ಲಿಸಿದ್ದರು. ಪಾಲಿಕೆ ಆಯುಕ್ತರ ವರದಿ ಆಧರಿಸಿ ಡಿಸಿ ಗುರುದತ್ತ ಹೆಗಡೆ ವೆಂಕಟೇಶ್​ ದಾಸರ್​ನನ್ನು ವಜಾಗೊಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Tue, 13 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!