ಬೆಂಗಳೂರು: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರಿನ ಜಯನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಮೂರು ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬುಧವಾರ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಸಾಂದರ್ಭಿಕ ಚಿತ್ರ
Updated By: ವಿವೇಕ ಬಿರಾದಾರ

Updated on: Nov 24, 2023 | 11:33 AM

ಬೆಂಗಳೂರು ನ.24: ಜಯನಗರ ಠಾಣಾ ವ್ಯಾಪ್ತಿಯಲ್ಲಿ 22 ವರ್ಷದ ಯುವಕನೋರ್ವ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೂರಿನ ಆಧಾರದ ಮೇಲೆ ಪೊಲೀಸರು (Police) ಜಯನಗರ ನಿವಾಸಿ ಆರೋಪಿ ಶರವಣ (22) ಅನ್ನು ಬಂಧಿಸಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

ನಾವು ಬೆಳಿಗ್ಗೆ ಕೆಲಸಕ್ಕೆ ಹೋಗಿ, ಸಂಜೆ ಬರುತ್ತೇವೆ. ನಮ್ಮ ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದೇವು. ಮಗಳು ಸಮೀಪದ ಅಂಗಡಿಗೆ ಹೋಗಿದ್ದಳು. ಈ ವೇಳೆ ಆರೋಪಿ ಆಕೆಯ ಬಾಯಿ ಗಟ್ಟಿಯಾಗಿ ಮುಚ್ಚಿ ಕರೆದುಕೊಂಡು ಹೋದನು. ಕಿರಿದಾದ ರಸ್ತೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಕಂಡ ಅಂಗಡಿಯವರೊಬ್ಬರು ಬಾಲಕಿಯ ತಂದೆಗೆ ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಸಂಬಂಧಿ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ- ಪೋಕ್ಸೊ ಕಾಯ್ದೆಯಡಿ ಶಾಲೆಯಲ್ಲೇ ಶಿಕ್ಷಕ ಅರೆಸ್ಟ್​

ಈ ಬಗ್ಗೆ ಆರೋಪಿಯನ್ನು ವಿಚಾರಿಸಲು ಹೋದಾಗ ಶರವಣ ಅವರ ತಾಯಿ ಮತ್ತು ಸಹೋದರಿ ನಮ್ಮ ಮೇಲೆ ದೌರ್ಜನ್ಯವೆಸಗಿ ಜಗಳ ಮಾಡಿದ್ದಾರೆ ಎಂದು ಬಾಲಕಿಯ ಸಂಬಂಧಿಕರು ತಿಳಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮಹಿಳೆಯರಿಗೆ ಭದ್ರತೆ ಇಲ್ಲ. ಸರ್ಕಾರ ಏನು ಮಾಡುತ್ತಿದೆ? ಪೊಲೀಸರು ಏನು ಮಾಡುತ್ತಿದ್ದಾರೆ? ಆರೋಪಿಯನ್ನು ನೇಣಿಗೇರಿಸಬೇಕು ಎಂದು ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ