ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಹೆಚ್​​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ರಾಜ್ಯದ ಪ್ರತಿಷ್ಠಿತ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ವಿಜಯಪುರದಲ್ಲಿರುವ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಪಿಹೆಚ್​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ತನ್ನ ಮೇಲೆ ಆದ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ದೂರು ನೀಡಿದ್ದಾರೆ.

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಹೆಚ್​​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ
ಸಾಂದರ್ಭಿಕ ಚಿತ್ರ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Mar 07, 2024 | 2:06 PM

ವಿಜಯಪುರ, ಮಾರ್ಚ್​ 07: ವಿಜಯಪುರದ (Vijayapura) ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ (Akkamahadevi Women’s University) ಪ್ರೊಫೆಸರ್ ಪಿಹೆಚ್​ಡಿ (Phd) ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮ್ಯಾನೇಜ್ಮೆಂಟ್ ವಿಭಾಗದ ಪ್ರೋ. ಮಲ್ಲಿಕಾರ್ಜುನ ಎನ್​ಎಲ್ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತುಳಸೀಮಾಲಾ ಅವರಿಗೆ ಫೆಬ್ರವರಿ 27 ರಂದು ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಇನ್ನು ವಿದ್ಯಾರ್ಥಿನಿ ನೀಡಿರುವ ದೂರನ್ನು ಕುಲಪತಿ ಪ್ರೋ. ತುಳಸೀಮಾಲಾ ಅವರು ಆಂತರಿಕ ದೂರು ಸಮಿತಿಗೆ ರವಾನಿಸಲಿದ್ದಾರೆ. ಬಳಿಕ ಆಂತರಿಕ ದೂರು ಸಮಿತಿ ವಿಚಾರಣೆ ನಡೆಸಲಿದೆ.

ಪ್ರೋ. ಮಲ್ಲಿಕಾರ್ಜುನ ಎನ್​ಎಲ್ 2017 ರಿಂದ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿನಿಗೆ‌ ನ್ಯಾಯ ಒದಗಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ಸಹ ಶಿಕ್ಷಕನಿಂದ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ಆರೋಪ; ಶಿಕ್ಷಕನನ್ನು ಟರ್ಮಿನೇಟ್ ಮಾಡಿದ ಶಾಲಾ ಆಡಳಿತ ಮಂಡಳಿ

ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ

ಕೋಲಾರ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿತ್ತು. ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28 ವರ್ಷದ ಮಹಿಳೆ ಕೊಲೆ ಮಾಡಲಾಗಿತ್ತು. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿತ್ತು. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿತ್ತು. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಶಿಕ್ಷಕ ಸಾವು

ವಿಜಯನಗರ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾ ಶಿಕ್ಷಕ ಮೃತಪಟ್ಟಿರುವ ಘಟನೆ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಬಳಿ ನಡೆದಿದೆ.  ಮಕ್ಕರಬ್ಬಿ ಸರ್ಕಾರಿ ಶಾಲೆಯ ಶಿಕ್ಷಕ ಮಹಾಂತೇಶ್‌ಗೌಡ (37) ಮೃತ ದುರ್ದೈವಿ. ಮಾಹಾಂತೇಶ್ ಗೌಡ ಬೈಕ್‌ನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ  ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Thu, 7 March 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್