ಮಂಗಳೂರಿನಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್
ಪ್ರೀತಿಸುತ್ತಿರುವುದಾಗಿ ಹೇಳಿ 17 ವರ್ಷದ ದಲಿತ ಬಾಲಕಿಯನ್ನು ಚಿಕ್ಕಮಗಳೂರಿನಿಂದ ಮಂಗಳೂರಿಗೆ ಕರೆಸಿಕೊಂಡು, ಇಲ್ಲಿ ಬಾಡಿಗೆ ಮನೆಯೊಂದರಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು, ಜನವರಿ 02: ಮದುವೆಯಾಗುವುದಾಗಿ ನಂಬಿಸಿ ಬಾಲಕಿ (Girl) ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಆರೋಪಿಯನ್ನು ಉಳ್ಳಾಲ (Ullal) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಮಹಮ್ಮದ್ ರಝೀನ್ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ. ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ನಿವಾಸಿಯಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 17 ವರ್ಷದ ಬಾಲಕಿಗೆ ಆರೋಪಿ ಮಹಮ್ಮದ್ ರಝೀನ್ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಬಳಿಕ ಬಾಲಕಿಯನ್ನು ಮಂಗಳೂರಿನ (Mangaluru) ಕುಂಪಲ ಗ್ರಾಮಕ್ಕೆ ಕರೆಸಿಕೊಂಡಿದ್ದಾನೆ.
ಇಲ್ಲಿ ಬಾಡಿಗೆ ಮನೆಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾನೆ. ಇದೀಗ ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ