ಮಂಗಳೂರಿನಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್​

ಪ್ರೀತಿಸುತ್ತಿರುವುದಾಗಿ ಹೇಳಿ 17 ವರ್ಷದ ದಲಿತ ಬಾಲಕಿಯನ್ನು ಚಿಕ್ಕಮಗಳೂರಿನಿಂದ ಮಂಗಳೂರಿಗೆ ಕರೆಸಿಕೊಂಡು, ಇಲ್ಲಿ ಬಾಡಿಗೆ ಮನೆಯೊಂದರಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್​
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Jan 02, 2024 | 2:27 PM

ಮಂಗಳೂರು, ಜನವರಿ 02: ಮದುವೆಯಾಗುವುದಾಗಿ ನಂಬಿಸಿ ಬಾಲಕಿ (Girl) ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಆರೋಪಿಯನ್ನು ಉಳ್ಳಾಲ (Ullal) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಮಹಮ್ಮದ್ ರಝೀನ್ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ. ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ನಿವಾಸಿಯಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 17 ವರ್ಷದ ಬಾಲಕಿಗೆ ಆರೋಪಿ ಮಹಮ್ಮದ್ ರಝೀನ್ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಬಳಿಕ ಬಾಲಕಿಯನ್ನು ಮಂಗಳೂರಿನ (Mangaluru) ಕುಂಪಲ ಗ್ರಾಮಕ್ಕೆ ಕರೆಸಿಕೊಂಡಿದ್ದಾನೆ.

ಇಲ್ಲಿ ಬಾಡಿಗೆ ಮನೆಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾನೆ. ಇದೀಗ ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us