ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ

ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಪ್ರಿಯಕರನೊಬ್ಬ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 26, 2024 | 10:35 PM

ಹಾವೇರಿ, ಜ.26: ಪ್ರಿಯಕರನೊಬ್ಬ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಲಕ್ಷ್ಮೀ(20) ಚಾಕು ಇರಿತಕ್ಕೋಳಗಾದ ಯುವತಿ. ಇನ್ನು ಪ್ರಿಯಕರ ಮಹೇಶ್ ಮೈಸೂರು ಹಾಗೂ ಲಕ್ಷ್ಮೀ 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ.

ಇದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಲಕ್ಷ್ಮೀ ಕೈಗೆ ಹಾಗೂ ಎದೆ ಮಧ್ಯಭಾಗಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಈ ವೇಳೆ ​ ಕೈಗೂ ಮಹೇಶ್​ಗೂ ಗಾಯವಾಗಿದೆ. ಕೂಡಲೇ ಲಕ್ಷ್ಮೀಯನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಡಿಶ್ಚಾರ್ಜ್ ಮಾಡಲಾಗಿದೆ. ಲಕ್ಷ್ಮೀಗೆ ಚಾಕು ಇರಿದ ಮಹೇಶ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಪ್ರೀತಿಗಾಗಿ ಬಾಗೇಪಲ್ಲಿ ಯುವತಿಯ ಬೆನ್ನು ಬಿದ್ದಿದ್ದ, ನಿರಾಕರಿಸಿದಾಗ ಚಾಕುವಿನಿಂದ ಕುತ್ತಿಗೆಗೆ ಇರಿದ, ರಕ್ಷಣೆಗೆ ಮುಂದಾದವರ ಮೇಲೆಯೂ ಹುಚ್ಚಾಟ ಮೆರೆದ

ಸರ್ಕಾರಿ ಜೀಪ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಗದಗ: ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬೈಕ್​ಗೆ ಸರ್ಕಾರಿ ಜೀಪ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ  ಸಾವನ್ನಪ್ಪಿದ ಘಟನೆ ನಡೆದಿದೆ. ಕಣಗಿನಾಳದಿಂದ ಕಳಸಾಪುರಕ್ಕೆ ತೆರಳ್ತಿದ್ದ ಶಿವಪ್ಪ ಮಾದರ(55) ಮೃತ ರ್ದುದೈವಿ. ಧಾರವಾಡ ಕೆಸಿಸಿ ಬ್ಯಾಂಕ್‌ಗೆ ಸೇರಿದ ಜೀಪ್ ಇದಾಗಿದ್ದು, ಜೀಪ್‌ ಡಿಕ್ಕಿ ರಭಸಕ್ಕೆ ಸವಾರ ನೂರು ಅಡಿ ದೂರಬಿದ್ದಿದ್ದಾನೆ. ಅಪಘಾತ ಬಳಿಕ ಚಾಲಕ ಸ್ಥಳದಲ್ಲೇ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 pm, Fri, 26 January 24

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ