ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ

ಅಪರಾಧ ಕೃತ್ಯಗಳಿಲ್ಲದೇ ತಣ್ಣಗಾಗಿದ್ದ ಬೀದರ್​ನ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಹಾಡುಹಗಲೇ ಚಾಕು ಇರಿದ ಘಟನೆ ನಡೆದಿದೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ
ಶಿರಸ್ತೇದಾರ ಅನಿಲ್‌ಕುಮಾರ್ ವ್ಯಾಸ್
Follow us
ಸುರೇಶ ನಾಯಕ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 11, 2024 | 4:29 PM

ಬೀದರ್, ಜು.11: ಹಾಡುಹಗಲೇ ಬೀದರ್(Bidar) ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಚಾಕು ಇರಿದ ಘಟನೆ ಇಂದು(ಗುರುವಾರ) ಮಧ್ಯಾಹ್ನ ನಡೆದಿದೆ. ಆಹಾರ ಶಾಖೆಯ ಶಿರಸ್ತೇದಾರ(Shirastedar) ಆಗಿರುವ ಅನಿಲ್‌ಕುಮಾರ್ ವ್ಯಾಸ್, ಚಾಕು ಇರಿತಕ್ಕೋಳಗಾದವರು. ಕರ್ತವ್ಯದಲ್ಲಿದ್ದ ವೇಳೆಯೇ ಅನೀಲ್ ಕುಮಾರಗೆ ಚಾಕು ಇರಿದು ವ್ಯಕ್ತಿ ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಎಡಗೈ ಭುಜಕ್ಕೆ ಗಂಭೀರ ಗಾಯವಾದ ಹಿನ್ನೆಲೆ ಬ್ರಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಾಕು ಇರಿದ ಪರಾರಿಯಾದ ವ್ಯಕ್ತಿ ಅಮನ್ ಜುಬೇರ್ ಎಂದು ಗುರುತಿಸಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಜಾನುವಾರುಗಳ ಮೈತೊಳೆಯಲು ಹೋದ ಯುವಕ ನೀರುಪಾಲು

ಹಾವೇರಿ: ಹಂದಿಗನೂರು ಗ್ರಾಮದಲ್ಲಿ ವರದಾ ನದಿಗೆ ಜಾನುವಾರುಗಳ ಮೈತೊಳೆಯಲು ಹೋದ ಯುವಕ ನೀರುಪಾಲಾದ ದಾರುಣ ಘಟನೆ ನಡೆದಿದೆ. ಗಾಳೇಪ್ಪ ಮೇಲಿನಮನಿ ನೀರುಪಾಲಾದ ಯುವಕ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಿಡಿಗೇಡಿಗಳಿಂದ ಗುಡಿಸಲು ಮನೆಗೆ ಬೆಂಕಿ

ಕೋಲಾರ: ಮುಳಬಾಗಲು ತಾಲೂಕಿನ ಕುಸುವಗಾನಹಳ್ಳಿಯಲ್ಲಿ ಕಿಡಿಗೇಡಿಗಳು ಗುಡಿಸಲು ಮನೆಗೆ ಬೆಂಕಿ ಹಾಕಿದ ಘಟನೆ ನಡೆದಿದೆ.  ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಗುಡಿಸಲು ಮನೆ ಇದಾಗಿದ್ದು, ಹಳೇ ದ್ವೇಷದ ಹಿನ್ನೆಲೆ ಮನೆಗೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಶಿವಮ್ಮ ಪುತ್ರ ಮಂಜುನಾಥ್ ಹಾಗೂ ಗ್ರಾಮದ ಬಾಲರಾಜ್ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಬಾಲರಾಜು ಬೆಂಕಿ ಇಟ್ಟಿರುವ ಶಂಕೆ ಇದೆ. ಮನೆಯಲ್ಲಿ ವಾಸವಿದ್ದ ಮೂವರು ಪ್ರಾಣಾಪಾಯದಿಂದ ಪಾ್ರಾಗಿದ್ದು, ಸ್ಥಳಕ್ಕೆ ನಂಗಲಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Thu, 11 July 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ