ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಬಂಧಿಸಿದ್ದರು. ಇದೀಗ ಮಾದಕ ವಸ್ತು ಮಾರಾಟ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹೀಂ ಅಲಿಯಾಸ್ ಲಂಬು, ಅಬ್ದುಲ್ ಹಲೀಂ, ತಂಗ್ ಮಿನ್ ಲಾಲ್, ಮಹಮ್ಮದ್ ಫಾರೂಕ್ ಖಾನ್ ಬಂಧಿತ ಆರೋಪಿಗಳು.
ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಅಲಿ ಎಂಬಾತನಿಂದ ಆರೋಪಿಗಳು ಮಾದಕ ವಸ್ತು ತರಿಸಿಕೊಳ್ಳುತ್ತಿದ್ದರು. ಬಳಿಕ 20 ಗ್ರಾಂನಂತೆ ಟ್ಯೂಬ್ಗಳಲ್ಲಿ ಮಾರಾಟ ಮಾಡ್ತಿದ್ದರು ಎನ್ನಲಾಗಿದೆ. ಆರೋಪಿಗಳ ಬಳಿ 2 ಲಕ್ಷ 20 ಸಾವಿರ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.