ಶಿವಮೊಗ್ಗ: ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ ಮಾಡಿರುವಂತಹ ದಾರುಣ ಘಟನೆ ನಡೆದಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಪ್ರಿಯಕರ ಮತ್ತು ಆತನ ತಂದೆಯನ್ನು ಅರೆಸ್ಟ್ ಮಾಡಿದ್ದಾರೆ.

ಶಿವಮೊಗ್ಗ, ಸೆಪ್ಟೆಂಬರ್ 24: ಭದ್ರಾ ಕಾಲುವೆಗೆ (Bhadra Canal) ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ (kill) ಮಾಡಿರುವಂತಹ ಘಟನೆಯೊಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು ಸೂರ್ಯ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸುವ ಮೂಲಕ ಹೈಡ್ರಾಮಾವೇ ಮಾಡಿದ್ದ. ಸದ್ಯ ಸೂರ್ಯ ಮತ್ತು ಆತನ ತಂದೆ ಸ್ವಾಮಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಸೂರ್ಯ ಮತ್ತು ಸ್ವಾತಿ ಇಬ್ಬರು ಪ್ರೀತಿಸುತ್ತಿದ್ದರು. ಸ್ವಾತಿ ಪದವಿ ಎರಡನೇ ವರ್ಷ ವ್ಯಾಸಾಂಗ ಮಾಡುತ್ತಿದ್ದಳು. ಸೂರ್ಯ ಮದುವೆ ಆಗುವುದಕ್ಕೆ ಪೀಡಿಸುತ್ತಿದ್ದ. ಆದರೆ ಇತ್ತ ಸ್ವಾತಿ ಮನೆಯವರು ಓದು ಮುಗಿಯುವವರೆಗೆ ಮದುವೆ ಬೇಡ ಅಂದಿದ್ದಾರೆ. ಸೆ. 21 ರಂದು ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಕೂಡ ನಡೆದಿತ್ತು.
ಇದನ್ನೂ ಓದಿ: ನವ ವಿವಾಹಿತ ದಂಪತಿ ನಡುವೆ ಗಲಾಟೆ: ಫಸ್ಟ್ ನೈಟ್ ನಲ್ಲಿ ನನ್ನನ್ನು ಮುಟ್ಟಿಲ್ಲ, ಗಂಡ ನಪುಂಸಕ ಎಂದ ಪತ್ನಿ
ಸೆ.21ರಂದು ಸ್ವಾತಿಯನ್ನು ಸೂರ್ಯ ಮನೆಯಿಂದ ಭದ್ರಾ ಕಾಲುವೆಗೆ ಕರೆದೊಯ್ದು ಅಲ್ಲಿಂದ ತಳ್ಳಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಮಂಗಳವಾರ ಸಂಜೆ ಯುವತಿಯ ಶವ ಪತ್ತೆಯಾಗಿದೆ. ಸ್ವಾತಿ ಕುಟುಂಬಸ್ಥರಿಂದ ಸೂರ್ಯ ಮತ್ತು ಕೊಲೆಗೆ ಕುಮ್ಮಕ್ಕು ಹಿನ್ನಲೆ ಆತನ ತಂದೆ ಸ್ವಾಮಿ ಮೇಲೆ ಸೆ. 23 ರಂದು ಭದ್ರಾವತಿ ಠಾಣೆಗೆ ದೂರು ನೀಡಿದ್ದರು.
ಸದ್ಯ ಭದ್ರಾವತಿ ಗ್ರಾಮಾಂತರ ಪೊಲೀಸರು ಎ1 ಸೂರ್ಯ ಮತ್ತು ಎ2 ಸ್ವಾಮಿ ವಿರುದ್ಧ ಕೊಲೆ ಕೇಸ್ ದಾಖಲಿಸಿ, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಲುವೆ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮ ವ್ಯಾಪ್ತಿಯ ಕಾಲುವೆ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಸುಮಾರು 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವವಾಗಿದೆ. ಸದ್ಯ ಯಾವುದೇ ಗುರುತು ಪತ್ತೆ ಆಗಿಲ್ಲ.
ಇದನ್ನೂ ಓದಿ: ಮಗಳ ಮುಂದೆಯೇ ಪತ್ನಿಗೆ 11 ಬಾರಿ ಇರಿದು ಕೊಂದ ಪತಿ: ಇಷ್ಟಪಟ್ಟು ಮದ್ವೆಯಾಗಿದ್ದವಳನ್ನ ಹತ್ಯೆಗೈದಿದ್ಯಾಕೆ?
ಎಸ್ಪಿ ಸಿದ್ಧಾರ್ಥ ಗೋಯಲ್ ಮತ್ತು ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



