Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ರೈತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾಲದ ಬಾಧೆಯಿಂದ ಆತ್ಮಹತ್ಯೆ ಶಂಕೆ

ನಾಪತ್ತೆಯಾಗಿದ್ದ ಗೊಂದಿ ಚಟ್ನಹಳ್ಳಿ‌ ರೈತ ಓರ್ವ ತುಂಗಾ ನದಿ ಪಕ್ಕದ ಮರದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವಪತ್ತೆ ಆಗಿರುವಂತಹ ಘಟನೆ ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಚಿತ್ರಕಲಾ ಪರಿಷತ್ ಮುಂದಿನ ರಸ್ತೆಯಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ.

ನಾಪತ್ತೆಯಾಗಿದ್ದ ರೈತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾಲದ ಬಾಧೆಯಿಂದ ಆತ್ಮಹತ್ಯೆ ಶಂಕೆ
ಮೃತ ರೈತ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Feb 09, 2024 | 4:51 PM

ಶಿವಮೊಗ್ಗ, ಫೆಬ್ರವರಿ 9: ಕಳೆದ ಎರಡು ದಿನಗಳಿಂದ ‌ನಾಪತ್ತೆಯಾಗಿದ್ದ ಗೊಂದಿ ಚಟ್ನಹಳ್ಳಿ‌ ರೈತ (farmer) ಮಹೇಶ್(40) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿ ಪಕ್ಕದ ಮರದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಬ್ಯಾಂಕ್ ಸೇರಿದಂತೆ ಖಾಸಗಿಯಾಗಿ 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಚಿತ್ರಕಲಾ ಪರಿಷತ್ ಮುಂದಿನ ರಸ್ತೆಯಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ. ತಕ್ಷಣವೇ ಪೊಲೀಸರು ಮತ್ತು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲಿಸಿದ್ದಾರೆ.

ಸದ್ಯ ಕೊಳ್ಳೇಗಾಲ ಮೂಲದ ಇಬ್ಬರು ಬೈಕ್ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮಲ್ಲಿಗೆ ಆಸ್ಪತ್ರೆಯಲ್ಲಿ ಗಾಯಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಹೈಗ್ರೌಂಡ್ಸ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೋಜು ಮಸ್ತಿಗೆ ಬಂದು ನೀರಿನಲ್ಲಿ ಮುಳಗಿ ಯುವಕ ಸಾವು

ಚಿಕ್ಕಬಳ್ಳಾಫುರ: ಮೋಜು ಮಸ್ತಿಗೆ ಬಂದು ನೀರಿನಲ್ಲಿ ಮುಳಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಬಳ್ಳಾಫುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಬಾಬುಸಾಪಾಳ್ಯಾ ನಿವಾಸಿ ಅಭಿ(23) ಮೃತ ಯುವಕ. ಅಭಿ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ಕಂತೆ ಕಂತೆ ನೋಟುಗಳ ವಿಡಿಯೋ ನೋಡಿ ಹಣ ಕಳೆದುಕೊಂಡ ಜನ

ತಂದೆ ತಾಯಿಗೆ ಒಬ್ಬನೆ ಮಗನಾಗಿದ್ದ. ಜಲಾಶಯದ ನೀರಿನಲ್ಲಿ ಈಜಾಡಲು ಹೋಗಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಶವಕ್ಕಾಗಿ ಶೋಧಕಾರ್ಯ ನಡೆದಿದೆ. ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

ಡ್ರೈವಿಂಗ್ ಕಲಿಸಲು ಹೋಗಿ ಅಪಘಾತ: ನಿಂತಿದ್ದ ಬೈಕ್​ಗಳಿಗೆ ಗುದ್ದಿದ ಕಾರು

ಕಾರು ಡ್ರೈವಿಂಗ್ ಕಲಿಸಲು ಹೋಗಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಗುದ್ದಿ ಅಪಘಾತ ಮಾಡಿರುವಂತಹ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗುದ್ದಿದ ರಭಸಕ್ಕೆ ಎಂಟು ಬೈಕ್​ಗಳು ಡ್ಯಾಮೇಜ್ ಆಗಿವೆ. ಸದ್ಯ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಸ್​​ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

ದಕ್ಷಿಣ ಕನ್ನಡ: ಬಸ್​​ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿ‌ ಎಂಬಲ್ಲಿ ಬಸ್​ನಿಂದ ಬಿದ್ದು ಗಾಯಗೊಂಡಿದ್ದ ರಾಧಾ(66) ಮೃತ ಮಹಿಳೆ.

ಇದನ್ನೂ ಓದಿ: ಮಲ್ಲವ್ವ ನಿಮ್ಮವ್ವ ಎಲ್ಲವ್ವ ಎಂದು ರೇಗಿಸಿದ್ದ ಯುವಕನಿಗೆ ಚಾಕು ಇರಿತ: ಮದ್ವೆ ಗಂಡು ಅರೆಸ್ಟ್​

ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಬಿದಿದ್ದಾರೆ. ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.