Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

Crime News: ಹೆಂಡತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ಕೊಲ್ಲಲು ಆಕೆಯ ಗಂಡ ಇಂಟರ್​ನೆಟ್​ ನೋಡಿ ಬಾಂಬ್ ತಯಾರಿಸುವುದನ್ನು ಕಲಿತಿದ್ದ.

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 19, 2022 | 3:16 PM

ನವದೆಹಲಿ: ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ತನ್ನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ (Gang Rape) ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿದ ಗಂಡ ಅದಕ್ಕಾಗಿ ಯಾವ ರೀತಿಯ ಪ್ಲಾನ್ ಮಾಡಿದ ಎಂಬುದು ಗೊತ್ತಾದರೆ ನೀವು ಶಾಕ್ ಆಗುವುದು ಗ್ಯಾರಂಟಿ. ತನ್ನ ಹೆಂಡತಿ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಆತ ಬಾಂಬ್ ಸಿಡಿಸಿ ಕೊಂದಿದ್ದಾನೆ. ಇದೀಗ ಆ ಕೊಲೆ ಮಾಡಿದ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭನ್ವರ್ ಲಾಲ್ ಮತ್ತು ದಿನೇಶ್ ಎಂಬ ಇಬ್ಬರು ವ್ಯಕ್ತಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಂಡತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ಕೊಲ್ಲಲು ಆಕೆಯ ಗಂಡ ಇಂಟರ್​ನೆಟ್​ ನೋಡಿ ಬಾಂಬ್ ತಯಾರಿಸುವುದನ್ನು ಕಲಿತಿದ್ದ. ಆನ್​ಲೈನ್ ಮೂಲಕ ಬಾಂಬ್ ತಯಾರಿಸುವುದನ್ನು ಕಲಿತು, ಆ ಬಾಂಬ್​ನಿಂದ ಓರ್ವ ಅತ್ಯಾಚಾರಿಯನ್ನು ಕೊಂದಿದ್ದಾನೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರಾದ ಭನ್ವರ್ ಲಾಲ್ ಮತ್ತು ದಿನೇಶ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ರತ್ಲಾಮ್ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ ಮಾತನಾಡಿ, ಜನವರಿ 4ರಂದು ಹಳ್ಳಿಯ ಲಾಲ್ ಸಿಂಗ್ ಎಂಬಾತ ತಮ್ಮ ಕೃಷಿ ಭೂಮಿಯಲ್ಲಿನ ಕೊಳವೆ ಬಾವಿಯ ಬಳಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದ್ದ. ಜಿಲೆಟಿನ್ ರಾಡ್ ಮತ್ತು ಡಿಟೋನೇಟರ್​ನಿಂದಾಗಿ ಸ್ಫೋಟ ಸಂಭವಿಸಿದೆ ಎಂದು ವಿಧಿವಿಜ್ಞಾನ ತಜ್ಞರು ಮಾಹಿತಿ ನೀಡಿದ್ದರು. ಆದರೆ ತನಿಖೆಯಲ್ಲಿ, ಮಾಜಿ ಸರಪಂಚ್ ಭನ್ವರ್ ಲಾಲ್ ಅವರ ಕೊಳವೆ ಬಾವಿಯಲ್ಲಿ ಆಗಸ್ಟ್‌ನಲ್ಲಿ ಇದೇ ರೀತಿಯ ಸ್ಫೋಟ ಸಂಭವಿಸಿದೆ ಎಂದು ಗೊತ್ತಾಗಿತ್ತು. ಆ ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.

“ಈ ಘಟನೆಯ ನಂತರ ಗ್ರಾಮದಿಂದ ಕಾಣೆಯಾದ ಕುಟುಂಬವನ್ನು ಪೊಲೀಸರು ಕಂಡುಕೊಂಡರು. ಪೊಲೀಸರು ಜನವರಿ 7ರಂದು ಮಂದ್‌ಸೌರ್‌ನಿಂದ ವ್ಯಕ್ತಿ ಮತ್ತು ಅವರ ಕುಟುಂಬ ಸದಸ್ಯರನ್ನು ವಶಕ್ಕೆ ತೆಗೆದುಕೊಂಡರು. ವಿಚಾರಣೆಯ ಸಮಯದಲ್ಲಿ, ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡ ಆತ ಅವನು ತನ್ನ ಹೆಂಡತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಪ್ರತೀಕಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದನು.

ಪೊಲೀಸರಿಗೆ ದಾಖಲಿಸಿದ ಹೇಳಿಕೆಯಲ್ಲಿ ಆರೋಪಿಗಳು ಈ ವರ್ಷದ ಜುಲೈನಲ್ಲಿ ಲಾಲ್ ಸಿಂಗ್, ಭವರ್‌ಲಾಲ್ ಮತ್ತು ದಿನೇಶ್ ಅವರ ಮನೆಗೆ ನುಗ್ಗಿ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದ. ಆಕೆಯ ಗಂಡ ಅವರನ್ನು ತಡೆಯಲು ಪ್ರಯತ್ನಿಸಿದನು. ಆದರೆ ಅವರು ಅವನನ್ನು ಥಳಿಸಿ, ಆತನ ಹೆಂಡತಿಯ ಮೇಲೆ ಅತ್ಯಾಚಾರ ನಡೆಸಿದರು. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಆ ವ್ಯಕ್ತಿ ಪೊಲೀಸರಿಗೆ ವಿಷಯವನ್ನು ತಿಳಿಸಲಿಲ್ಲ. ಆದರೆ, ತನ್ನ ಹೆಂಡತಿ ಮೇಲೆ ಅತ್ಯಾಚಾರವೆಸಗಿದವರ ಮೇಲೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದನು.

ಆರೋಪಿಗಳು ಬಾಂಬ್ ಅನ್ನು ಹೇಗೆ ತಯಾರಿಸಿ, ಜೋಡಿಸುವುದು ಎಂಬುದನ್ನು ಇಂಟರ್​ನೆಟ್​ನಿಂದ ಕಲಿತರು. ಅವರು ಮೊದಲು ಭನ್ವರ್‌ಲಾಲ್ ಅವರ ಕೊಳವೆ ಬಾವಿಗೆ ಬಾಂಬ್ ಅಳವಡಿಸಿದರು. ಆದರೆ, ಸ್ಫೋಟದಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಬದುಕುಳಿದರು. ಬಳಿಕ ಲಾಲ್ ಸಿಂಗ್ ಮೇಲೆ ಹೆಚ್ಚು ಜಿಲೆಟಿನ್ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ’ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: Shocking News: ಪ್ರಾಣಿ ಬಲಿ ವೇಳೆ ಕುರಿಯ ಬದಲು ಮನುಷ್ಯನ ತಲೆ ಕತ್ತರಿಸಿದ ಕುಡುಕ!

Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

Published On - 3:15 pm, Wed, 19 January 22

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ