AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪಂಜಾಬ್​ನಲ್ಲೊಂದು ಭೀಕರ ನರಬಲಿ; 4 ವರ್ಷದ ಮಗುವಿನ ತಲೆ ಕತ್ತರಿಸಿ, ರಕ್ತ ಕುಡಿದ ಯುವಕ!

ಸೋಮವಾರ ರಾತ್ರಿ ಪಕ್ಕದ ಮನೆಯಲ್ಲಿ ಮಲಗಿದ್ದ ಮಗುವನ್ನು ಎತ್ತಿಕೊಂಡು ಮನೆಗೆ ಕರೆದೊಯ್ದ ಯುವಕ ಆ ಮಗುವಿನ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಆತನ ಮನೆಯಲ್ಲಿದ್ದ ರಕ್ತಸಿಕ್ತವಾಗಿದ್ದ ಮಗುವಿನ ಶವವನ್ನು ಪೊಲೀಸರು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ.

Shocking News: ಪಂಜಾಬ್​ನಲ್ಲೊಂದು ಭೀಕರ ನರಬಲಿ; 4 ವರ್ಷದ ಮಗುವಿನ ತಲೆ ಕತ್ತರಿಸಿ, ರಕ್ತ ಕುಡಿದ ಯುವಕ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Oct 04, 2023 | 4:18 PM

Share

ನವದೆಹಲಿ: ಪಂಜಾಬ್​ನಲ್ಲಿ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಾಂತ್ರಿಕನ ಸಲಹೆಯಂತೆ ಯುವಕನೊಬ್ಬ 4 ವರ್ಷದ ಬಾಲಕನನ್ನು ನರಬಲಿ ನೀಡಿದ್ದಾನೆ. ಪಕ್ಕದ ಮನೆಯ 4 ವರ್ಷದ ಬಾಲಕನನ್ನು ಮನೆಗೆ ಕರೆದುಕೊಂಡು ಬಂದು, ಆತನ ತಲೆ ಕತ್ತರಿಸಿ, ರಕ್ತ ಕುಡಿದಿದ್ದಾನೆ. ಈ ಭೀಕರ ಘಟನೆ ಬೆಳಕಿಗೆ ಬರುತ್ತಿದ್ದಂತೆ ಆ ಯುವಕನನ್ನು ಬಂಧಿಸಲಾಗಿದೆ. ಈ ರೀತಿಯ ಕೃತ್ಯಕ್ಕೆ ಪ್ರಚೋದನೆ ನೀಡಿದ ಮಾಂತ್ರಿಕ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

ಸೋಮವಾರ ರಾತ್ರಿ ಪಕ್ಕದ ಮನೆಯಲ್ಲಿ ಮಲಗಿದ್ದ ಮಗುವನ್ನು ಎತ್ತಿಕೊಂಡು ಮನೆಗೆ ಕರೆದೊಯ್ದ ಯುವಕ ಆ ಮಗುವಿನ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಆತನ ಮನೆಯಲ್ಲಿದ್ದ ರಕ್ತಸಿಕ್ತವಾಗಿದ್ದ ಮಗುವಿನ ಶವವನ್ನು ಪೊಲೀಸರು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ. ಪಂಜಾಬ್​ನ ಖನ್ನಾದಲ್ಲಿ ಈ ನರಬಲಿ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಐದು ದಶಕಗಳ ಹಿಂದೆ ಅಮೆರಿಕದಲ್ಲಿ16-ವರ್ಷದ ಯುವತಿಯನ್ನು ವಾಮಾಚಾರದ ಭಾಗವಾಗಿ ನರಬಲಿ ನೀಡಲಾಗಿತ್ತೆ?

ಇಲ್ಲಿ ಮಾಂತ್ರಿಕರ ಸಲಹೆಯ ಮೇರೆಗೆ ಯುವಕನೊಬ್ಬ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 4 ವರ್ಷದ ಮಗುವನ್ನು ಕತ್ತು ಸೀಳಿ ಕೊಂದಿದ್ದಾನೆ. ಆತ ಮಗುವಿನ ರಕ್ತವನ್ನೂ ಕುಡಿದಿರುವ ಘಟನೆ ಪಂಜಾಬ್​ನ ಖನ್ನಾ ಜಿಲ್ಲೆಯ ಸಿಟಿ ಖನ್ನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಸೋಮವಾರ ತಡರಾತ್ರಿ ಮಗುವನ್ನು ಅಪಹರಿಸಿದ್ದ. ಮಂಗಳವಾರ ಬೆಳಗ್ಗೆ ಆ ಮಗುವಿನ ತಂದೆ-ತಾಯಿಗೆ ಈ ವಿಷಯ ತಿಳಿಯಿತು. ಇದಾದ ನಂತರ ಕಾರ್ಯಾಚರಣೆಗಿಳಿದ ಪೊಲೀಸರು ಕೇವಲ 4 ಗಂಟೆಯೊಳಗೆ ಮಗುವಿನ ಶವವನ್ನು ಹೊರತೆಗೆದು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಅರವಿಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಆತ ಸಮಾಜದಲ್ಲಿ ಶಕ್ತಿಯುತ ವ್ಯಕ್ತಿಯಾಗಬೇಕೆಂದು ಬಯಸಿದ್ದ. ಅಮರನಾಗಬೇಕೆಂದರೆ ಏನು ಮಾಡಬೇಕೆಂದು ಆತ ಮಾಂತ್ರಿಕರ ಬಳಿ ಸಲಹೆ ಕೇಳಿದ್ದ. ಆ ಮಾಂತ್ರಿಕ ಮಗುವನ್ನು ಬಲಿ ನೀಡಿದರೆ ಈ ಸಾಧನೆ ಸಾಧ್ಯ ಎಂದು ಹೇಳಿದ್ದರು ಎಂದು ಆ ಯುವಕ ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ. ಈ ಸಾಧನೆಗಳನ್ನು ನರಬಲಿಯಿಂದ ಮಾತ್ರ ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದ ಮಾಂತ್ರಿಕನೇ ನರಬಲಿಯ ವಿಧಾನವನ್ನು ಹೇಳಿಕೊಟ್ಟಿದ್ದರು. ಇದಾದ ಬಳಿಕ ಆ ಯುವಕ ಮಗುವನ್ನು ಬಲಿ ಕೊಟ್ಟಿದ್ದ.

ಇದನ್ನೂ ಓದಿ: ಅತ್ಯಾಚಾರ, ಕೊಲೆ ಪ್ರಕರಣ: 40 ವರ್ಷಗಳ ವಿಚಾರಣೆಯ ನಂತರ 75 ವರ್ಷದ ವ್ಯಕ್ತಿಗೆ ಸುಪ್ರೀಂಕೋರ್ಟ್ ಜಾಮೀನು

ಕೊಲೆಯಾದ 4 ವರ್ಷದ ಮಗು ಸೋಮವಾರ ರಾತ್ರಿ ತನ್ನ ಮನೆಯಲ್ಲಿ ಅಕ್ಕ-ಅಣ್ಣನ ಜೊತೆ ಮಲಗಿತ್ತು. ಆದರೆ ಮಧ್ಯರಾತ್ರಿಯ ನಂತರ ಆರೋಪಿ ಬಂದು ಆ ಮಗುವನ್ನು ರಹಸ್ಯವಾಗಿ ಕರೆದುಕೊಂಡು ಹೋಗಿದ್ದ. ಪೋಷಕರು ಬೆಳಗ್ಗೆ ಎದ್ದು ನೋಡಿದಾಗ ಮಗು ನಾಪತ್ತೆಯಾಗಿರುವ ವಿಷಯ ತಿಳಿದಿತ್ತು. ಮೊದಲಿಗೆ ಕುಟುಂಬಸ್ಥರು ಸುತ್ತ ಮುತ್ತ ಹುಡುಕಾಡಿದರೂ ಮಗುವಿನ ಸುಳಿವು ಸಿಗದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು ಕೇವಲ 4 ಗಂಟೆಯೊಳಗೆ ಮಗುವಿನ ರಕ್ತದಲ್ಲಿ ತೊಯ್ದಿದ್ದ ದೇಹವನ್ನು ಯುವಕನ ಮನೆಯಿಂದ ಹೊರಗೆ ತೆಗೆದಿದ್ದರು. ಮಾಂತ್ರಿಕನ ಪತ್ತೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?