AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ವಿಮೆ ಹಣಕ್ಕಾಗಿ ತಂಗಿಯನ್ನೇ ಕೊಂದ ಅಣ್ಣ; ಆಂಧ್ರದಲ್ಲೊಂದು ಆಘಾತಕಾರಿ ಘಟನೆ

ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 1 ಕೋಟಿ ರೂ. ವಿಮೆಗಾಗಿ ತನ್ನ ತಂಗಿಯನ್ನೇ ಕೊಂದು ಅದೊಂದು ಕಾರು ಅಪಘಾತವೆಂದು ಬಿಂಬಿಸಿದ್ದ ಅಣ್ಣ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಮಾ ಪಾವತಿಗಾಗಿ ತನ್ನ ತಂಗಿಯನ್ನು ಕೊಲೆ ಮಾಡಿದ್ದಕ್ಕಾಗಿ ಆಂಧ್ರಪ್ರದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಸಾಕಷ್ಟು ಪ್ಲಾನ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದು ಹೇಗೆ? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

1 ಕೋಟಿ ರೂ. ವಿಮೆ ಹಣಕ್ಕಾಗಿ ತಂಗಿಯನ್ನೇ ಕೊಂದ ಅಣ್ಣ; ಆಂಧ್ರದಲ್ಲೊಂದು ಆಘಾತಕಾರಿ ಘಟನೆ
Murder
ಸುಷ್ಮಾ ಚಕ್ರೆ
|

Updated on: Jan 29, 2025 | 10:20 PM

Share

ಹೈದರಾಬಾದ್: ಇನ್ಷುರೆನ್ಸ್ ಹಣವನ್ನು ಪಡೆಯಲು ತನ್ನ ತಂಗಿಯನ್ನು ಕೊಂದ ಆಂಧ್ರಪ್ರದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತ ತಿಂಗಳುಗಟ್ಟಲೆ ಪ್ಲಾನ್ ಮಾಡಿ, ಆಕೆಗೆ 1 ಕೋಟಿ ರೂ. ವಿಮೆ ಮಾಡಿಸಿದ್ದ. ಬಳಿಕ ಆಕೆಯ ಸಾವನ್ನು ಆತ ಅಪಘಾತವೆಂದು ಬಿಂಬಿಸಿದ್ದ. ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅಶೋಕ್ ಕುಮಾರ್ ರೆಡ್ಡಿ ತನ್ನ ತಂಗಿಯನ್ನು ಕೊಂದು, ಆಕೆಯ ಸಾವನ್ನು ಅಪಘಾತವೆಂದು ಬಿಂಬಿಸಿದ್ದ. 1 ಕೋಟಿ ರೂ. ವಿಮಾ ಹಣವನ್ನು ಪಡೆಯಲು ಈ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು 1 ಕೋಟಿ ರೂ. ವಿಮಾ ಪಾವತಿಯನ್ನು ವಂಚಿಸಲು ತನ್ನ ವಿಚ್ಛೇದಿತ ಮತ್ತು ಮಕ್ಕಳಿಲ್ಲದ ತಂಗಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. 2024ರ ಫೆಬ್ರವರಿ 2ರಂದು ಪೊಡಿಲಿಯ ಪೆಟ್ರೋಲ್ ಬಂಕ್ ಬಳಿ ನಡೆದ ಈ ಅಪರಾಧಕ್ಕಾಗಿ ಆರೋಪಿಯಾಗಿರುವ 30 ವರ್ಷದ ಮಾಲಪತಿ ಅಶೋಕ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಸೂಟ್‌ಕೇಸ್‌ನಲ್ಲಿ ದೆಹಲಿ ಮಹಿಳೆಯ ಸುಟ್ಟ ಶವ ಪತ್ತೆ; ಒಂದೇ ದಿನದಲ್ಲಿ ಕೊಲೆ ರಹಸ್ಯ ಬಯಲಾಗಿದ್ದು ಹೇಗೆ?

ಭಾರೀ ಸಾಲಗಳಿಂದ ಬಳಲುತ್ತಿದ್ದ ಅಶೋಕ್, ತನ್ನ ತಂಗಿಯ ಜೀವಕ್ಕೆ ವಿಮೆ ಮಾಡಿಸಿ, ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಿ ಹಣ ಪಡೆಯಲು ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಘಟನೆ ನಡೆದ ದಿನ, ಅಶೋಕ್ ತನ್ನ ತಂಗಿಯನ್ನು ಓಂಗೋಲ್‌ಗೆ ಆಸ್ಪತ್ರೆಗೆ ಭೇಟಿ ನೀಡುವ ನೆಪದಲ್ಲಿ ತನ್ನ ಕಾರಿನೊಳಗೆ ಕೂರಿಸಿಕೊಂಡಿದ್ದ. ಅಲ್ಲಿಂದ ವಾಪಾಸ್ ಬರುವಾಗ ಆಕೆಗೆ ನಿದ್ರೆ ಮಾತ್ರೆಗಳನ್ನು ನೀಡಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಆ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ