Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಟಿಯ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಸುಟ್ಟು ರಸ್ತೆಬದಿ ಬಿಸಾಡಿದ ಬ್ಯಾಂಕರ್

ಇಟಲಿಯ ನಟಿಯನ್ನು ಕೊಂದು, ಆಕೆಯ ಶವವನ್ನು ಕತ್ತರಿಸಿ, ಯಾರಿಗೂ ಗುರುತು ಗೊತ್ತಾಗಬಾರದು ಎಂದು ಆಕೆಯ ದೇಹದ ಭಾಗಗಳನ್ನು ಸುಟ್ಟು, ನಾಲ್ಕು ಗೋಣಿಚೀಲಗಳಲ್ಲಿ ಪ್ಯಾಕ್ ಮಾಡಲಾಗಿತ್ತು.

Shocking News: ನಟಿಯ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಸುಟ್ಟು ರಸ್ತೆಬದಿ ಬಿಸಾಡಿದ ಬ್ಯಾಂಕರ್
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 31, 2022 | 8:10 PM

ನವದೆಹಲಿ: 26 ವರ್ಷದ ನಟಿಯನ್ನು ಕೊಂದು ಆಕೆಯ ದೇಹವನ್ನು ತುಂಡು- ತುಂಡುಗಳಾಗಿ ಕತ್ತರಿಸಿದ ಆಘಾತಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪದ ಮೇಲೆ ಬ್ಯಾಂಕರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಟಿಯನ್ನು ಕೊಲೆ ಮಾಡಿ, ಆಕೆಯ ಶವವನ್ನು ತುಂಡು-ತುಂಡಾಗಿ ಕತ್ತರಿಸಿದ ಬಳಿಕ ಆಕೆಯ ಹೆಣವನ್ನು (Deadbody) ರಸ್ತೆಯೊಂದರ ಪಕ್ಕ ಎಸೆದಿದ್ದರು.

ಮೃತ ನಟಿಯನ್ನು ಕರೋಲ್ ಮಾಲ್ಟೆಸಿ ಎಂದು ಗುರುತಿಸಲಾಗಿದೆ. ಮಾರ್ಚ್ 20ರಂದು ಲೊಂಬಾರ್ಡಿ ಪ್ರದೇಶದ ಪಲ್ಲೈನ್ ​​ಗ್ರಾಮದ ಬಳಿಯ ಬೆಟ್ಟದ ಮೇಲೆ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿತ್ತು. ಆ ನಟಿಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್​ನ ದೈನಿಕ ಮಿರರ್‌ನ ವರದಿ ಪ್ರಕಾರ, ಮಹಿಳೆಯ ಗುರುತು ಗೊತ್ತಾಗಬಾರದು ಎಂದು ಆಕೆಯ ದೇಹದ ಭಾಗಗಳನ್ನು ಸುಟ್ಟು, ನಾಲ್ಕು ಗೋಣಿಚೀಲಗಳಲ್ಲಿ ಪ್ಯಾಕ್ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಡೇವಿಡ್ ಫೊಂಟಾನಾ ಎಂಬ 43 ವರ್ಷದ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆತನ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಮತ್ತು ಮೃತದೇಹವನ್ನು ಬಚ್ಚಿಟ್ಟ ಆರೋಪ ಹೊರಿಸಲಾಗಿದೆ. ಆ ನಟಿಯ ಅಭಿಮಾನಿಯೊಬ್ಬರು ಮುಂದೆ ಬಂದು ಶವವನ್ನು ಗುರುತಿಸಿದ ನಂತರ ಆಕೆಯ ಶವವನ್ನು ಗುರುತಿಸಲಾಯಿತು. ಮೃತ ಮಹಿಳೆ ಮಿಲನ್‌ನ ರೆಸ್ಕಾಲ್ಡಿನಾ ಪುರಸಭೆಯಲ್ಲಿ ವಾಸಿಸುತ್ತಿದ್ದರು.

ಅಡಲ್ಟ್​ ಸಿನಿಮಾದಲ್ಲಿ (ನೀಲಿಚಿತ್ರ) ನಟಿಸುತ್ತಿದ್ದ ಕರೋಲ್ ಮಾಲ್ಟೆಸಿ ಇದಕ್ಕೂ ಮೊದಲು ಸುಗಂಧ ದ್ರವ್ಯವನ್ನು ಮಾರಾಟ ಮಾಡುತ್ತಿದ್ದಳು. ನಂತರ ಕೊವಿಡ್ ಸಮಯದ ಬಳಿಕ ಆಕೆ ವಯಸ್ಕ ಸಿನಿಮಾಗಳಲ್ಲಿ ನಟಿಸಲಾರಂಭಿಸಿದ್ದರು. ವಿಚಾರಣೆ ವೇಳೆ ಆರೋಪಿ ಬ್ಯಾಂಕರ್ ಜನವರಿಯಲ್ಲಿ ನಟಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಶವವನ್ನು ಫ್ರೀಜರ್‌ನಲ್ಲಿಟ್ಟು ಒಂದು ತಿಂಗಳ ನಂತರ ಅದನ್ನು ರಸ್ತೆ ಪಕ್ಕದಲ್ಲಿ ಎಸೆದು ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ