ಮರ್ಮಾಂಗ ಕತ್ತರಿಸಿ ಬಾಯಲ್ಲಿ ತುರುಕಿದ ಹಂತಕರು; ಕೊಲ್ಕತ್ತಾ ಶಿಕ್ಷಕನ ಬರ್ಬರ ಹತ್ಯೆ

ಅಲಿಪುರ್‌ದೌರ್‌ನ ಜೈಗಾಂವ್‌ನಲ್ಲಿ ಶನಿವಾರ ಶಿಕ್ಷಕರೊಬ್ಬರ ಶವ ಅವರ ಜನನಾಂಗವನ್ನು ತುಂಡರಿಸಿ, ಬಾಯಿಯಲ್ಲಿ ತುರುಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಈ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂತಾಬೀರ್ ಲಾಮಾ ಎಂಬ ಶಿಕ್ಷಕ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಖಾಸಗಿ ಶಾಲೆ ನಡೆಸುತ್ತಿದ್ದರು. ಅವರೇ ಇದೀಗ ಕೊಲೆಯಾಗಿದ್ದಾರೆ.

ಮರ್ಮಾಂಗ ಕತ್ತರಿಸಿ ಬಾಯಲ್ಲಿ ತುರುಕಿದ ಹಂತಕರು; ಕೊಲ್ಕತ್ತಾ ಶಿಕ್ಷಕನ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Nov 18, 2024 | 10:20 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಭೀಕರ ಹತ್ಯೆ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಅವರ ಮರ್ಮಾಂಗವನ್ನು ಕತ್ತರಿಸಿ, ಅವರ ಬಾಯೊಳಗೆ ತುರುಕಲಾಗಿದೆ. ಕೊಲ್ಕತ್ತಾದ ಅಲಿಪುರ್ದಾರ್‌ನ ಜಯಗಾಂವ್‌ನಲ್ಲಿ ಜನನಾಂಗಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ ಶಿಕ್ಷಕನ ಮೃತ ದೇಹ ಪತ್ತೆಯಾಗಿದೆ. ವರದಿಗಳ ಪ್ರಕಾರ, ಶಿಕ್ಷಕನ ಗುಪ್ತಾಂಗವನ್ನು ಕತ್ತರಿಸಿ ಬಾಯಿಗೆ ತುರುಕಲಾಗಿದೆ. ಮೃತ ಶಿಕ್ಷಕನ ಹೆಸರು ಶಾಂತಬೀರ್ ಲಾಮಾ.

ಮೃತ ಸಂತಾಬೀರ್ ಲಾಮಾ ಮೂಲತಃ ದಲ್ಸಿಂಗ್‌ಪಾರಾದಿಂದ ಬಂದವರು. ಆದರೆ ಕೆಲವು ವರ್ಷಗಳ ಹಿಂದೆ ಅವರು ಜೈಗಾಂವ್‌ಗೆ ಸ್ಥಳಾಂತರಗೊಂಡಿದ್ದರು. ಅವರು ಸ್ಥಳೀಯ ಚರ್ಚ್‌ನೊಂದಿಗೆ ಸಂಪರ್ಕ ಹೊಂದಿದ್ದರು. ಅವರು ಖಾಸಗಿ ಶಾಲೆಯನ್ನು ನಡೆಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಅವರು ಜೈಗಾಂವ್‌ಗೆ ಬಂದು ವಾಸಿಸಲು ಪ್ರಾರಂಭಿಸಿದರು. ಇಲ್ಲಿ ಖಾಸಗಿ ಶಾಲೆ ನಡೆಸಲು ಆರಂಭಿಸಿದರು. ಆ ಪ್ರದೇಶದಲ್ಲಿ ಖಾಸಗಿ ಶಾಲೆ ನಡೆಸುತ್ತಿದ್ದರು. ಶಾಂತಬೀರ್ ಮೂಲತಃ ಕಲ್ಚಿನಿ ಬ್ಲಾಕ್‌ನ ದಲ್ಸಿಂಗ್‌ಪಾರಾ ನಿವಾಸಿ ಎಂದು ತಿಳಿದುಬಂದಿದೆ. ಕೆಲವು ವರ್ಷಗಳ ಹಿಂದೆ ಅವರು ಜೈಗಾಂವ್‌ಗೆ ಬಂದು ವಾಸಿಸಲು ಪ್ರಾರಂಭಿಸಿದರು.

ಇದನ್ನೂ ಓದಿ: ಕೊಚ್ಚಿ ಹಾಕಿ, ಹೂತು ಹಾಕಿ; ಕೊಲ್ಕತ್ತಾ ರ್ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಅಬ್ಬರ

ಶಾಂತಬೀರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಅವರ ಕುಟುಂಬವು ಕೊಲೆ ಪ್ರಕರಣವನ್ನು ದಾಖಲಿಸಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಲಿಪುರ್ದೂರ್ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಶನಿವಾರ ಬೆಳಗ್ಗೆ ಶಾಲೆಯ ಮುಂಭಾಗದಲ್ಲಿ ಶಾಲಾ ಶಿಕ್ಷಕನ ರಕ್ತಸಿಕ್ತ ಶವ ಪತ್ತೆಯಾಗಿದೆ. ಅವರ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಅಲಿಪುರ್ದೂರ್ ಜಿಲ್ಲೆಯ ಜೈಗಾಂವ್ ಪೊಲೀಸ್ ಠಾಣೆಯು ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ.

ಶಾಂತಬೀರ್ ವಿವಾಹಿತನಾಗಿದ್ದರೂ, ವೈವಾಹಿಕ ಕಲಹಗಳಿಂದಾಗಿ ಅವನು ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಸಿಟ್ಟಿನಿಂದ ಕೊಲೆ ನಡೆದಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಶಿಕ್ಷಕನಿಗೆ ಮದ್ಯ ಮತ್ತು ಜೂಜಾಟದ ಚಟವಿತ್ತು ಎಂಬುದು ಪೊಲೀಸರಿಗೆ ತಿಳಿದು ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ