AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಸಾಮೂಹಿಕ ಅತ್ಯಾಚಾರ, ತೀವ್ರ ರಕ್ತಸ್ರಾವ; ಬಚಾವಾಗಲು ಬೆತ್ತಲೆಯಾಗಿ ಓಡಿದ ಬಾಲಕಿಯ ವಿಡಿಯೋ ವೈರಲ್

ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ.

Shocking News: ಸಾಮೂಹಿಕ ಅತ್ಯಾಚಾರ, ತೀವ್ರ ರಕ್ತಸ್ರಾವ; ಬಚಾವಾಗಲು ಬೆತ್ತಲೆಯಾಗಿ ಓಡಿದ ಬಾಲಕಿಯ ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 22, 2022 | 2:32 PM

Share

ಉತ್ತರ ಪ್ರದೇಶದಲ್ಲಿ ಪ್ರತಿವರ್ಷ ಇಡೀ ದೇಶದಲ್ಲೇ ಅತಿ ಹೆಚ್ಚು ಅತ್ಯಾಚಾರದ ಪ್ರಕರಣಗಳು (Rape Cases) ನಡೆಯುತ್ತವೆ. ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ರಾಜ್ಯವೆಂದು ಕರೆಯಲ್ಪಡುತ್ತಿರುವ ಉತ್ತರ ಪ್ರದೇಶದಲ್ಲಿ (Uttar Pradesh) ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ ವೇಳೆ ಆ ಬಾಲಕಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಸವಾರರು, ಕಾರು ಚಾಲಕರು ತಮ್ಮ ವಾಹನವನ್ನು ನಿಲ್ಲಿಸಿ ಆಕೆಯನ್ನೇ ನೋಡುತ್ತಿರುವ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಇದನ್ನೂ ಓದಿ: Crime News: 16 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಮನೆಗಳು ನೆಲಸಮ

ಈ ಘಟನೆ ನಡೆದ 15 ದಿನಗಳ ನಂತರ ಈ ವಿಡಿಯೋ ಬಹಿರಂಗವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ಸೃಷ್ಟಿಸಿದೆ. 30 ಸೆಕೆಂಡುಗಳ ಈ ವಿಡಿಯೋದಲ್ಲಿ 15 ವರ್ಷದ ಹುಡುಗಿ ರಸ್ತೆಯಲ್ಲಿ ನಗ್ನವಾಗಿ ನಡೆಯುತ್ತಿರುವುದನ್ನು ನೋಡಬಹುದು. ಸಾಕಷ್ಟು ರಕ್ತಸ್ರಾವವಾಗುತ್ತಿದ್ದಾಗ ಆ ಬಾಲಕಿ ನಗ್ನ ಸ್ಥಿತಿಯಲ್ಲಿಯೇ ರಸ್ತೆಯಲ್ಲಿ ನಡೆದುಕೊಂಡು ಸುಮಾರು 2 ಕಿಲೋಮೀಟರ್ ದೂರದಲ್ಲಿರುವ ತನ್ನ ಮನೆಗೆ ತಲುಪಿದ್ದಾಳೆ.

15 ವರ್ಷದ ಬಾಲಕಿ ಅತ್ಯಾಚಾರದ ನಂತರ ಸಂಪೂರ್ಣ ಆಘಾತಕ್ಕೊಳಗಾಗಿದ್ದಳು. ಅವಳ ಆಘಾತದ ಸ್ಥಿತಿಯಲ್ಲಿಯೇ ಅವಳು ತನ್ನ ಮನೆಗೆ ನಗ್ನವಾಗಿ ತೆರಳಲು ನಿರ್ಧರಿಸಿದಳು. ಅತ್ಯಾಚಾರ ನಡೆದ ಸ್ಥಳದಿಂದ 2 ಕಿಲೋಮೀಟರ್ ದೂರದಲ್ಲಿರುವ ತನ್ನ ಮನೆಗೆ ಆಕೆ ನಡೆದುಕೊಂಡೇ ಹೋಗಿದ್ದಾಳೆ. ಕಾಮುಕರು ಆಕೆಯ ಮೈಮೇಲೆ ಸಣ್ಣ ತುಂಡು ಬಟ್ಟೆಯನ್ನೂ ಬಿಟ್ಟಿರಲಿಲ್ಲ. ಆಕೆಯನ್ನು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಹೊರಗೆ ಎಸೆಯಲಾಯಿತು. ಅಲ್ಲಿಂದ ಆಕೆ ನಡೆದುಕೊಂಡು, ಓಡಿಕೊಂಡು ಮನೆ ತಲುಪಿದ್ದಾಳೆ.

ಇದನ್ನೂ ಓದಿ: ಹೈದರಾಬಾದ್: ಬಾಲಕಿಗೆ ಮಾದಕವಸ್ತು ನೀಡಿ ಹೋಟೆಲ್ ಕೊಠಡಿಯಲ್ಲಿ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ದಾರಿಹೋಕರು ಆ ಹುಡುಗಿಗೆ ಸಹಾಯ ಮಾಡುವ ಬದಲು ಮೂಕ ಪ್ರೇಕ್ಷಕರಂತೆ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅಲ್ಲದೆ, ಹಲವರು ಆಕೆ ನಗ್ನವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಮಾಡಿದ್ದಾರೆ. ಆದರೆ, ಇದ್ಯಾವುದರ ಪರಿವೆಯೂ ಇಲ್ಲದ ಆ ಬಾಲಕಿ ಆಘಾತದಿಂದ ತನ್ನಷ್ಟಕ್ಕೆ ತಾನು ಮೈಮೇಲೆ ಪ್ರಜ್ಞೆ ಇಲ್ಲದಂತೆ ನಡೆದುಕೊಂಡು ಹೋಗುತ್ತಲೇ ಇದ್ದಳು.

ಆ ಬಾಲಕಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಸೆಪ್ಟೆಂಬರ್ 7ರಂದು ಎಫ್‌ಐಆರ್ ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ