AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 8 ವರ್ಷದ ಬಾಲಕನ ಗುಪ್ತಾಂಗಕ್ಕೆ ದಾರ ಕಟ್ಟಿ ಚಿತ್ರಹಿಂಸೆ ನೀಡಿದ ವಿದ್ಯಾರ್ಥಿಗಳು!

8 ವರ್ಷದ ಬಾಲಕ ಕಿದ್ವಾಯಿ ನಗರದ ಅಟಲ್ ಅದ್ರಾಶ್ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ. ಆ ಬಾಲಕನ ಗುಪ್ತಾಂಗಕ್ಕೆ ವಿದ್ಯಾರ್ಥಿಗಳು ನೈಲಾನ್ ದಾರವನ್ನು ಕಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Shocking News: 8 ವರ್ಷದ ಬಾಲಕನ ಗುಪ್ತಾಂಗಕ್ಕೆ ದಾರ ಕಟ್ಟಿ ಚಿತ್ರಹಿಂಸೆ ನೀಡಿದ ವಿದ್ಯಾರ್ಥಿಗಳು!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 31, 2022 | 12:39 PM

Share

ನವದೆಹಲಿ: ದೆಹಲಿಯ (Delhi) ಕಿದ್ವಾಯಿ ನಗರ ಪ್ರದೇಶದ ನವದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಡಿಎಂಸಿ) ಶಾಲೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು 8 ವರ್ಷದ ಬಾಲಕನ ಖಾಸಗಿ ಅಂಗಕ್ಕೆ (Private Parts) ನೈಲಾನ್ ದಾರ ಕಟ್ಟಿ ಚಿತ್ರಹಿಂಸೆ ನೀಡಿರುವ ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ಕಳೆದ ಬುಧವಾರ ಈ ಘಟನೆ ನಡೆದಿದೆ. ಆ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಆ 8 ವರ್ಷದ ಬಾಲಕ ಕಿದ್ವಾಯಿ ನಗರದ ಅಟಲ್ ಅದ್ರಾಶ್ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ. ಆ ಬಾಲಕನ ಗುಪ್ತಾಂಗಕ್ಕೆ ವಿದ್ಯಾರ್ಥಿಗಳು ನೈಲಾನ್ ದಾರವನ್ನು ಕಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಡಿಸೆಂಬರ್ 28ರಂದು ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದ ಆತನನ್ನು ಪೋಷಕರು ಪರೀಕ್ಷಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Shocking News: ದೆಹಲಿಯಲ್ಲಿ 12 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ರಾಡ್ ಹಾಕಿದ ಗೆಳೆಯರು!

ಮಗುವಿನ ಗುಪ್ತಾಂಗಕ್ಕೆ ದಾರ ಕಟ್ಟಿದ್ದರಿಂದ ಆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಿಂದ ಪಿಸಿಆರ್ ಕರೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ತನಿಖಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಬಾಲಕನ ಚಿಕಿತ್ಸೆ ಮತ್ತು ಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಸದ್ಯಕ್ಕೆ ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಆತನನ್ನು ನಿಗಾದಲ್ಲಿರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಗುಂಪನ್ನು ಗುರುತಿಸಲು ಬಾಲಕನಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಪೊಲೀಸರು ವಿದ್ಯಾರ್ಥಿಗಳನ್ನು ಗುರುತಿಸಲು ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ