AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆಂಡತಿಯ ರೀಲ್ಸ್​ ಹುಚ್ಚಿನಿಂದ ಬೇಸತ್ತು ಕತ್ತು ಹಿಸುಕಿ ಕೊಂದ ಗಂಡ!

Crime News: ಚಿತ್ರಾಳ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್​ಗಳ ಸಂಖ್ಯೆ ಹೆಚ್ಚಾದ ನಂತರ ಆಕೆ ಇನ್ನಷ್ಟು ಅದಕ್ಕೆ ಅಡಿಕ್ಟ್​ ಆಗಿದ್ದಳು. ತಾನು ದೊಡ್ಡ ನಟಿಯಾಗಬೇಕು ಎಂದು ಬಯಸಿದ ಆಕೆ ಹೆಚ್ಚೆಚ್ಚು ರೀಲ್ಸ್​ಗಳನ್ನು ಮಾಡತೊಡಗಿದಳು.

Shocking News: ಹೆಂಡತಿಯ ರೀಲ್ಸ್​ ಹುಚ್ಚಿನಿಂದ ಬೇಸತ್ತು ಕತ್ತು ಹಿಸುಕಿ ಕೊಂದ ಗಂಡ!
ಕೊಲೆ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 08, 2022 | 11:44 AM

Share

ಚೆನ್ನೈ: ಹೆಂಡತಿ ಸದಾ ಕಾಲ ಸೋಷಿಯಲ್ ಮೀಡಿಯಾ ರೀಲ್ಸ್​ (Reels) ಮಾಡುತ್ತಿರುವುದನ್ನು ನೋಡಿ ಬೇಸತ್ತ ಗಂಡನೊಬ್ಬ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ (Tamil Nadu Crime News) ನಡೆದಿದೆ. ತಮಿಳುನಾಡಿನ 38ರ ಹರೆಯದ ವ್ಯಕ್ತಿಯೊಬ್ಬ ಭಾನುವಾರ ರಾತ್ರಿ ತನ್ನ ಪತ್ನಿಯನ್ನು ಆಕೆಯ ಶಾಲಿನಿಂದ ಉಸಿರುಗಟ್ಟಿಸಿ ಕೊಂದಿದ್ದಾನೆ. ಆಕೆ ಸಾಮಾಜಿಕ ಮಾಧ್ಯಮದಲ್ಲಿ (Social Media) ರೀಲ್‌ಗಳನ್ನು ಮಾಡಲು ದಿನದ ಹೆಚ್ಚು ಸಮಯವನ್ನು ಕಳೆಯುತ್ತಿದ್ದಳು. ಇದರಿಂದ ಆಕೆಯ ಗಂಡ ಕೋಪಗೊಂಡಿದ್ದ. ಇದೇ ಕಾರಣದಿಂದ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹೆಂಡತಿಯನ್ನು ಕೊಂದ ವ್ಯಕ್ತಿಯನ್ನು ಬಂಧಿಸಲಾಗಿದೆ. ದಿಂಡುಗಲ್‌ನ 38 ವರ್ಷದ ಅಮೃತಲಿಂಗಂ ಚಿತ್ರಾಳನ್ನು ಮದುವೆಯಾಗಿ ತಿರುಪುರದ ಸೆಲ್ಲಂ ನಗರದಲ್ಲಿ ವಾಸಿಸುತ್ತಿದ್ದ. ಆ ತೆನ್ನಂ ಪಾಳಯಂ ತರಕಾರಿ ಮಾರುಕಟ್ಟೆಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ.

ಅಮೃತಲಿಂಗಂನ ಪತ್ನಿ ಚಿತ್ರಾ ಅವರು ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗಳನ್ನು ಪೋಸ್ಟ್ ಮಾಡುವ ಅಭ್ಯಾಸವನ್ನು ಹೊಂದಿದ್ದಳು. ರೀಲ್​ಗಳನ್ನು ಪೋಸ್ಟ್ ಮಾಡುವ ಅಭ್ಯಾಸದ ಬಗ್ಗೆ ಅಸಮಾಧಾನಗೊಂಡಿದ್ದ ಅಮೃತಲಿಂಗಂ ತನ್ನ ಹೆಂಡತಿ ಚಿತ್ರಾ ಜೊತೆ ಹಲವಾರು ಬಾರಿ ಜಗಳವಾಡಿದ್ದ. ಇಡೀ ದಿನ ಮೊಬೈಲ್​ನಲ್ಲಿ ಮುಳುಗಿರುವುದಕ್ಕೆ ಕೋಪಗೊಂಡಿದ್ದ.

ಇದನ್ನೂ ಓದಿ: Crime News: ಹೆಂಡ್ತಿಯ ರೀಲ್ಸ್​ ಹುಚ್ಚಿಗೆ ಗಂಡ ಬಲಿಯಾದ..!

ಚಿತ್ರಾಳ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್​ಗಳ ಸಂಖ್ಯೆ ಹೆಚ್ಚಾದ ನಂತರ ಆಕೆ ಇನ್ನಷ್ಟು ಅದಕ್ಕೆ ಅಡಿಕ್ಟ್​ ಆಗಿದ್ದಳು. ತಾನು ದೊಡ್ಡ ನಟಿಯಾಗಬೇಕು ಎಂದು ಬಯಸಿದ ಆಕೆ ಹೆಚ್ಚೆಚ್ಚು ರೀಲ್ಸ್​ಗಳನ್ನು ಮಾಡತೊಡಗಿದಳು. ಎರಡು ತಿಂಗಳ ಹಿಂದೆ ಚೆನ್ನೈಗೆ ತೆರಳಿದ್ದ ಆಕೆಯ ಇನ್​ಸ್ಟಾಗ್ರಾಂ ಖಾತೆಯಲ್ಲಿ 33 ಸಾವಿರ ಫಾಲೋವರ್​ಗಳನ್ನು ಹೊಂದಿದ್ದಳು.

ಗಂಡನಿಂದ ದೂರ ಹೋಗಿ ಚೆನ್ನೈನಲ್ಲಿದ್ದ ಆಕೆ ಕಳೆದ ವಾರ ತನ್ನ ಮಗಳ ಮದುವೆಗೆಂದು ಊರಿಗೆ ವಾಪಾಸ್ ಬಂದಿದ್ದಳು. ಮದುವೆ ಮುಗಿಸಿ ಅವಳು ಚೆನ್ನೈಗೆ ಹೊರಡಲು ತಯಾರಾಗುತ್ತಿದ್ದಳು, ಆದರೆ ಅಮೃತಲಿಂಗಂಗೆ ಅವಳು ಚೆನ್ನೈಗೆ ಹೋಗುವುದು ಇಷ್ಟವಿರಲಿಲ್ಲ. ಚಿತ್ರಾ ರೀಲ್‌ಗಳನ್ನು ಅಪ್‌ಲೋಡ್ ಮಾಡುವ ಬಗ್ಗೆ ಮತ್ತು ಚಲನಚಿತ್ರಗಳಲ್ಲಿ ನಟಿಸಲು ಬಯಸಿದ್ದಕ್ಕೆ ಭಾನುವಾರ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಈ ಜಗಳ ವಿಕೋಪಕ್ಕೆ ತಿರುಗಿದಾಗ ಅಮೃತಲಿಂಗಂ ಚಿತ್ರಾಳ ಕುತ್ತಿಗೆಯನ್ನು ಅವಳ ಶಾಲಿನಿಂದ ಕಟ್ಟಿ ಉಸಿರುಗಟ್ಟಿಸಿ ಕೊಂದಿದ್ದಾನೆ. ಆಕೆ ಮೂರ್ಛೆ ಹೋದಾಗ ಅಮೃತಲಿಂಗಂ ಗಾಬರಿಗೊಂಡು ಮನೆಯಿಂದ ಹೊರಟು ಹೋಗಿದ್ದಾನೆ. ಎದುರು ಸಿಕ್ಕ ಮಗಳ ಬಳಿ ತಾನು ಚಿತ್ರಾಗೆ ಹೊಡೆದಿರುವುದಾಗಿ ಹೇಳಿ ಅಲ್ಲಿಂದ ಹೋಗಿದ್ದಾನೆ.

ಇದನ್ನೂ ಓದಿ: ವ್ಯಕ್ತಿಯ ಬರ್ಬರ ಕೊಲೆ; ಮೃತನ ಪತ್ನಿ ಸೇರಿದಂತೆ ಏಳು ಮಂದಿ ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ

ಅಪ್ಪ-ಅಮ್ಮನ ಜಗಳದ ಬಗ್ಗೆ ತಿಳಿದಿದ್ದ ಮಗಳು ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಸ್ವಲ್ಪ ಹೊತ್ತಾದ ಬಳಿಕ ಅಮ್ಮನನ್ನು ಸಮಾಧಾನ ಮಾಡಲೆಂದು ರೂಮಿಗೆ ಹೋದ ಆಕೆ ಚಿತ್ರಾಳನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆಕೆ ಸಾವನ್ನಪ್ಪಿರುವುದು ಬಯಲಾಗಿದೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ ಆಕೆ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ. ಪೆರುಮಾನಲ್ಲೂರಿನಲ್ಲಿ ಅಮೃತಲಿಂಗಂನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ