AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮೊಬೈಲ್ ಹಾಟ್​ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ!

Murder News Today: ಹರಿಯಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ರೋಹ್ಟಕ್‌ನಲ್ಲಿ ಮೊಬೈಲ್ ಹಾಟ್‌ಸ್ಪಾಟ್ ಹಂಚಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಪತ್ನಿಯನ್ನು ಚೂಪಾದ ಆಯುಧದಿಂದ ಇರಿದು ಕೊಂದಿದ್ದಾನೆ. ಈ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Crime News: ಮೊಬೈಲ್ ಹಾಟ್​ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 02, 2024 | 9:33 PM

Share

ರೋಹ್ಟಕ್: ಆಘಾತಕಾರಿ ಘಟನೆಯಲ್ಲಿ ಜುಲೈ 30ರಂದು ಹರಿಯಾಣದ ರೋಹ್ಟಕ್‌ನಲ್ಲಿ ತನ್ನ ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಹೆಂಡತಿಯನ್ನು ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಹರಿಯಾಣದ ರೋಹ್ಟಕ್‌ನಲ್ಲಿ ತನ್ನ ಹೆಂಡತಿಯನ್ನು ಗಂಡ ಹರಿತವಾದ ಆಯುಧದಿಂದ ಕೊಂಡಿದ್ದಾನೆ. ವರದಿಗಳ ಪ್ರಕಾರ, ಕೌಟುಂಬಿಕ ವೈಷಮ್ಯದಿಂದ ಕೊಲೆಯಾದ ಬಗ್ಗೆ ಪೊಲೀಸರು ಮಾಹಿತಿ ಪಡೆದ ತಕ್ಷಣ, ಅವರು ಅಪರಾಧ ನಡೆದ ಸ್ಥಳಕ್ಕೆ ತಲುಪಿ ಮಹಿಳೆಯ ಶವವನ್ನು ವಶಕ್ಕೆ ತೆಗೆದುಕೊಂಡರು.

ತನಿಖೆ ವೇಳೆ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಹಾಗೂ ಆತನ ಪತ್ನಿ ರೇಖಾ ಮನೆಯಲ್ಲಿ ಮೊಬೈಲ್ ಬಳಸುತ್ತಿರುವುದು ಪತ್ತೆಯಾಗಿದೆ. ಈ ಸಮಯದಲ್ಲಿ, ಅಜಯ್ ಅವರ ಮೊಬೈಲ್ ಡೇಟಾ ಖಾಲಿಯಾದಾಗ ತನ್ನ ಹೆಂಡತಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಕೇಳಿದ್ದಾನೆ. ಆದರೆ, ಇಬ್ಬರ ನಡುವೆ ಜಗಳವಾಗಿದ್ದರಿಂದ ಆಕೆ ವೈಫೈ ಆನ್ ಮಾಡಲು ಒಪ್ಪಿಲ್ಲ.

ಇದನ್ನೂ ಓದಿ: Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ

ಇದೇ ಕಾರಣಕ್ಕೆ ಮತ್ತೆ ಜಗಳವಾಗಿದೆ. ಪೊಲೀಸರ ಪ್ರಕಾರ, ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದರು. ನನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ, ಹೀಗಾಗಿ ವೈಫೈ ಆನ್ ಮಾಡುವುದಿಲ್ಲ ಎಂದು ಆಕೆ ಹೇಳಿದರು. ಇದರಿಂದ ಕೋಪಗೊಂಡ ಅಜಯ್ ಪತ್ನಿಯನ್ನು ಹರಿತವಾದ ಆಯುಧದಿಂದ ಕೊಂದು ಪರಾರಿಯಾಗಿದ್ದಾನೆ.

ರೇಖಾ ಕುಟುಂಬದವರ ಹೇಳಿಕೆ ಆಧರಿಸಿ ಆರೋಪಿ ಅಜಯ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಕೆಲ ಗಂಟೆಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಕೊಲೆಗೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ